2 Chronicles 6 - ASV (Kannada)
1 Then spake Solomon, Jehovah hath said that he would dwell in the thick darkness.ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.
2 But I have built thee a house of habitation, and a place for thee to dwell in for ever.ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.
3 And the king turned his face, and blessed all the assembly of Israel: and all the assembly of Israel stood.ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
4 And he said, Blessed be Jehovah, the God of Israel, who spake with his mouth unto David my father, and hath with his hands fulfilled it, saying,ಅವನು--ನನ್ನ ತಂದೆಯಾದ ದಾವೀದನ ಸಂಗಡ ಮಾತನಾಡಿದ್ದನ್ನು ತನ್ನ ಕೈಯಿಂದ ನೆರವೇರಿಸಿದ ಇಸ್ರಾಯೇಲ್ಯರ ದೇವರಾದ ಕರ್ತನು ಸ್ತುತಿಸಲ್ಪಡಲಿ.
5 Since the day that I brought forth my people out of the land of Egypt, I chose no city out of all the tribes of Israel to build a house in, that my name might be there; neither chose I any man to be prince over my people Israel:ಆತನು ತನ್ನ ಬಾಯಿಂದ--ನನ್ನ ಜನ ರಾದ ಇಸ್ರಾಯೇಲನ್ನು ಐಗುಪ್ತದೇಶದಿಂದ ಬರ ಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವದಕ್ಕೆ ಇಸ್ರಾಯೇಲನ ಸಮಸ್ತ ಗೋತ್ರಗಳೊಳಗಿಂದ ಯಾವ ಪಟ್ಟಣವನ್ನೂ ಆದುಕೊಳ್ಳಲಿಲ್ಲ; ನನ್ನ ಜನರಾದ ಇಸ್ರಾ ಯೇಲಿನ ಮೇಲೆ ಆಳುವವನಾಗಿರಲು ನಾನು ಒಬ್ಬನ ನ್ನಾದರೂ ಆದುಕೊಳ್ಳಲಿಲ್ಲ.
6 but I have chosen Jerusalem, that my name might be there; and have chosen David to be over my people Israel.ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
7 Now it was in the heart of David my father to build a house for the name of Jehovah, the God of Israel.ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
8 But Jehovah said unto David my father, Whereas it was in thy heart to build a house for my name, thou didst well that it was in thy heart:ಆಗ ಕರ್ತನು ನನ್ನ ತಂದೆಯಾದ ದಾವೀ ದನಿಗೆ--ನನ್ನ ಹೆಸರಿಗೆ ಆಲಯವನ್ನು ಕಟ್ಟಿಸಲು ನಿನಗೆ ಮನಸ್ಸಾಗಿತ್ತಲ್ಲಾ? ನಿನಗೆ ಮನಸ್ಸಾಗಿರುವದರಿಂದ ಒಳ್ಳೇದು ಮಾಡಿದಿ.
9 nevertheless thou shalt not build the house; but thy son that shall come forth out of thy loins, he shall build the house for my name.ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.
10 And Jehovah hath performed his word that he spake; for I am risen up in the room of David my father, and sit on the throne of Israel, as Jehovah promised, and have built the house for the name of Jehovah, the God of Israel.ಈಗ ಕರ್ತನು ತಾನು ಹೇಳಿದ ವಾಕ್ಯವನ್ನು ನೆರ ವೇರಿಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಿ
11 And there have I set the ark, wherein is the covenant of Jehovah, which he made with the children of Israel.ಕರ್ತನು ಇಸ್ರಾಯೇಲ್ ಮಕ್ಕಳ ಸಂಗಡ ಮಾಡಿದ ಕರ್ತನ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇರಿಸಿದ್ದೇನೆ.
12 And he stood before the altar of Jehovah in the presence of all the assembly of Israel, and spread forth his hands;ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
13 (for Solomon had made a brazen scaffold, five cubits long, and five cubits broad, and three cubits high, and had set it in the midst of the court; and upon it he stood, and kneeled down upon his knees before all the assembly of Israel, and spread forth his hands toward heaven;)ಸೊಲೊಮೋನನು ಐದು ಮೊಳ ಉದ್ದವೂ ಐದು ಮೊಳ ಅಗಲವೂ ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಪೀಠವನ್ನು ಮಾಡಿಸಿ ಅಂಗಳದ ಮಧ್ಯದಲ್ಲಿ ಅದನ್ನು ಇರಿಸಿ ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಭೆಯ ಮುಂದೆ ಮೊಣಕಾಲೂರಿ ಆಕಾಶಕ್ಕೆ ತನ್ನ ಕೈಗಳನ್ನು ಚಾಚಿ--
14 and he said, O Jehovah, the God of Israel, there is no God like thee, in heaven, or on earth; who keepest covenant and lovingkindness with thy servants, that walk before thee with all their heart;ಇಸ್ರಾಯೇಲಿನ ದೇವರಾದ ಓ ಕರ್ತನೇ, ಆಕಾಶದಲ್ಲಾದರೂ ಭೂಮಿಯಲ್ಲಾ ದರೂ ನಿನ್ನ ಹಾಗೆ ದೇವರು ಯಾರೂ ಇಲ್ಲ. ತಮ್ಮ ಸಂಪೂರ್ಣ ಹೃದಯದಿಂದ ನಡೆಯುವ ನಿನ್ನ ಸೇವಕರಿ ಗೋಸ್ಕರ ಒಡಂಬಡಿಕೆಯನ್ನು ಕೈಕೊಂಡು ಕೃಪೆಯನ್ನು ತೋರಿಸುತ್ತಿ.
15 who hast kept with thy servant David my father that which thou didst promise him: yea, thou spakest with thy mouth, and hast fulfilled it with thy hand, as it is this day.ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.
16 Now therefore, O Jehovah, the God of Israel, keep with thy servant David my father that which thou hast promised him, saying, There shall not fail thee a man in my sight to sit on the throne of Israel, if only thy children take heed to their way, to walk in my law as thou hast walked before me.ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
17 Now therefore, O Jehovah, the God of Israel, let thy word be verified, which thou spakest unto thy servant David.ಈಗ ಇಸ್ರಾಯೇಲಿನ ದೇವ ರಾದ ಓ ಕರ್ತನೇ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನಿಶ್ಚಯವಾಗಲಿ.
18 But will God in very deed dwell with men on the earth? behold, heaven and the heaven of heavens cannot contain thee; how much less this house which I have builded!ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
19 Yet have thou respect unto the prayer of thy servant, and to his supplication, O Jehovah my God, to hearken unto the cry and to the prayer which thy servant prayeth before thee;ನನ್ನ ದೇವರಾದ ಓ ಕರ್ತನೇ, ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ಮೊರೆಯನ್ನೂ ಕೇಳುವ ಹಾಗೆ ನಿನ್ನ ಸೇವಕನ ಪ್ರಾರ್ಥನೆಯನ್ನೂ ಅವನ ವಿಜ್ಞಾಪನೆಯನ್ನೂ ಕಟಾಕ್ಷಿಸು.
20 that thine eyes may be open toward this house day and night, even toward the place whereof thou hast said that thou wouldest put thy name there; to hearken unto the prayer which thy servant shall pray toward this place.ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
21 And hearken thou to the supplications of thy servant, and of thy people Israel, when they shall pray toward this place: yea, hear thou from thy dwelling-place, even from heaven; and when thou hearest forgive.ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
22 If a man sin against his neighbor, and an oath be laid upon him to cause him to swear, and he come `and' swear before thine altar in this house;ಯಾವನಾದರೂ ತನ್ನ ನೆರೆಯವ ನಿಗೆ ವಿರೋಧವಾಗಿ ಪಾಪಮಾಡಿ ಅವನು ಆಣೆಇಡಬೇಕೆಂದು ನೇಮಿಸಲು
23 then hear thou from heaven, and do, and judge thy servants, requiting the wicked, to bring his way upon his own head; and justifying the righteous, to give him according to his righteousness.ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
24 And if thy people Israel be smitten down before the enemy, because they have sinned against thee, and shall turn again and confess thy name, and pray and make supplication before thee in this house;ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
25 then hear thou from heaven, and forgive the sin of thy people Israel, and bring them again unto the land which thou gavest to them and to their fathers.ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
26 When the heavens are shut up, and there is no rain, because they have sinned against thee; if they pray toward this place, and confess thy name, and turn from their sin, when thou dost afflict them:ಅವರು ನಿನಗೆ ವಿರೋಧವಾಗಿ ಪಾಪಮಾಡಿ ದ್ದರಿಂದ ಆಕಾಶವು ಮುಚ್ಟಲ್ಪಟ್ಟು ಮಳೆ ಇಲ್ಲದಿರು ವಾಗ ನೀನು ಅವರನ್ನು ಶಿಕ್ಷಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸಿ ನಿನ್ನ ಹೆಸರನ್ನು ಕೊಂಡಾಡಿ ತಮ್ಮ ಪಾಪವನ್ನು ಬಿಟ್ಟು ತಿರುಗಿಕೊಂಡರೆ
27 then hear thou in heaven, and forgive the sin of thy servants, and of thy people Israel, when thou teachest them the good way wherein they should walk; and send rain upon thy land, which thou hast given to thy people for an inheritance.ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
28 If there be in the land famine, if there be pestilence, if there be blasting or mildew, locust or caterpillar; if their enemies besiege them in the land of their cities; whatsoever plague or whatsoever sickness there be;ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
29 what prayer and supplication soever be made by any man, or by all thy people Israel, who shall know every man his own plague and his own sorrow, and shall spread forth his hands toward this house:ನಿನ್ನ ಜನವಾದ ಸಮಸ್ತ ಇಸ್ರಾಯೇಲಾದರೂ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ಮಾಡಲು ಅವರು ತಮ್ಮ ಕೈಗಳನ್ನು ಈ ಆಲಯದ ಕಡೆಗೆ ಚಾಚಿದರೆ
30 then hear thou from heaven thy dwelling-place and forgive, and render unto every man according to all his ways, whose heart thou knowest; (for thou, even thou only, knowest the hearts of the children of men;)ನೀನು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ಬದು ಕುವ ವರೆಗೆ ಅವರು ನಿನಗೆ ಭಯಪಟ್ಟು ನಿನ್ನ ಮಾರ್ಗ ದಲ್ಲಿ ನಡೆಯುವ ಹಾಗೆ
31 that they may fear thee, to walk in thy ways, so long as they live in the land which thou gavest unto our fathers.ನೀನು ಅಕಾಶದಿಂದ ಅಂದರೆ ನೀನು ವಾಸಮಾಡುವ ಸ್ಥಳದಿಂದ ಕೇಳಿ ಮನ್ನಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರಕೊಡು; ಯಾಕಂದರೆ ನೀನೊಬ್ಬನೇ ಸಮಸ್ತ ಮನುಷ್ಯ ಮಕ್ಕಳ ಹೃದಯಗಳನ್ನು ತಿಳಿದವನಾಗಿದ್ದೀ.
32 Moreover concerning the foreigner, that is not of thy people Israel, when he shall come from a far country for thy great name's sake, and thy mighty hand, and thine outstretched arm; when they shall come and pray toward this house:ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ,
33 then hear thou from heaven, even from thy dwelling-place, and do according to all that the foreigner calleth to thee for; that all the peoples of the earth may know thy name, and fear thee, as doth thy people Israel, and that they may know that this house which I have built is called by thy name.ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
34 If thy people go out to battle against their enemies, by whatsoever way thou shalt send them, and they pray unto thee toward this city which thou hast chosen, and the house which I have built for thy name;ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
35 then hear thou from heaven their prayer and their supplication, and maintain their cause.ನೀನು ಆಕಾಶದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
36 If they sin against thee (for there is no man that sinneth not), and thou be angry with them, and deliver them to the enemy, so that they carry them away captive unto a land far off or near;ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
37 yet if they shall bethink themselves in the land whither they are carried captive, and turn again, and make supplication unto thee in the land of their captivity, saying, We have sinned, we have done perversely, and have dealt wickedly;ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿರಲಾಗಿ ಅವರು ಸೆರೆಯಾಗಿ ಒಯ್ಯಲ್ಪಟ್ಟ ದೇಶದಲ್ಲಿ ಮನಸ್ಸು ತಿರಿಗಿಸಿ ಪಶ್ಚಾತ್ತಾಪ ಪಟ್ಟು--ನಾವು ಪಾಪಮಾಡಿದ್ದೇವೆ, ಅಕೃತ್ಯಮಾಡಿ ದುಷ್ಟರಾಗಿ ನಡೆದಿದ್ದೇವೆ ಎಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ಪ್ರಾರ್ಥನೆ ಮಾಡಿ
38 if they return unto thee with all their heart and with all their soul in the land of their captivity, whither they have carried them captive, and pray toward their land, which thou gavest unto their fathers, and the city which thou hast chosen, and toward the house which I have built for thy name:ಅವರನ್ನು ಸೆರೆಯಾಗಿ ಒಯ್ದದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣಪ್ರಾಣ ದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಆಲಯದ ಮಾರ್ಗವಾಗಿಯೂ ಅವರು ಪ್ರಾರ್ಥನೆ ಮಾಡಿದರೆ
39 then hear thou from heaven, even from thy dwelling-place, their prayer and their supplications, and maintain their cause, and forgive thy people who have sinned against thee.ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿ ನಿನ್ನ ಜನರು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಮನ್ನಿಸು.
40 Now, O my God, let, I beseech thee, thine eyes be open, and let thine ears be attent, unto the prayer that is made in this place.ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.
41 Now therefore arise, O Jehovah God, into thy resting-place, thou, and the ark of thy strength: let thy priests, O Jehovah God, be clothed with salvation, and let thy saints rejoice in goodness.ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.
42 O Jehovah God, turn not away the face of thine anointed: remember `thy' lovingkindnesses to David thy servant.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
Kannada Bible