Bible

Mark 7 - KANNADA (Hindi)

1 ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.तब फरीसी और कई एक शास्त्री जो यरूशलेम से आए थे, उसके पास इकट्ठे हुए।

2 ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.और उन्होंने उसके कई एक चेलों को अशुद्ध अर्थात बिना हाथ धोए रोटी खाते देखा।

3 ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.क्योंकि फरीसी और सब यहूदी, पुरनियों की रीति पर चलते हैं और जब तक भली भांति हाथ नहीं धो लेते तब तक नहीं खाते।

4 ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.और बाजार से आकर, जब तक स्नान नहीं कर लेते, तब तक नहीं खाते; और बहुत सी और बातें हैं, जो उन के पास मानने के लिये पहुंचाई गई हैं, जैसे कटोरों, और लोटों, और तांबे के बरतनों को धोना-मांझना।

5 ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.इसलिये उन फरीसियों और शास्त्रियों ने उस से पूछा, कि तेरे चेले क्यों पुरनियों की रीतों पर नहीं चलते, और बिना हाथ धोए रोटी खाते हैं?

6 ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;उस ने उन से कहा; कि यशायाह ने तुम कपटियों के विषय में बहुत ठीक भविष्यद्ववाणी की; जैसा लिखा है; कि ये लोग होठों से तो मेरा आदर करते हैं, पर उन का मन मुझ से दूर रहता है।

7 ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.और ये व्यर्थ मेरी उपासना करते हैं, क्योंकि मनुष्यों की आज्ञाओं को धर्मोपदेश करके सिखाते हैं।

8 ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.क्योंकि तुम परमेश्वर की आज्ञा को टालकर मनुष्यों की रीतियों को मानते हो।

9 ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.और उस ने उन से कहा; तुम अपनी रीतियों को मानने के लिये परमेश्वर आज्ञा कैसी अच्छी तरह टाल देते हो!

10 ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.क्योंकि मूसा ने कहा है कि अपने पिता और अपनी माता का आदर कर; ओर जो कोई पिता वा माता को बुरा कहे, वह अवश्य मार डाला जाए।

11 ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;परन्तु तुम कहते हो कि यदि कोई अपने पिता वा माता से कहे, कि जो कुछ तुझे मुझ से लाभ पहुंच सकता था, वह कुरबान अर्थात संकल्प हो चुका।

12 ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆतो तुम उस को उसके पिता वा उस की माता की कुछ सेवा करने नहीं देते।

13 ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.इस प्रकार तुम अपनी रीतियों से, जिन्हें तुम ने ठहराया है, परमेश्वर का वचन टाल देते हो; और ऐसे ऐसे बहुत से काम करते हो।

14 ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;और उस ने लोगों को अपने पास बुलाकर उन से कहा, तुम सब मेरी सुनो, और समझो।

15 ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.ऐसी तो कोई वस्तु नहीं जो मनुष्य में बाहर से समाकर अशुद्ध करे; परन्तु जो वस्तुएं मनुष्य के भीतर से निकलती हैं, वे ही उसे अशुद्ध करती हैं।

16 ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.यदि किसी के सुनने के कान हों तो सुन ले।

17 ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.जब वह भीड़ के पास से घर में गया, तो उसके चेलों ने इस दृष्टान्त के विषय में उस से पूछा।

18 ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?उस ने उन से कहा; क्या तुम भी ऐसे ना समझ हो? क्या तुम नहीं समझते, कि जो वस्तु बाहर से मनुष्य के भीतर जाती है, वह उसे अशुद्ध नहीं कर सकती?

19 ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.क्योंकि वह उसके मन में नहीं, परन्तु पेट में जाती है, और संडास में निकल जाती है यह कहकर उस ने सब भोजन वस्तुओं को शुद्ध ठहराया।

20 ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.फिर उस ने कहा; जो मनुष्य में से निकलता है, वही मनुष्य को अशुद्ध करता है।

21 ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳುक्योंकि भीतर से अर्थात मनुष्य के मन से, बुरी बुरी चिन्ता, व्यभिचार।

22 ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನचोरी, हत्या, पर स्त्रीगमन, लोभ, दुष्टता, छल, लुचपन, कुदृष्टि, निन्दा, अभिमान, और मूर्खता निकलती हैं।

23 ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.ये सब बुरी बातें भीतर ही से निकलती हैं और मनुष्य को अशुद्ध करती हैं॥

24 ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.फिर वह वहां से उठकर सूर और सैदा के देशों में आया; और एक घर में गया, और चाहता था, कि कोई न जाने; परन्तु वह छिप न सका।

25 ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.और तुरन्त एक स्त्री जिस की छोटी बेटी में अशुद्ध आत्मा थी, उस की चर्चा सुन कर आई, और उसके पांवों पर गिरी।

26 ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.यह यूनानी और सूरूफिनीकी जाति की थी; और उस ने उस से बिनती की, कि मेरी बेटी में से दुष्टात्मा निकाल दे।

27 ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.उस ने उस से कहा, पहिले लड़कों को तृप्त होने दे, क्योंकि लड़कों की रोटी लेकर कुत्तों के आगे डालना उचित नहीं है।

28 ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.उस ने उस को उत्तर दिया; कि सच है प्रभु; तौ भी कुत्ते भी तो मेज के नीचे बालकों की रोटी का चूर चार खा लेते हैं।

29 ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.उस ने उस से कहा; इस बात के कारण चली जा; दुष्टात्मा तेरी बेटी में से निकल गई है।

30 ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.और उस ने अपने घर आकर देखा कि लड़की खाट पर पड़ी है, और दुष्टात्मा निकल गई है॥

31 ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.फिर वह सूर और सैदा के देशों से निकलकर दिकपुलिस देश से होता हुआ गलील की झील पर पहुंचा।

32 ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.और लोगों ने एक बहिरे को जो हक्ला भी था, उसके पास लाकर उस से बिनती की, कि अपना हाथ उस पर रखे।

33 ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;तब वह उस को भीड़ से अलग ले गया, और अपनी उंगलियां उसके कानों में डालीं, और थूक कर उस की जीभ को छूआ।

34 ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.और स्वर्ग की ओर देखकर आह भरी, और उस से कहा; इप्फत्तह, अर्थात खुल जा।

35 ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.और उसके कान खुल गए, और उस की जीभ की गांठ भी खुल गई, और वह साफ साफ बोलने लगा।

36 ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.तब उस ने उन्हें चिताया कि किसी से न कहना; परन्तु जितना उस ने उन्हें चिताया उतना ही वे और प्रचार करने लगे।

37 ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.और वे बहुत ही आश्चर्य में होकर कहने लगे, उस ने जो कुछ किया सब अच्छा किया है; वह बहिरों को सुनने, की, और गूंगों को बोलने की शक्ति देता है॥

Hindi Bible