Bible

1 Chronicles 15 - WBT (Kannada)

1 And David made him houses in the city of David, and prepared a place for the ark of God, and pitched for it a tent.ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.

2 Then David said, None ought to carry the ark of God but the Levites: for them hath the LORD chosen to carry the ark of God, and to minister to him for ever.ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.

3 And David assembled all Israel to Jerusalem, to bring up the ark of the LORD to its place, which he had prepared for it.ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.

4 And David assembled the children of Aaron, and the Levites:ಇದಲ್ಲದೆ ದಾವೀದನು ಆರೋನನ ಮಕ್ಕಳನ್ನೂ ಲೇವಿಯರನ್ನೂ ಬರಮಾಡಿದನು.

5 Of the sons of Kohath; Uriel the chief, and his brethren a hundred and twenty:ಕೆಹಾತನ ಕುಮಾರರಲ್ಲಿ ಮುಖ್ಯಸ್ಥನಾದ ಉರೀ ಯೇಲನೂ ಅವನ ಸಹೋದರರಾದ ನೂರ ಇಪ್ಪತ್ತು ಮಂದಿಯೂ;

6 Of the sons of Merari; Asaiah the chief, and his brethren two hundred and twenty:ಮೆರಾರೀಯ ಕುಮಾರರಲ್ಲಿ ಮುಖ್ಯಸ್ಥ ನಾದ ಅಸಾಯನೂ ಅವನ ಸಹೋದರರಾದ ಇನ್ನೂರ ಇಪ್ಪತ್ತು ಮಂದಿಯೂ;

7 Of the sons of Gershom; Joel the chief, and his brethren a hundred and thirty:ಗೆರ್ಷೋಮನ ಕುಮಾರರಲ್ಲಿ ಮುಖ್ಯಸ್ಥನಾದ ಯೋವೇಲನೂ ಅವನ ಸಹೋದರ ರಾದ ನೂರ ಮೂವತ್ತು ಮಂದಿಯೂ;

8 Of the sons of Elizaphan; Shemaiah the chief, and his brethren two hundred:ಎಲೀ ಚಾಫಾನನ ಕುಮಾರರಲ್ಲಿ ಮುಖ್ಯಸ್ಥನಾದ ಶೆಮಾ ಯನೂ ಅವನ ಸಹೋದರರಾದ ಇನ್ನೂರು ಮಂದಿಯೂ;

9 Of the sons of Hebron; Eliel the chief, and his brethren eighty:ಹೆಬ್ರೋನನ ಕುಮಾರರಲ್ಲಿ ಮುಖ್ಯಸ್ಥ ನಾದ ಎಲೀಯೇಲನೂ ಅವನ ಸಹೋದರರಾದ ಎಂಭತ್ತು ಮಂದಿಯೂ;

10 Of the sons of Uzziel: Amminadab the chief, and his brethren a hundred and twelve.ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.

11 And David called for Zadok and Abiathar the priests, and for the Levites, for Uriel, Asaiah, and Joel, Shemaiah, and Eliel, and Amminadab,ಆಗ ದಾವೀದನು ಚಾದೋಕ್‌, ಎಬ್ಯಾತ್ಯಾರ್‌ ಎಂಬ ಯಾಜಕರನ್ನೂ ಉರೀಯೇಲ್‌, ಅಸಾಯನು, ಯೋವೇಲನು, ಶೆಮಾಯನು, ಎಲೀಯೇಲನು, ಅವ್ಮೆಾನಾದಾಬ ಎಂಬ ಲೇವಿಯರನ್ನೂ ಕರೇಕಳುಹಿಸಿ ಅವರಿಗೆ ಹೇಳಿದ್ದೇನಂದರೆ--

12 And said to them, Ye are the chief of the fathers of the Levites: sanctify yourselves, both ye and your brethren, that ye may bring up the ark of the LORD God of Israel to the place that I have prepared for it.ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.

13 For because ye did it not at the first, the LORD our God made a breach upon us, for that we sought him not after the due order.ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.

14 So the priests and the Levites sanctified themselves to bring up the ark of the LORD God of Israel.ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.

15 And the children of the Levites bore the ark of God upon their shoulders with the staffs on it, as Moses commanded, according to the word of the LORD.ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.

16 And David spoke to the chief of the Levites to appoint their brethren to be the singers with instruments of music, psalteries, and harps, and cymbals, sounding, by lifting up the voice with joy.ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.

17 So the Levites appointed Heman the son of Joel; and of his brethren, Asaph the son of Berechiah; and of the sons of Merari their brethren, Ethan the son of Kushaiah;ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.

18 And with them their brethren of the second degree, Zechariah, Ben, and Jaaziel, and Shemiramoth, and Jehiel, and Unni, Eliab, and Benaiah, and Maaseiah, and Mattithiah, and Elipheleh, and Mikneiah, and Obed-edom, and Jeiel, the porters.ಅವರ ಸಂಗಡ ಎರಡನೇ ತರಗತಿಯ ತಮ್ಮ ಸಹೋದರರಾಗಿರುವ ಜೆಕರ್ಯ ನನ್ನೂ ಬೇನ್‌ನನ್ನೂ ಯಾಜೀಯೇಲನನ್ನೂ ಶೆವಿಾರಾ ಮೋತನನ್ನೂ ಯೆಹೀಯೇಲನನ್ನೂ ಉನ್ನಿಯನ್ನೂ ಎಲೀಯಾಬನನ್ನೂ ಬೆನಾಯನನ್ನೂ ಮಾಸೇಯನನ್ನೂ ಮತ್ತಿತ್ಯನನ್ನೂ ಎಲೀಫೆಲೇಹುವನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಒಬೇದೆದೋಮನನ್ನೂ ಯೆಗೀ ಯೇಲನನ್ನೂ ನೇಮಿಸಿದರು.

19 So the singers, Heman, Asaph, and Ethan, were appointed to sound with cymbals of brass;ಹಾಡುಗಾರರಾದ ಹೇಮಾನನೂ ಆಸಾಫನೂ ಏತಾನನೂ ತಾಮ್ರದ ತಾಳಗಳನ್ನು ಬಾರಿಸುವದಕ್ಕೂ

20 And Zechariah, and Aziel, and Shemiramoth, and Jehiel, and Unni, and Eliab, and Maaseiah, and Benaiah, with psalteries on Alamoth;ಜೆಕರ್ಯನೂ ಅಜೀಯೇಲನೂ ಶೆವಿಾರಾಮೋತನೂ ಯೆಹೀ ಯೇಲನೂ ಉನ್ನಿಯೂ ಎಲೀಯಾಬನೂ ಮಾಸೇ ಯನೂ ಬೆನಾಯನೂ ಅಲಮೋತಿನಿಂದ ವೀಣೆಗಳನ್ನು ಬಾರಿಸುವದಕ್ಕೂ;

21 And Mattithiah, and Elipheleh, and Mikneiah, and Obed-edom, and Jeiel, and Azaziah, with harps on the Sheminith to excel.ಮತ್ತಿತ್ಯನೂ ಎಲೀಫೆಲೇಹುವೂ ಮಿಕ್ನೇಯನೂ ಒಬೇದೆದೋಮನೂ ಯೆಗೀಯೇ ಲನೂ ಅಜಜ್ಯನೂ ಹೆಚ್ಚಳವಾಗಿ ಶಿಮಿನೇಟನಿಂದ ಕಿನ್ನರಿಗಳನ್ನು ಬಾರಿಸುವದಕ್ಕೂ ನೇಮಿಸಲ್ಪಟ್ಟಿದ್ದರು.

22 And Chenaniah, chief of the Levites, was for song: he instructed about the song, because he was skillful.ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡು ವದಕ್ಕೆ ನೇಮಿಸಲ್ಪಟ್ಟಿದ್ದನು. ಅವನು ಗ್ರಹಿಕೆಯುಳ್ಳವನಾ ದದರಿಂದ ಹಾಡುವದಕ್ಕೆ ಕಲಿಸುತ್ತಿದ್ದನು.

23 And Berechiah and Elkanah were door-keepers for the ark.ಬೆರಕ್ಯನೂ ಎಲ್ಕಾನನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.

24 And Shebaniah, and Jehoshaphat, and Nethaneel, and Amasai, and Zechariah, and Benaiah, and Eliezer the priests, did blow with the trumpets before the ark of God: and Obed-edom and Jehiah were door-keepers for the ark.ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್‌ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.

25 So David and the elders of Israel, and the captains over thousands, went to bring up the ark of the covenant of the LORD from the house of Obed-edom with joy.ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.

26 And it came to pass, when God helped the Levites that bore the ark of the covenant of the LORD, that they offered seven bullocks and seven rams.ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.

27 And David was clothed with a robe of fine linen, and all the Levites that bore the ark, and the singers, and Chenaniah the master of the song with the singers: David also had upon him an ephod of linen.ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.

28 Thus all Israel brought up the ark of the covenant of the LORD with shouting, and with sound of the cornet, and with trumpets, and with cymbals, making a noise with psalteries and harps.ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.

29 And it came to pass, as the ark of the covenant of the LORD came to the city of David, that Michal the daughter of Saul, looking out at a window, saw king David dancing and playing: and she despised him in her heart.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.

Kannada Bible