1 John 5 - BBE (Kannada)
1 Everyone who has faith that Jesus is the Christ is a child of God: and everyone who has love for the Father has love for his child.ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
2 In this way, we are certain that we have love for the children of God, when we have love for God and keep his laws.ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
3 For loving God is keeping his laws: and his laws are not hard.ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
4 Anything which comes from God is able to overcome the world: and the power by which we have overcome the world is our faith.ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
5 Who is able to overcome the world but the man who has faith that Jesus is the Son of God?ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
6 This is he who came by water and by blood, Jesus Christ; not by water only but by water and by blood.ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
7 And the Spirit is the witness, because the Spirit is true.ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
8 There are three witnesses, the Spirit, the water, and the blood: and all three are in agreement.ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
9 If we take the witness of men to be true, the witness of God is greater: because this is the witness which God has given about his Son.ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
10 He who has faith in the Son of God has the witness in himself: he who has not faith in God makes him false, because he has not faith in the witness which God has given about his Son.ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
11 And his witness is this, that God has given us eternal life, and this life is in his Son.ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
12 He who has the Son has the life; he who has not the Son of God has not the life.ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
13 I have put these things in writing for you who have faith in the name of the Son of God, so that you may be certain that you have eternal life.ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
14 And we are certain that if we make any request to him which is right in his eyes, he will give ear to us:ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
15 And if we are certain that he gives ear to all our requests, we are equally certain that we will get our requests.ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
16 If a man sees his brother doing a sin which is not bad enough for death, let him make a prayer to God, and God will give life to him whose sin was not bad enough for death. There is a sin whose punishment is death: I do not say that he may make such a request then.ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
17 All evil-doing is sin: but death is not the punishment for every sort of sin.ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
18 We are certain that one who is a child of God will do no sin, but the Son of God keeps him so that he is not touched by the Evil One.ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
19 We are certain that we are of God, but all the world is in the power of the Evil One.ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
20 And we are certain that the Son of God has come, and has given us a clear vision, so that we may see him who is true, and we are in him who is true, in his Son Jesus Christ. He is the true God and eternal life.ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
21 My little children, keep yourselves from false gods.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
Kannada Bible