1 Samuel 7 - WEB (Kannada)
1 The men of Kiriath Jearim came, and fetched up the ark of Yahweh, and brought it into the house of Abinadab in the hill, and sanctified Eleazar his son to keep the ark of Yahweh.ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
2 It happened, from the day that the ark abode in Kiriath Jearim, that the time was long; for it was twenty years: and all the house of Israel lamented after Yahweh.ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
3 Samuel spoke to all the house of Israel, saying, If you do return to Yahweh with all your heart, then put away the foreign gods and the Ashtaroth from among you, and direct your hearts to Yahweh, and serve him only; and he will deliver you out of the hand of the Philistines.ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
4 Then the children of Israel did put away the Baals and the Ashtaroth, and served Yahweh only.ಆಗ ಇಸ್ರಾಯೇಲ್ ಮಕ್ಕಳು ಬಾಳನ್ನೂ ಅಷ್ಟೋರೆತ್‌ನ್ನೂ ತೆಗೆದುಹಾಕಿ ಕರ್ತ ನೊಬ್ಬನನ್ನೇ ಸೇವಿಸಿದರು.
5 Samuel said, Gather all Israel to Mizpah, and I will pray for you to Yahweh.ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
6 They gathered together to Mizpah, and drew water, and poured it out before Yahweh, and fasted on that day, and said there, We have sinned against Yahweh. Samuel judged the children of Israel in Mizpah.ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
7 When the Philistines heard that the children of Israel were gathered together at Mizpah, the lords of the Philistines went up against Israel. When the children of Israel heard it, they were afraid of the Philistines.ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
8 The children of Israel said to Samuel, "Don't cease to cry to Yahweh our God for us, that he will save us out of the hand of the Philistines."ಆಗ ಇಸ್ರಾಯೇಲ್ ಮಕ್ಕಳು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು ಸಮುವೇಲ ನಿಗೆ--ನಮ್ಮ ದೇವರಾದ ಕರ್ತನು ನಮ್ಮನ್ನು ಫಿಲಿಷ್ಟಿ ಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರವಾಗಿ ಮೌನವಾಗಿರದೆ ಆತನಿಗೆ ಮೊರೆ ಯಿಡು ಅಂದರು.
9 Samuel took a sucking lamb, and offered it for a whole burnt-offering to Yahweh: and Samuel cried to Yahweh for Israel; and Yahweh answered him.ಆಗ ಸಮುವೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು ಕರ್ತ ನಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು; ಸಮುವೇಲನು ಇಸ್ರಾಯೇಲಿಗೋಸ್ಕರ ಕರ್ತನಿಗೆ ಮೊರೆಯಿಟ್ಟನು. ಕರ್ತನು ಅವನಿಗೆ ಕಿವಿಗೊಟ್ಟನು.
10 As Samuel was offering up the burnt offering, the Philistines drew near to battle against Israel; but Yahweh thundered with a great thunder on that day on the Philistines, and confused them; and they were struck down before Israel.ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
11 The men of Israel went out of Mizpah, and pursued the Philistines, and struck them, until they came under Beth Kar.ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.
12 Then Samuel took a stone, and set it between Mizpah and Shen, and called the name of it Ebenezer, saying, Hitherto has Yahweh helped us.ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.
13 So the Philistines were subdued, and they came no more within the border of Israel: and the hand of Yahweh was against the Philistines all the days of Samuel.ಫಿಲಿಷ್ಟಿಯರು ತಗ್ಗಿಸಲ್ಪಟ್ಟು ಇಸ್ರಾ ಯೇಲಿನ ಮೇರೆಯಲ್ಲಿ ಬಾರದೆ ಇದ್ದರು. ಇದಲ್ಲದೆ ಸಮುವೇಲನು ಇದ್ದ ದಿವಸಗಳೆಲ್ಲಾ ಕರ್ತನ ಕೈ ಫಿಲಿಷ್ಟಿ ಯರಿಗೆ ವಿರೋಧವಾಗಿತ್ತು.
14 The cities which the Philistines had taken from Israel were restored to Israel, from Ekron even to Gath; and the border of it did Israel deliver out of the hand of the Philistines. There was peace between Israel and the Amorites.ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
15 Samuel judged Israel all the days of his life.ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
16 He went from year to year in circuit to Bethel and Gilgal, and Mizpah; and he judged Israel in all those places.ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
17 His return was to Ramah, for there was his house; and there he judged Israel: and he built there an altar to Yahweh.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Kannada Bible