2 Corinthians 13 - WEB (Kannada)
1 This is the third time I am coming to you. "At the mouth of two or three witnesses shall every word established."ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
2 I have said beforehand, and I do say beforehand, as when I was present the second time, so now, being absent, I write to those who have sinned before now, and to all the rest, that, if I come again, I will not spare;ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
3 seeing that you seek a proof of Christ who speaks in me; who toward you is not weak, but is powerful in you.ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
4 For he was crucified through weakness, yet he lives through the power of God. For we also are weak in him, but we will live with him through the power of God toward you.ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
5 Test your own selves, whether you are in the faith. Test your own selves. Or don't you know as to your own selves, that Jesus Christ is in you?--unless indeed you are disqualified.ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
6 But I hope that you will know that we aren't disqualified.ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.
7 Now I pray to God that you do no evil; not that we may appear approved, but that you may do that which is honorable, though we are as reprobate.ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
8 For we can do nothing against the truth, but for the truth.ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
9 For we rejoice when we are weak and you are strong. And this we also pray for, even your perfecting.ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
10 For this cause I write these things while absent, that I may not deal sharply when present, according to the authority which the Lord gave me for building up, and not for tearing down.ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
11 Finally, brothers, rejoice. Be perfected, be comforted, be of the same mind, live in peace, and the God of love and peace will be with you.ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
12 Greet one another with a holy kiss.ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
13 All the saints greet you.ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.
14 The grace of the Lord Jesus Christ, the love of God, and the communion of the Holy Spirit, be with you all. Amen.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Kannada Bible