2 Corinthians 1 - BBE (Kannada)
1 Paul, an Apostle of Jesus Christ by the purpose of God, and Timothy the brother, to the church of God which is in Corinth, with all the saints who are in all Achaia:ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
2 Grace to you and peace from God our Father and the Lord Jesus Christ.ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3 Praise be to the God and Father of our Lord Jesus Christ, the Father of mercies and the God of all comfort;ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.
4 Who gives us comfort in all our troubles, so that we may be able to give comfort to others who are in trouble, through the comfort with which we ourselves are comforted by God.ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
5 For as we undergo more of the pain which Christ underwent, so through Christ does our comfort become greater.ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
6 But if we are troubled, it is for your comfort and salvation; or if we are comforted, it is for your comfort, which takes effect through your quiet undergoing of the same troubles which we undergo:ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
7 And our hope for you is certain; in the knowledge that as you take part in the troubles, so you will take part in the comfort.ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
8 For it is our desire that you may not be without knowledge of our trouble which came on us in Asia, that the weight of it was very great, more than our power, so that it seemed that we had no hope even of life:ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
9 Yes, we ourselves have had the answer of death in ourselves, so that our hope might not be in ourselves, but in God who is able to give life to the dead:ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.
10 Who gave us salvation from so great a death: on whom we have put our hope that he will still go on to give us salvation;ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
11 You at the same time helping together by your prayer for us; so that for what has been given to us through a number of persons, praise may go up to God for us from all of them.ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
12 For our glory is in this, in the knowledge which we have that our way of life in the world, and most of all in relation to you, has been holy and true in the eyes of God; not in the wisdom of the flesh, but in the grace of God.ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
13 For in our letters we say no other things to you, but those which you are reading, and to which you give agreement, and, it is my hope, will go on doing so to the end:ನೀವು ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ; ಹಾಗೆಯೇ ನೀವು ಕಡೇತನಕ ಒಪ್ಪಿಕೊಳ್ಳುವಿರೆಂದು ನಾನು ಭರವಸವುಳ್ಳವನಾಗಿದ್ದೇನೆ.
14 Even as you have been ready, in part, to say that we are your glory, in the same way that you are ours, in the day of the Lord Jesus.ನೀವು ಸಹ ಸ್ವಲ್ಪಮಟ್ಟಿಗೆ ನಮ್ಮನ್ನು ಒಪ್ಪಿಕೊಂಡು ನಮ್ಮ ಕರ್ತನಾದ ಯೇಸುವಿನ ದಿನದಲ್ಲಿ ನೀವು ನಮಗೆ ಉಲ್ಲಾಸಕ್ಕೆ ಕಾರಣರಾಗಿರುವಂತೆಯೇ ನಾವು ನಿಮಗೆ ಉಲ್ಲಾಸಕ್ಕೆ ಕಾರಣರಾಗಿದ್ದೇವೆ.
15 And being certain of this, it was my purpose to come to you before, so that you might have a second grace;ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
16 And by way of Corinth to go into Macedonia, and from there to come back again to you, so that you might send me on my way to Judaea.ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
17 If then I had such a purpose, did I seem to be changing suddenly? or am I guided in my purposes by the flesh, saying, Yes, today, and, No, tomorrow?ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
18 As God is true, our word to you is not Yes and No.ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
19 For the Son of God, Jesus Christ, whom we were preaching among you, even I and Silvanus and Timothy, was not Yes and No, but in him is Yes.ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
20 For he is the Yes to all the undertakings of God: and by him all the words of God are made certain and put into effect, to the glory of God through us.ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
21 Now he who makes our faith strong together with you, in Christ, and has given us of his grace, is God;ಕ್ರಿಸ್ತನಲ್ಲಿ ನಿಮ್ಮೊಂದಿಗೆ ನಮ್ಮನ್ನು ಸ್ಥಿರಪಡಿಸಿ ನಮ್ಮನ್ನು ಅಭಿಷೇಕಿಸಿದಾತನು ದೇವರೇ;
22 And it is he who has put his stamp on us, even the Spirit, as the sign in our hearts of the coming glory.ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
23 But God is my witness that it was in pity for you that I did not come to Corinth at that time.ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.
24 Not that we have authority over your faith, but we are helpers of your joy: for it is faith which is your support.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
Kannada Bible