1 John 3 - WEB (Kannada)
1 Behold, how great a love the Father has bestowed on us, that we should be called children of God! For this cause the world doesn't know us, because it didn't know him.ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
2 Beloved, now we are children of God, and it is not yet revealed what we will be. But we know that, when he is revealed, we will be like him; for we will see him just as he is.ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
3 Everyone who has this hope set on him purifies himself, even as he is pure.ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
4 Everyone who sins also commits lawlessness. Sin is lawlessness.ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
5 You know that he was revealed to take away our sins, and in him is no sin.ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
6 Whoever remains in him doesn't sin. Whoever sins hasn't seen him, neither knows him.ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
7 Little children, let no one lead you astray. He who does righteousness is righteous, even as he is righteous.ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
8 He who sins is of the devil, for the devil has been sinning from the beginning. To this end the Son of God was revealed, that he might destroy the works of the devil.ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
9 Whoever is born of God doesn't commit sin, because his seed remains in him; and he can't sin, because he is born of God.ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
10 In this the children of God are revealed, and the children of the devil. Whoever doesn't do righteousness is not of God, neither is he who doesn't love his brother.ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
11 For this is the message which you heard from the beginning, that we should love one another;ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
12 unlike Cain, who was of the evil one, and killed his brother. Why did he kill him? Because his works were evil, and his brother's righteous.ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
13 Don't be surprised, my brothers, if the world hates you.ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
14 We know that we have passed out of death into life, because we love the brothers. He who doesn't love his brother remains in death.ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
15 Whoever hates his brother is a murderer, and you know that no murderer has eternal life remaining in him.ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
16 By this we know love, because he laid down his life for us. And we ought to lay down our lives for the brothers.ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
17 But whoever has the world's goods, and sees his brother in need, and closes his heart of compassion against him, how does the love of God remain in him?ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
18 My little children, let's not love in word only, neither with the tongue only, but in deed and truth.ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
19 And by this we know that we are of the truth, and persuade our hearts before him,ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
20 because if our heart condemns us, God is greater than our heart, and knows all things.ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
21 Beloved, if our hearts don't condemn us, we have boldness toward God;ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
22 and whatever we ask, we receive from him, because we keep his commandments and do the things that are pleasing in his sight.ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
23 This is his commandment, that we should believe in the name of his Son, Jesus Christ, and love one another, even as he commanded.ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
24 He who keeps his commandments remains in him, and he in him. By this we know that he remains in us, by the Spirit which he gave us.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Kannada Bible