Bible

John 8 - KANNADA (Bengali)

1 ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.এরপর যীশু সেখান থেকে জৈতুন পর্বতমালায় চলে গেলেন৷

2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.খুব ভোরে তিনি আবার মন্দিরে ফিরে গেলে লোকেরা আবার তাঁর কাছে এসে জড়ো হল, তখন তিনি সেখানে বসে তাদের কাছে শিক্ষা দিতে শুরু করলেন৷

3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿসেই সময় ব্যবস্থার শিক্ষকরা ও ফরীশীরা, ব্যভিচার করতে গিয়ে ধরা পড়েছে এমন একজন স্ত্রীলোককে তাঁর কাছে নিয়ে এল৷ তারা সেই স্ত্রীলোককে তাদের মাঝখানে দাঁড় করিয়ে যীশুকে বলল,

4 ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.‘গুরু, এই স্ত্রীলোকটি ব্যভিচার করার সময় হাতে নাতেই ধরা পড়েছে৷

5 ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.বিধি-ব্যবস্থার মধ্যে মোশি আমাদের বলছেন, এই ধরণের স্ত্রীলোককে য়েন আমরা পাথর ছুঁড়ে মেরে ফেলি৷ এখন আপনি এবিষয়ে কি বলবেন?’

6 ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.তাঁকে পরীক্ষা করার ছলেই তারা একথা বলছিল, যাতে তাঁর বিরুদ্ধে কোন অভিযোগ তারা খুঁজে পায়৷ কিন্তু যীশু হেঁট হয়ে মাটিতে আঙ্গুল দিয়ে লিখতে লাগলেন৷

7 ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.ইহুদী নেতারা যখন বার বার তাঁকে জিজ্ঞেস করতে লাগল, তখন তিনি সোজা হয়ে বসলেন এবং বললেন, ‘তোমাদের মধ্যে য়ে নিস্পাপ সেই প্রথম একে পাথর মারুক৷’

8 ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.এরপর তিনি আবার হেঁট হয়ে আঙ্গুল দিয়ে মাটিতে লিখতে লাগলেন৷

9 ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.তারা ঐ কথা শোনার পর বুড়ো লোক থেকে শুরু করে সকলে এক এক করে সেখান থেকে চলে গেল৷ কেবল যীশু সেখানে একা থাকলেন আর সেই স্ত্রীলোকটি মাঝখানে দাঁড়িয়ে ছিল৷

10 ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.তখন যীশু মাথা তুলে সেই স্ত্রীলোকটিকে বললেন, ‘হে নারী, তারা সব কোথায়? কেউ কি তোমায় দোষী সাব্যস্ত করল না?’

11 ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.স্ত্রীলোকটি উত্তর দিল, ‘কেউ করে নি, মহাশয়৷’ তখন যীশু বললেন, ‘আমিও তোমায় দোষী করছি না, যাও এখন থেকে আর পাপ কোরো না৷’

12 ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.এরপর যীশু আবার লোকদের সাথে কথা বলতে শুরু করলেন এবং বললেন, ‘আমিই জগতের আলো৷ য়ে কেউ আমার অনুসারী হয় সে কখনও অন্ধকারে থাকবে না; কিন্তু সেই আলো পাবে যা জীবন দেয়৷’

13 ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.তখন ফরীশীরা তাঁকে বলল, ‘তুমি নিজেই নিজের বিষয়ে সাক্ষ্য দিচ্ছ৷ তোমার সাক্ষ্য গ্রাহ্য হবে না৷’

14 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.এর উত্তরে যীশু তাদের বললেন, ‘আমি যদি নিজের পক্ষে সাক্ষ্য দিই, তবু আমার সাক্ষ্য সত্য, কারণ আমি জানি আমি কোথা থেকে এসেছি, আর কোথায় বা যাচ্ছি; কিন্তু আমি কোথা থেকে এসেছি বা কোথায় যাচ্ছি তা তোমরা জানো না৷

15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.মানুষের বিচারবোধের মাপকাঠিতে তোমরা আমার বিচার করছ৷ আমি কারো বিচার করি না৷

16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.কিন্তু আমি যদি বিচার করি, তবে আমার বিচার সত্য, কারণ আমি একা নই৷ পিতা, যিনি আমাকে পাঠিয়েছেন তিনি আমার সঙ্গেই আছেন৷

17 ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.তোমাদের নিয়মে লেখা আছে, যখন দুই ব্যক্তি একই সাক্ষ্য দেয় তখন তা সত্যি৷

18 ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.আমি নিজেই নিজের বিষয়ে সাক্ষ্য দিই৷ আর পিতা, যিনি আমায় পাঠিয়েছেন তিনিও আমার বিষয়ে সাক্ষ্য দেন৷’

19 ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.তখন তারা তাঁকে জিজ্ঞেস করল, ‘তোমার পিতা কোথায়?’যীশু বললেন, ‘তোমরা না জানো আমাকে, না জানো আমার পিতাকে৷ তোমরা যদি আমাকে জানতে, তবে আমার পিতাকেও জানতে৷’

20 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.মন্দিরের দানের বাক্সের কাছে দাঁড়িয়ে শিক্ষা দেবার সময় যীশু এইসব কথা বললেন৷ কিন্তু কেউ তাঁকে গ্রেপ্তার করল না, কারণ তখনও তাঁর নিরূপিত সময় আসে নি৷

21 ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.তিনি তাদের আর একবার বললেন, ‘আমি যাচ্ছি, আর তোমরা আমার খোঁজ করবে; কিন্তু তোমরা তোমাদের পাপেই মরবে৷ আমি য়েখানে যাচ্ছি তোমরা সেখানে আসতে পারবে না৷’

22 ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.তখন ইহুদীরা বলছিল, ‘তিনি কি আত্মহত্যা করতে যাচ্ছেন? কেন তিনি বললেন, ‘আমি য়েখানে যাচ্ছি তোমরা সেখানে আসতে পারবে না?”

23 ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.যীশু তাদের বললেন, ‘তোমরা এই নিম্নলোকের আর আমি উর্দ্ধলোকের৷ তোমরা এজগতের, আমি এ জগতের নই৷

24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.তাই আমি তোমাদের বলছি, তোমরা তোমাদের পাপেই মরবে৷ তোমরা যদি বিশ্বাস না কর য়ে আমিই তিনি, তবে তোমরা তোমাদের পাপের জন্যই মরবে৷’

25 ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.তখন তারা জিজ্ঞেস করল, ‘তুমি কে?’যীশু তাদের বললেন, ‘আমি যা, তা তো শুরু থেকেই তোমাদের বলে আসছি৷

26 ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.তোমাদের বিষয়ে বলার ও বিচার করার অনেক কিছুই আমার আছে৷ যা হোক যিনি আমায় পাঠিয়েছেন তিনি সত্য৷ আর আমি তাঁর কাছ থেকে যা কিছু শুনি, পৃথিবীর মানুষের কাছে তাই বলি৷’

27 ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.তারা বুঝতে পারে নি য়ে, তিনি তাদের কাছে পিতার বিষয়ে বলছেন৷

28 ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.তখন যীশু তাদের বললেন, ‘যখন তোমরা মানবপুত্রকে উঁচুতে তুলবে, তখন জানবে য়ে আমিই তিনি এবং আমি নিজের থেকে কিছুই করি না৷ পিতা য়েমন আমায় শিখিয়েছেন, আমি সেরকমই বলছি৷

29 ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.আর যিনি আমায় পাঠিয়েছেন, তিনি আমার সঙ্গে আছেন৷ তিনি আমাকে একা ফেলে রাখেন নি, কারণ আমি সব সময় সন্তোষজনক কাজই করি৷’

30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.যীশু যখন এইসব কথা বললেন তখন অনেকেরই তাঁর ওপর বিশ্বাস হল৷

31 ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.ইহুদীদের মধ্যে যাঁরা তাঁর ওপর বিশ্বাস করল, তাদের উদ্দেশ্যে যীশু বললেন, ‘তোমরা যদি সকলে আমার শিক্ষা মান্য করে চল তবে তোমরা সকলেই আমার প্রকৃত শিষ্য৷

32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.তোমরা সত্যকে জানবে, আর সেই সত্য তোমাদের স্বাধীন করবে৷’

33 ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.তারা তাঁকে বলল, ‘আমরা অব্রাহামের বংশধর৷ আর আমরা কখনও কারোর দাসে পরিণত হই নি৷ আপনি কিভাবে বলছেন য়ে আমাদের স্বাধীন করা হবে?’

34 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.এর উত্তরে যীশু তাদের বললেন, ‘আমি তোমাদের সত্যি বলছি-য়ে ক্রমাগত পাপ করে চলে, সে পাপের দাস৷

35 ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.কোন দাস পরিবারের স্থাযী সদস্য হয়ে থাকতে পারে না; কিন্তু পুত্র পরিবারে চিরকাল থাকে৷

36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.তাই পুত্র যদি তোমাদের স্বাধীন করে, তবে তোমরা প্রকৃতই স্বাধীন হবে৷

37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.আমি জানি তোমরা অব্রাহামের বংশধর; কিন্তু তোমরা আমাকে হত্যা করার চেষ্টা করছ, কারণ তোমরা আমার শিক্ষাগ্রহণ করো না৷

38 ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.আমি আমার পিতার কাছে যা দেখেছি সেই বিষয়েই বলে থাকি, আর তোমরা তোমাদের পিতার কাছ থেকে যা যা শুনেছ তাই তো করে থাক৷’

39 ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.এর জবাবে তারা তাঁকে বলল, ‘আমাদের পিতা অব্রাহাম৷’যীশু তাদের বললেন, ‘তোমরা যদি অব্রাহামের সন্তান হতে, তাহলে অব্রাহাম যা করেছেন তোমরাও তাই করতে;

40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.কিন্তু এখন তোমরা আমায় হত্যা করতে চাইছ৷ আমি সেই লোক য়ে ঈশ্বরের কাছ থেকে সত্য শুনেছি এবং তোমাদের তা বলেছি৷ অব্রাহাম তো এরকম কাজ করেন নি৷

41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.তোমাদের পিতা য়ে কাজ করে, তোমরা তাই করো৷’তখন তারা তাঁকে বলল, ‘আমরা জারজ সন্তান নই৷ ঈশ্বর হচ্ছেন আমাদের একমাত্র পিতা৷’

42 ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.যীশু তাদের বললেন, ‘ঈশ্বর যদি তোমাদের পিতা হতেন, তাহলে তোমরা আমায় ভালবাসতে, কারণ আমি ঈশ্বরের কাছ থেকে এসেছি আর এখন তোমাদের মাঝে এখানে আছি৷ আমি নিজে থেকে আসিনি, ঈশ্বর আমায় পাঠিয়েছেন৷

43 ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.আমি যা বলি, তোমরা তা বুঝতে পারো না? কারণ তোমরা আমার কথা গ্রহণ করো না৷

44 ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾদিযাবল তোমাদের পিতা এবং তোমরা তার পুত্র৷ তোমরা তোমাদের পিতার ইচ্ছাই পূর্ণ করতে চাও৷ দিযাবল শুরু থেকেই খুনী; আর সত্যের পক্ষে সে কখনও দাঁড়ায় নি, কারণ তার মধ্যে তো সত্যের লেশমাত্র নেই৷ সে যখন মিথ্যা কথা বলে, তখন স্বাভাবিকভাবেই তার মধ্য থেকে তা বের হয়, কারণ সে মিথ্যাবাদী ও মিথ্যার পিতা৷

45 ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.আমি সত্য বলি বলে তোমরা আমায় বিশ্বাস করো না৷

46 ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?তোমাদের মধ্যে কে আমাকে পাপী বলে দোষী করতে পারে? আমি যখন সত্য বলছি তখন তোমরা কেন বিশ্বাস করছ না?

47 ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.য়ে ঈশ্বরের লোক, সে ঈশ্বরের কথা শোনে৷ আর এই কারণেই তোমরা শুনতে চাও না, কারণ তোমরা ঈশ্বরের নও৷’

48 ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.এর উত্তরে ইহুদীরা বলল, ‘আমরা কি ঠিক বলিনি য়ে তুমি একজন শমরীয়, আর তোমার মধ্যে এক ভূত রয়েছে?’

49 ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.যীশু জবাব দিলেন, ‘দেখ, আমায় ভূতে গ্রাস করে নি, বরং আমি আমার পিতাকে সম্মান করি৷ কিন্তু তোমরা আমার অসম্মান করেছ৷

50 ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.আমি নিজের জন্য সম্মান চাইছি না৷ একজন আছেন যিনি আমার জন্য সম্মান চান, তিনিই বিচার করেন৷

51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.আমি তোমাদের সত্যি বলছি, কেউ যদি আমার শিক্ষা অনুসারে চলে, সে কখনও মরবে না৷’

52 ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;ইহুদীরা তাঁকে বলল, ‘এখন আমরা বুঝেছি য়ে তোমায় ভূতে গ্রাস করেছে৷ অব্রাহাম ও ভাববাদীরা মারা গেছে আর তুমি বলছ, ‘যদি কেউ আমার শিক্ষা অনুসারে চলে, তবে সে মৃত্যুর আস্বাদ পাবে না৷’

53 ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲುতুমি কি মনে কর য়ে তুমি আমাদের পূর্বপুরুষ অব্রাহামের চেয়ে মহান? অব্রাহাম মারা গেছেন, আর ভাববাদীরাও মারা গেছেন৷ তুমি নিজেকে কি মনে করছ?’

54 ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.এর উত্তরে যীশু বললেন, ‘আমি যদি নিজেকে সম্মানিত করি তবে সেই সম্মানের কোন মূল্য নেই৷ যিনি আমায় সম্মানিত করেন তিনি আমাদের পিতা, য়াঁর সম্পর্কে তোমরা বল, তিনি আমাদের ঈশ্বর৷’

55 ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.আর তোমরা তাঁকে জানো না, কিন্তু আমি তাঁকে জানি৷ আমি যদি বলি য়ে আমি তাঁকে জানি না, তাহলে আমি তোমাদেরই মতো মিথ্যাবাদী হয়ে যাবো৷ কিন্তু আমি তাঁকে অবশ্যই জানি, আর তিনি যা কিছু বলেন আমি সে সকল পালন করি৷

56 ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.তোমাদের পিতৃপুরুষ অব্রাহাম আমার আগমনের দিন দেখতে পাবেন বলে খুশী হয়েছিলেন৷ তিনি সেই দিন দেখে খুশী হয়েছিলেন৷’

57 ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.তখন ইহুদীরা তাঁকে বলল, ‘তোমার বয়স এখনও পঞ্চাশ বছর হয়নি আর তুমি বলছ য়ে তুমি অব্রাহামকে দেখেছ!’

58 ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.যীশু তাদের বললেন, ‘আমি তোমাদের সত্যি বলছি৷ অব্রাহামের জন্মের আগে থেকেই আমি আছি৷’

59 ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.তখন তারা তাঁকে পাথর ছুঁড়ে মারবার জন্য পাথর তুলে নিল; কিন্তু যীশু নিজেকে লুকিয়ে ফেললেন ও মন্দির চত্বর ছেড়ে চলে গেলেন৷

Bengali Bible