Bible

John 8 - KANNADA (Hindi)

1 ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋದನು.परन्तु यीशु जैतून के पहाड़ पर गया।

2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.और भोर को फिर मन्दिर में आया, और सब लोग उसके पास आए; और वह बैठकर उन्हें उपदेश देने लगा।

3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿतब शास्त्री और फरीसी एक स्त्री को लाए, जो व्यभिचार में पकड़ी गई थी, और उस को बीच में खड़ी करके यीशु से कहा।

4 ಆತನಿಗೆ -- ಬೋಧಕನೇ, ಈ ಹೆಂಗಸು ವ್ಯಭಿಚಾರ ಮಾಡುವಾಗಲೇ ಹಿಡಿಯ ಲ್ಪಟ್ಟಳು.हे गुरू, यह स्त्री व्यभिचार करते ही पकड़ी गई है।

5 ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.व्यवस्था में मूसा ने हमें आज्ञा दी है कि ऐसी स्त्रियों को पत्थरवाह करें: सो तू इस स्त्री के विषय में क्या कहता है?

6 ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.उन्होंने उस को परखने के लिये यह बात कही ताकि उस पर दोष लगाने के लिये कोई बात पाएं, परन्तु यीशु झुककर उंगली से भूमि पर लिखने लगा।

7 ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.जब वे उस से पूछते रहे, तो उस ने सीधे होकर उन से कहा, कि तुम में जो निष्पाप हो, वही पहिले उस को पत्थर मारे।

8 ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.और फिर झुककर भूमि पर उंगली से लिखने लगा।

9 ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.परन्तु वे यह सुनकर बड़ों से लेकर छोटों तक एक एक करके निकल गए, और यीशु अकेला रह गया, और स्त्री वहीं बीच में खड़ी रह गई।

10 ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.यीशु ने सीधे होकर उस से कहा, हे नारी, वे कहां गए? क्या किसी ने तुझ पर दंड की आज्ञा न दी।

11 ಅದಕ್ಕೆ ಆಕೆಯು-- ಕರ್ತನೇ, ಯಾರೂ ವಿಧಿಸಲಿಲ್ಲ ಅಂದಳು. ಯೇಸು ಆಕೆಗೆ--ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಅಂದನು.उस ने कहा, हे प्रभु, किसी ने नहीं: यीशु ने कहा, मैं भी तुझ पर दंड की आज्ञा नहीं देता; जा, और फिर पाप न करना॥

12 ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.तब यीशु ने फिर लोगों से कहा, जगत की ज्योति मैं हूं; जो मेरे पीछे हो लेगा, वह अन्धकार में न चलेगा, परन्तु जीवन की ज्योति पाएगा।

13 ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.फरीसियों ने उस से कहा; तू अपनी गवाही आप देता है; तेरी गवाही ठीक नहीं।

14 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.यीशु ने उन को उत्तर दिया; कि यदि मैं अपनी गवाही आप देता हूं, तौभी मेरी गवाही ठीक है, क्योंकि मैं जानता हूं, कि मैं कहां से आया हूं और कहां को जाता हूं परन्तु तुम नहीं जानते कि मैं कहां से आता हूं या कहां को जाता हूं।

15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.तुम शरीर के अनुसार न्याय करते हो; मैं किसी का न्याय नहीं करता।

16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.और यदि मैं न्याय करूं भी, तो मेरा न्याय सच्चा है; क्योंकि मैं अकेला नहीं, परन्तु मैं हूं, और पिता है जिस ने मुझे भेजा।

17 ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.और तुम्हारी व्यवस्था में भी लिखा है; कि दो जनों की गवाही मिलकर ठीक होती है।

18 ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.एक तो मैं आप अपनी गवाही देता हूं, और दूसरा पिता मेरी गवाही देता है जिस ने मुझे भेजा।

19 ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.उन्होंने उस से कहा, तेरा पिता कहां है? यीशु ने उत्तर दिया, कि न तुम मुझे जानते हो, न मेरे पिता को, यदि मुझे जानते, तो मेरे पिता को भी जानते।

20 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ಬೊಕ್ಕಸದ ಬಳಿಯಲ್ಲಿ ಈ ಮಾತುಗಳನ್ನು ಆಡಿದನು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಯಾರೂ ಆತನ ಮೇಲೆ ಕೈಹಾಕಲಿಲ್ಲ.ये बातें उस ने मन्दिर में उपदेश देते हुए भण्डार घर में कहीं, और किसी ने उसे न पकड़ा; क्योंकि उसका समय अब तक नहीं आया था॥

21 ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.उस ने फिर उन से कहा, मैं जाता हूं और तुम मुझे ढूंढ़ोगे और अपने पाप में मरोगे: जहां मैं जाता हूं, वहां तुम नहीं आ सकते।

22 ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.इस पर यहूदियों ने कहा, क्या वह अपने आप को मार डालेगा, जो कहता है; कि जहां मैं जाता हूं वहां तुम नहीं आ सकते?

23 ಆತನು ಅವರಿಗೆ--ನೀವು ಕೆಳಗಿನವರು, ನಾನು ಮೇಲಿನವನು; ನೀವು ಈ ಲೋಕದವರು, ನಾನು ಈ ಲೋಕದವನಲ್ಲ.उस ने उन से कहा, तुम नीचे के हो, मैं ऊपर का हूं; तुम संसार के हो, मैं संसार का नहीं।

24 ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.इसलिये मैं ने तुम से कहा, कि तुम अपने पापों में मरोगे; क्योंकि यदि तुम विश्वास न करोगे कि मैं वहीं हूं, तो अपने पापों में मरोगे।

25 ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.उन्होंने उस से कहा, तू कौन है यीशु ने उन से कहा, वही हूं जो प्रारम्भ से तुम से कहता आया हूं।

26 ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.तुम्हारे विषय में मुझे बहुत कुछ कहना और निर्णय करना है परन्तु मेरा भेजनेवाला सच्चा है; और जो मैं ने उस से सुना हे, वही जगत से कहता हूं।

27 ಆತನು ತಂದೆಯ ವಿಷಯವಾಗಿ ತಮ್ಮ ಸಂಗಡ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.वे न समझे कि हम से पिता के विषय में कहता है।

28 ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.तब यीशु ने कहा, कि जब तुम मनुष्य के पुत्र को ऊंचे पर चढ़ाओगे, तो जानोगे कि मैं वही हूं, और अपने आप से कुछ नहीं करता, परन्तु जैसे पिता ने मुझे सिखाया, वैसे ही ये बातें कहता हूं।

29 ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.और मेरा भेजनेवाला मेरे साथ है; उस ने मुझे अकेला नहीं छोड़ा; क्योंकि मैं सर्वदा वही काम करता हूं, जिस से वह प्रसन्न होता है।

30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.वह ये बातें कह ही रहा था, कि बहुतेरों ने उस पर विश्वास किया॥

31 ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.तब यीशु ने उन यहूदियों से जिन्हों ने उन की प्रतीति की थी, कहा, यदि तुम मेरे वचन में बने रहोगे, तो सचमुच मेरे चेले ठहरोगे।

32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.और सत्य को जानोगे, और सत्य तुम्हें स्वतंत्र करेगा।

33 ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.उन्होंने उस को उत्तर दिया; कि हम तो इब्राहीम के वंश से हैं और कभी किसी के दास नहीं हुए; फिर तू क्योंकर कहता है, कि तुम स्वतंत्र हो जाओगे?

34 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ--ಪಾಪ ಮಾಡುವವನು ಪಾಪಕ್ಕೆ ಗುಲಾಮನಾಗಿದ್ದಾನೆ.यीशु ने उन को उत्तर दिया; मैं तुम से सच सच कहता हूं कि जो कोई पाप करता है, वह पाप का दास है।

35 ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.और दास सदा घर में नहीं रहता; पुत्र सदा रहता है।

36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.सो यदि पुत्र तुम्हें स्वतंत्र करेगा, तो सचमुच तुम स्वतंत्र हो जाओगे।

37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು; ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.मैं जानता हूं कि तुम इब्राहीम के वंश से हो; तौभी मेरा वचन तुम्हारे ह्रृदय में जगह नहीं पाता, इसलिये तुम मुझे मार डालना चाहते हो।

38 ನನ್ನ ತಂದೆಯ ಬಳಿ ಯಲ್ಲಿ ನಾನು ನೋಡಿದ್ದನ್ನೇ ಮಾತನಾಡುತ್ತೇನೆ; ನೀವು ನಿಮ್ಮ ತಂದೆಯ ಬಳಿಯಲ್ಲಿ ನೋಡಿದ್ದನ್ನು ಮಾಡುತ್ತೀರಿ ಅಂದನು.मैं वही कहता हूं, जो अपने पिता के यहां देखा है; और तुम वही करते रहते हो जो तुमने अपने पिता से सुना है।

39 ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.उन्होंने उन को उत्तर दिया, कि हमारा पिता तो इब्राहीम है: यीशु ने उन से कहा; यदि तुम इब्राहीम के सन्तान होते, तो इब्राहीम के समान काम करते।

40 ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.परन्तु अब तुम मुझ ऐसे मनुष्य को मार डालना चाहते हो, जिस ने तुम्हें वह सत्य वचन बताया जो परमेश्वर से सुना, यह तो इब्राहीम ने नहीं किया था।

41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.तुम अपने पिता के समान काम करते हो: उन्होंने उस से कहा, हम व्यभिचार से नहीं जन्मे; हमारा एक पिता है अर्थात परमेश्वर।

42 ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.यीशु ने उन से कहा; यदि परमेश्वर तुम्हारा पिता होता, तो तुम मुझ से प्रेम रखते; क्योंकि मैं परमेश्वर में से निकल कर आया हूं; मैं आप से नहीं आया, परन्तु उसी ने मुझे भेजा।

43 ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ.तुम मेरी बात क्यों नहीं समझते? इसलिये कि मेरा वचन सुन नहीं सकते।

44 ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾतुम अपने पिता शैतान से हो, और अपने पिता की लालसाओं को पूरा करना चाहते हो। वह तो आरम्भ से हत्यारा है, और सत्य पर स्थिर न रहा, क्योंकि सत्य उस में है ही नहीं: जब वह झूठ बोलता, तो अपने स्वभाव ही से बोलता है; क्योंकि वह झूठा है, वरन झूठ का पिता है।

45 ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.परन्तु मैं जो सच बोलता हूं, इसीलिये तुम मेरी प्रतीति नहीं करते।

46 ನನ್ನಲ್ಲಿ ಪಾಪವಿದೆ ಎಂದು ನಿಮ್ಮಲ್ಲಿ ಯಾರು ಸ್ಥಾಪಿಸುವಿರಿ? ಮತ್ತು ನಾನು ಸತ್ಯವನ್ನು ಹೇಳಿದರೆ ನೀವು ನನ್ನನ್ನು ಯಾಕೆ ನಂಬುವದಿಲ್ಲ?तुम में से कौन मुझे पापी ठहराता है? और यदि मैं सच बोलता हूं, तो तुम मेरी प्रतीति क्यों नहीं करते?

47 ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.जो परमेश्वर से होता है, वह परमेश्वर की बातें सुनता है; और तुम इसलिये नहीं सुनते कि परमेश्वर की ओर से नहीं हो।

48 ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.यह सुन यहूदियों ने उस से कहा; क्या हम ठीक नहीं कहते, कि तू सामरी है, और तुझ में दुष्टात्मा है?

49 ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.यीशु ने उत्तर दिया, कि मुझ में दुष्टात्मा नहीं; परन्तु मैं अपने पिता का आदर करता हूं, और तुम मेरा निरादर करते हो।

50 ಇದಲ್ಲದೆ ನಾನು ನನ್ನ ಸ್ವಂತ ಮಹಿಮೆಯನ್ನು ಹುಡುಕುವದಿಲ್ಲ; ಆದರೆ ಹುಡುಕು ವವನೂ ನ್ಯಾಯತೀರಿಸುವವನೂ ಒಬ್ಬನಿದ್ದಾನೆ.परन्तु मैं अपनी प्रतिष्ठा नहीं चाहता, हां, एक तो है जो चाहता है, और न्याय करता है।

51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.मैं तुम से सच सच कहता हूं, कि यदि कोई व्यक्ति मेरे वचन पर चलेगा, तो वह अनन्त काल तक मृत्यु को न देखेगा।

52 ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;यहूदियों ने उस से कहा, कि अब हम ने जान लिया कि तुझ में दुष्टात्मा है: इब्राहीम मर गया, और भविष्यद्वक्ता भी मर गए हैं और तू कहता है, कि यदि कोई मेरे वचन पर चलेगा तो वह अनन्त काल तक मृत्यु का स्वाद न चखेगा।

53 ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲುहमारा पिता इब्राहीम तो मर गया, क्या तू उस से बड़ा है? और भविष्यद्वक्ता भी मर गए, तू अपने आप को क्या ठहराता है।

54 ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.यीशु ने उत्तर दिया; यदि मैं आप अपनी महिमा करूं, तो मेरी महिमा कुछ नहीं, परन्तु मेरी महिमा करनेवाला मेरा पिता है, जिसे तुम कहते हो, कि वह हमारा परमेश्वर है।

55 ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.और तुम ने तो उसे नहीं जाना: परन्तु मैं उसे जानता हूं; और यदि कहूं कि मैं उसे नहीं जानता, तो मैं तुम्हारी नाईं झूठा ठहरूंगा: परन्तु मैं उसे जानता हूं, और उसके वचन पर चलता हूं।

56 ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.तुम्हारा पिता इब्राहीम मेरा दिन देखने की आशा से बहुत मगन था; और उस ने देखा, और आनन्द किया।

57 ಆಗ ಯೆಹೂದ್ಯರು ಆತ ನಿಗೆ--ನಿನಗೆ ಇನ್ನೂ ಐವತ್ತು ವರುಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯೋ ಅಂದರು.यहूदियों ने उस से कहा, अब तक तू पचास वर्ष का नहीं; फिर भी तू ने इब्राहीम को देखा है?

58 ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.यीशु ने उन से कहा; मैं तुम से सच सच कहता हूं; कि पहिले इसके कि इब्राहीम उत्पन्न हुआ मैं हूं।

59 ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.तब उन्होंने उसे मारने के लिये पत्थर उठाए, परन्तु यीशु छिपकर मन्दिर से निकल गया॥

Hindi Bible