Bible

1 Peter 5 - ASV (Kannada)

1 The elders among you I exhort, who am a fellow-elder, and a witness of the sufferings of Christ, who am also a partaker of the glory that shall be revealed:ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,

2 Tend the flock of God which is among you, exercising the oversight, not of constraint, but willingly, according to `the will of' God; nor yet for filthy lucre, but of a ready mind;ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

3 neither as lording it over the charge allotted to you, but making yourselves ensamples to the flock.ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

4 And when the chief Shepherd shall be manifested, ye shall receive the crown of glory that fadeth not away.ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

5 Likewise, ye younger, be subject unto the elder. Yea, all of you gird yourselves with humility, to serve one another: for God resisteth the proud, but giveth grace to the humble.ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

6 Humble yourselves therefore under the mighty hand of God, that he may exalt you in due time;ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

7 casting all your anxiety upon him, because he careth for you.ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.

8 Be sober, be watchful: your adversary the devil, as a roaring lion, walketh about, seeking whom he may devour,ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

9 whom withstand stedfast in your faith, knowing that the same sufferings are accomplished in your brethren who are in the world.ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.

10 And the God of all grace, who called you unto his eternal glory in Christ, after that ye have suffered a little while, shall himself perfect, establish, strengthen you.ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.

11 To him `be' the dominion for ever and ever. Amen.ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್‌.

12 By Silvanus, our faithful brother, as I account `him', I have written unto you briefly, exhorting, and testifying that this is the true grace of God. Stand ye fast therein.ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

13 She that is in Babylon, elect together with `you', saluteth you; and `so doth' Mark my son.ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.

14 Salute one another with a kiss of love. Peace be unto you all that are in Christ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

Kannada Bible