2 Kings 3 - WEB (Kannada)
1 Now Jehoram the son of Ahab began to reign over Israel in Samaria in the eighteenth year of Jehoshaphat king of Judah, and reigned twelve years.ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು.
2 He did that which was evil in the sight of Yahweh, but not like his father, and like his mother; for he put away the pillar of Baal that his father had made.ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
3 Nevertheless he cleaved to the sins of Jeroboam the son of Nebat, with which he made Israel to sin; he didn't depart from it.ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
4 Now Mesha king of Moab was a sheep-master; and he rendered to the king of Israel the wool of one hundred thousand lambs, and of one hundred thousand rams.ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
5 But it happened, when Ahab was dead, that the king of Moab rebelled against the king of Israel.ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು.
6 King Jehoram went out of Samaria at that time, and mustered all Israel.ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
7 He went and sent to Jehoshaphat the king of Judah, saying, The king of Moab has rebelled against me: will you go with me against Moab to battle? He said, I will go up: I am as you are, my people as your people, my horses as your horses.ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು.
8 He said, Which way shall we go up? He answered, The way of the wilderness of Edom.ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು.
9 So the king of Israel went, and the king of Judah, and the king of Edom; and they made a circuit of seven days' journey: and there was no water for the host, nor for the animals that followed them.ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು.
10 The king of Israel said, Alas! for Yahweh has called these three kings together to deliver them into the hand of Moab.ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
11 But Jehoshaphat said, Isn't there here a prophet of Yahweh, that we may inquire of Yahweh by him? One of the king of Israel's servants answered, Elisha the son of Shaphat is here, who poured water on the hands of Elijah.ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
12 Jehoshaphat said, The word of Yahweh is with him. So the king of Israel and Jehoshaphat and the king of Edom went down to him.ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
13 Elisha said to the king of Israel, What have I to do with you? get you to the prophets of your father, and to the prophets of your mother. The king of Israel said to him, No; for Yahweh has called these three kings together to deliver them into the hand of Moab.ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು.
14 Elisha said, As Yahweh of Hosts lives, before whom I stand, surely, were it not that I regard the presence of Jehoshaphat the king of Judah, I would not look toward you, nor see you.ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
15 But now bring me a minstrel. It happened, when the minstrel played, that the hand of Yahweh came on him.ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
16 He said, Thus says Yahweh, Make this valley full of trenches.ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ.
17 For thus says Yahweh, You shall not see wind, neither shall you see rain; yet that valley shall be filled with water, and you shall drink, both you and your cattle and your animals.ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
18 This is but a light thing in the sight of Yahweh: he will also deliver the Moabites into your hand.ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು.
19 You shall strike every fortified city, and every choice city, and shall fell every good tree, and stop all springs of water, and mar every good piece of land with stones.ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
20 It happened in the morning, about the time of offering the offering, that behold, there came water by the way of Edom, and the country was filled with water.ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
21 Now when all the Moabites heard that the kings had come up to fight against them, they gathered themselves together, all who were able to put on armor, and upward, and stood on the border.ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.
22 They rose up early in the morning, and the sun shone on the water, and the Moabites saw the water over against them as red as blood:ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
23 and they said, This is blood; the kings are surely destroyed, and they have struck each man his fellow: now therefore, Moab, to the spoil.ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು.
24 When they came to the camp of Israel, the Israelites rose up and struck the Moabites, so that they fled before them; and they went forward into the land smiting the Moabites.ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು.
25 They beat down the cities; and on every good piece of land they cast every man his stone, and filled it; and they stopped all the springs of water, and felled all the good trees, until in Kir Hareseth [only] they left the stones of it; however the men armed with slings went about it, and struck it.ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
26 When the king of Moab saw that the battle was too severe for him, he took with him seven hundred men who drew sword, to break through to the king of Edom; but they could not.ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.
27 Then he took his eldest son who would have reigned in his place, and offered him for a burnt offering on the wall. There was great wrath against Israel: and they departed from him, and returned to their own land.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
Kannada Bible