Bible

1 Corinthians 16 - WEB (Kannada)

1 Now concerning the collection for the saints, as I commanded the assemblies of Galatia, you do likewise.ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.

2 On the first day of the week, let each one of you save, as he may prosper, that no collections be made when I come.ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.

3 When I arrive, I will send whoever you approve with letters to carry your gracious gift to Jerusalem.ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.

4 If it is appropriate for me to go also, they will go with me.ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.

5 But I will come to you when I have passed through Macedonia, for I am passing through Macedonia.ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.

6 But with you it may be that I will stay, or even winter, that you may send me on my journey wherever I go.ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.

7 For I do not wish to see you now in passing, but I hope to stay a while with you, if the Lord permits.ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.

8 But I will stay at Ephesus until Pentecost,ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.

9 for a great and effective door has opened to me, and there are many adversaries.ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.

10 Now if Timothy comes, see that he is with you without fear, for he does the work of the Lord, as I also do.ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.

11 Therefore let no one despise him. But set him forward on his journey in peace, that he may come to me; for I expect him with the brothers.ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.

12 Now concerning Apollos, the brother, I strongly urged him to come to you with the brothers; and it was not at all his desire to come now; but he will come when he has an opportunity.ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

13 Watch! Stand firm in the faith! Be courageous! Be strong!ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.

14 Let all that you do be done in love.ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

15 Now I beg you, brothers (you know the house of Stephanas, that it is the first fruits of Achaia, and that they have set themselves to minister to the saints),ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.

16 that you also be in subjection to such, and to everyone who helps in the work and labors.ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

17 I rejoice at the coming of Stephanas, Fortunatus, and Achaicus; for that which was lacking on your part, they supplied.ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.

18 For they refreshed my spirit and yours. Therefore acknowledge those who are like that.ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.

19 The assemblies of Asia greet you. Aquila and Priscilla greet you much in the Lord, together with the assembly that is in their house.ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.

20 All the brothers greet you. Greet one another with a holy kiss.ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

21 This greeting is by me, Paul, with my own hand.ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.

22 If any man doesn't love the Lord Jesus Christ, let him be accursed{Greek: anathema.}. Come, Lord!{Aramaic: Maranatha!}ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

23 The grace of the Lord Jesus Christ be with you.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

24 My love to all of you in Christ Jesus. Amen.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್‌.

Kannada Bible