Bible

1 Corinthians 7 - WEB (Kannada)

1 Now concerning the things about which you wrote to me: it is good for a man not to touch a woman.ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.

2 But, because of sexual immoralities, let each man have his own wife, and let each woman have her own husband.ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.

3 Let the husband render to his wife the affection owed her, and likewise also the wife to her husband.ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ.

4 The wife doesn't have authority over her own body, but the husband. Likewise also the husband doesn't have authority over his own body, but the wife.ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.

5 Don't deprive one another, unless it is by consent for a season, that you may give yourselves to fasting and prayer, and may be together again, that Satan doesn't tempt you because of your lack of self-control.ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.

6 But this I say by way of concession, not of commandment.ಹೀಗೆ ನಾನು ಅನುಮತಿಯಿಂದಲೇ ಮಾತನಾಡುತ್ತೇನೆ, ಆದರೆ ಆಜ್ಞೆಯಲ್ಲ.

7 Yet I wish that all men were like me. However each man has his own gift from God, one of this kind, and another of that kind.ನಾನು ಇದ್ದಂತೆಯೇ ಎಲ್ಲರೂ ಇರ ಬೇಕೆಂದು ಇಚ್ಛಿಸುತ್ತೇನೆ. ಆದರೆ ಒಬ್ಬನು ಒಂದು ವಿಧದಲ್ಲಿ ಮತ್ತೊಬ್ಬನು ಇನ್ನೊಂದು ವಿಧದಲ್ಲಿ ಹೀಗೆ ಪ್ರತಿಯೊಬ್ಬನು ದೇವರಿಂದ ಅವನಿಗೆ ತಕ್ಕ ವರವನ್ನು ಹೊಂದಿದವನಾಗಿದ್ದಾನೆ.

8 But I say to the unmarried and to widows, it is good for them if they remain even as I am.ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು;

9 But if they don't have self-control, let them marry. For it's better to marry than to burn.ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.

10 But to the married I command--not I, but the Lord--that the wife not leave her husbandಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು.

11 (but if she departs, let her remain unmarried, or else be reconciled to her husband), and that the husband not leave his wife.ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.

12 But to the rest I--not the Lord--say, if any brother has an unbelieving wife, and she is content to live with him, let him not leave her.ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.

13 The woman who has an unbelieving husband, and he is content to live with her, let her not leave her husband.ಒಬ್ಬ ಸ್ತ್ರೀಗೆ ನಂಬಿಕೆಯಿಲ್ಲದ ಗಂಡನಿರಲಾಗಿ ಅವನು ಆಕೆಯೊಂದಿಗೆ ಇರುವದಕ್ಕೆ ಸಮ್ಮತಿಸಿದರೆ ಆಕೆಯು ಅವನನ್ನು ಬಿಡ ಬಾರದು.

14 For the unbelieving husband is sanctified in the wife, and the unbelieving wife is sanctified in the husband. Otherwise your children would be unclean, but now are they holy.ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.

15 Yet if the unbeliever departs, let there be separation. The brother or the sister is not under bondage in such cases, but God has called us in peace.ಆದರೆ ನಂಬಿಕೆಯಿಲ್ಲದವನು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ; ಇಂಥಾ ಸಂದರ್ಭಗಳಲ್ಲಿ ಸಹೋದರ ನಾಗಲಿ ಸಹೋದರಿಯಾಗಲಿ ಬದ್ಧರಲ್ಲ, ಸಮಾಧಾನ ದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

16 For how do you know, wife, whether you will save your husband? Or how do you know, husband, whether you will save your wife?ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?

17 Only, as the Lord has distributed to each man, as God has called each, so let him walk. So I command in all the assemblies.ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.

18 Was anyone called having been circumcised? Let him not become uncircumcised. Has anyone been called in uncircumcision? Let him not be circumcised.ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು.

19 Circumcision is nothing, and uncircumcision is nothing, but the keeping of the commandments of God.ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.

20 Let each man stay in that calling in which he was called.ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಬೇಕು.

21 Were you called being a bondservant? Don't let that bother you, but if you get an opportunity to become free, use it.ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.

22 For he who was called in the Lord being a bondservant is the Lord's free man. Likewise he who was called being free is Christ's bondservant.ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.

23 You were bought with a price. Don't become bondservants of men.ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.

24 Brothers, let each man, in whatever condition he was called, stay in that condition with God.ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಇದ್ದುಕೊಂಡಿರಲಿ.

25 Now concerning virgins, I have no commandment from the Lord, but I give my judgment as one who has obtained mercy from the Lord to be trustworthy.ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.

26 I think that it is good therefore, because of the distress that is on us, that it is good for a man to be as he is.ಈಗಿನ ಕಷ್ಟದ ನಿಮಿತ್ತ ಹಾಗೆಯೇ ಇರುವದು ಒಳ್ಳೇದು; ಒಬ್ಬ ಮನುಷ್ಯನು ಇದ್ದ ಹಾಗೆಯೇ ಇರುವದು ಉತ್ತಮವೆಂದು ನಾನು ಭಾವಿಸುತ್ತೇನೆ.

27 Are you bound to a wife? Don't seek to be freed. Are you free from a wife? Don't seek a wife.ಹೆಂಡತಿಯನ್ನು ಕಟ್ಟಿಕೊಂಡಿ ದ್ದೀಯೋ? ಬಿಡುಗಡೆಗಾಗಿ ಪ್ರಯತ್ನಿಸಬೇಡ; ಹೆಂಡತಿಯನ್ನು ಬಿಟ್ಟವನಾಗಿದ್ದೀಯೋ? ಹೆಂಡತಿಗಾಗಿ ಪ್ರಯತ್ನಿಸಬೇಡ.

28 But if you marry, you have not sinned. If a virgin marries, she has not sinned. Yet such will have oppression in the flesh, and I want to spare you.ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.

29 But I say this, brothers: the time is short, that from now on, both those who have wives may be as though they had none;ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ

30 and those who weep, as though they didn't weep; and those who rejoice, as though they didn't rejoice; and those who buy, as though they didn't possess;ಅಳುವವರು ಅಳದವರಂತೆಯೂ ಸಂತೋಷಪಡುವವರು ಸಂತೋಷಪಡದವ ರಂತೆಯೂ ಕೊಂಡುಕೊಳ್ಳುವವರು ಇಲ್ಲದವ ರಂತೆಯೂ

31 and those who use the world, as not using it to the fullest. For the mode of this world passes away.ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.

32 But I desire to have you to be free from cares. He who is unmarried is concerned for the things of the Lord, how he may please the Lord;ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.

33 but he who is married is concerned about the things of the world, how he may please his wife.ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.

34 There is also a difference between a wife and a virgin. The unmarried woman cares about the things of the Lord, that she may be holy both in body and in spirit. But she who is married cares about the things of the world--how she may please her husband.ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು

35 This I say for your own profit; not that I may ensnare you, but for that which is appropriate, and that you may attend to the Lord without distraction.ನಾನು ನಿಮಗೆ ಉರ್ಲುಹಾಕುವದಕ್ಕಾಗಿ ಅಲ್ಲ; ಆದರೆ ಯೋಗ್ಯವಾದದ್ದಕ್ಕಾಗಿಯೂ ನೀವು ಕರ್ತನಿಗೆ ದೃಢ ನಿಷ್ಠೆಯುಳ್ಳವರಾಗಿಯೂ ಇರುವಂತೆ ನಿಮ್ಮ ಸ್ವಂತ ಹಿತಕ್ಕಾಗಿಯೇ ಹೇಳುತ್ತೇನೆ.

36 But if any man thinks that he is behaving inappropriately toward his virgin, if she is past the flower of her age, and if need so requires, let him do what he desires. He doesn't sin. Let them marry.ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.

37 But he who stands steadfast in his heart, having no necessity, but has power over his own heart, to keep his own virgin, does well.ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು.

38 So then both he who gives his own virgin in marriage does well, and he who doesn't give her in marriage does better.ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.

39 A wife is bound by law for as long as her husband lives; but if the husband is dead, she is free to be married to whoever she desires, only in the Lord.ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.

40 But she is happier if she stays as she is, in my judgment, and I think that I also have God's Spirit.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.

Kannada Bible