2 Kings 8
16 ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಐದನೇ ವರುಷ ದಲ್ಲಿ ಯೆಹೂದದ ಅರಸನಾಗಿರುವ ಯೆಹೋಷಾಫಾ ಟನ ಮಗನಾದ ಯೆಹೋರಾಮನು ಆಳಲಾರಂಭಿಸಿ ದನು.
17 ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
18 ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
19 ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
20 ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
21 ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
22 ಜನರು ತಮ್ಮ ಡೇರೆಗಳಿಗೆ ಓಡಿಹೋದರು. ಆದರೆ ಎದೋಮು ಯೆಹೂದದ ಕೈಕೆಳಗೆ ಇರದ ಹಾಗೆ ಅಂದಿನಿಂದ ಈ ವರೆಗೂ ತಿರುಗಿ ಬಿತ್ತು. ಆ ಕಾಲ ದಲ್ಲಿಯೇ ಲಿಬ್ನ ತಿರುಗಿ ಬಿತ್ತು.
23 ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪ ಡಲಿಲ್ಲವೋ?
24 ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು; ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.