Bible

1 Peter 5 - YLT (Kannada)

1 Elders who `are' among you, I exhort, who `am' a fellow-elder, and a witness of the sufferings of the Christ, and of the glory about to be revealed a partaker,ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,

2 feed the flock of God that `is' among you, overseeing not constrainedly, but willingly, neither for filthy lucre, but of a ready mind,ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.

3 neither as exercising lordship over the heritages, but patterns becoming of the flock,ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.

4 and at the manifestation of the chief Shepherd, ye shall receive the unfading crown of glory.ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

5 In like manner, ye younger, be subject to elders, and all to one another subjecting yourselves; with humble-mindedness clothe yourselves, because God the proud doth resist, but to the humble He doth give grace;ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

6 be humbled, then, under the powerful hand of God, that you He may exalt in good time,ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.

7 all your care having cast upon Him, because He careth for you.ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.

8 Be sober, vigilant, because your opponent the devil, as a roaring lion, doth walk about, seeking whom he may swallow up,ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.

9 whom resist, stedfast in the faith, having known the same sufferings to your brotherhood in the world to be accomplished.ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.

10 And the God of all grace, who did call you to His age-during glory in Christ Jesus, having suffered a little, Himself make you perfect, establish, strengthen, settle `you';ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.

11 to Him `is' the glory, and the power -- to the ages and the ages! Amen.ಆತನಿಗೆ ಮಹಿಮೆಯೂ ಅಧಿಪತ್ಯವೂ ಯುಗಯುಗಾಂತರ ಗಳಲ್ಲಿ ಇರಲಿ. ಆಮೆನ್‌.

12 Through Silvanus, to you the faithful brother, as I reckon, through few `words' I did write, exhorting and testifying this to be the true grace of God in which ye have stood.ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

13 Salute you doth the `assembly' in Babylon jointly elected, and Markus my son.ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.

14 Salute ye one another in a kiss of love; peace to you all who `are' in Christ Jesus! Amen.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

Kannada Bible