2 Samuel 7 - WEB (Kannada)
1 It happened, when the king lived in his house, and Yahweh had given him rest from all his enemies round about,ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
2 that the king said to Nathan the prophet, See now, I dwell in a house of cedar, but the ark of God dwells within curtains.ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
3 Nathan said to the king, Go, do all that is in your heart; for Yahweh is with you.ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
4 It happened the same night, that the word of Yahweh came to Nathan, saying,ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--
5 Go and tell my servant David, Thus says Yahweh, Shall you build me a house for me to dwell in?ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?
6 for I have not lived in a house since the day that I brought up the children of Israel out of Egypt, even to this day, but have walked in a tent and in a tent.ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
7 In all places in which I have walked with all the children of Israel, spoke I a word with any of the tribes of Israel, whom I commanded to be shepherd of my people Israel, saying, Why have you not built me a house of cedar?ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?
8 Now therefore thus shall you tell my servant David, Thus says Yahweh of Hosts, I took you from the sheep pen, from following the sheep, that you should be prince over my people, over Israel;ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
9 and I have been with you wherever you went, and have cut off all your enemies from before you; and I will make you a great name, like the name of the great ones who are in the earth.ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
10 I will appoint a place for my people Israel, and will plant them, that they may dwell in their own place, and be moved no more; neither shall the children of wickedness afflict them any more, as at the first,ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
11 and [as] from the day that I commanded judges to be over my people Israel; and I will cause you to rest from all your enemies. Moreover Yahweh tells you that Yahweh will make you a house.ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
12 When your days are fulfilled, and you shall sleep with your fathers, I will set up your seed after you, who shall proceed out of your bowels, and I will establish his kingdom.ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
13 He shall build a house for my name, and I will establish the throne of his kingdom forever.ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
14 I will be his father, and he shall be my son: if he commit iniquity, I will chasten him with the rod of men, and with the stripes of the children of men;ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
15 but my loving kindness shall not depart from him, as I took it from Saul, whom I put away before you.ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.
16 Your house and your kingdom shall be made sure for ever before you: your throne shall be established forever.ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
17 According to all these words, and according to all this vision, so did Nathan speak to David.ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
18 Then David the king went in, and sat before Yahweh; and he said, Who am I, Lord Yahweh, and what is my house, that you have brought me thus far?ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?
19 This was yet a small thing in your eyes, Lord Yahweh; but you have spoken also of your servant's house for a great while to come; and this [too] after the manner of men, Lord Yahweh!ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?
20 What can David say more to you? for you know your servant, Lord Yahweh.ದಾವೀದನು ಇನ್ನು ನಿನಗೆ ಹೆಚ್ಚಾಗಿ ಹೇಳಿಕೊಳ್ಳುವದೇನಿದೆ?
21 For your word's sake, and according to your own heart, have you worked all this greatness, to make your servant know it.ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ಈ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
22 Therefore you are great, Yahweh God: for there is none like you, neither is there any God besides you, according to all that we have heard with our ears.ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.
23 What one nation in the earth is like your people, even like Israel, whom God went to redeem to himself for a people, and to make him a name, and to do great things for you, and awesome things for your land, before your people, whom you redeem to you out of Egypt, [from] the nations and their gods?ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
24 You did establish to yourself your people Israel to be a people to you forever; and you, Yahweh, became their God.ಇಸ್ರಾ ಯೇಲ್ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.
25 Now, Yahweh God, the word that you have spoken concerning your servant, and concerning his house, confirm you it forever, and do as you have spoken.ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
26 Let your name be magnified forever, saying, Yahweh of hosts is God over Israel; and the house of your servant David shall be established before you.ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.
27 For you, Yahweh of Hosts, the God of Israel, have revealed to your servant, saying, I will build you a house: therefore has your servant found in his heart to pray this prayer to you.ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
28 Now, O Lord Yahweh, you are God, and your words are truth, and you have promised this good thing to your servant:ಈಗ ಓ ಕರ್ತನಾದ ದೇವರೇ, ನೀನೇ ದೇವರಾದಾತನು, ನಿನ್ನ ವಾಕ್ಯಗಳು ಸತ್ಯವು; ನಿನ್ನ ದಾಸನಿಗೆ ಈ ಒಳ್ಳೇದನ್ನು ವಾಗ್ದಾನಮಾಡಿದಿ.
29 now therefore let it please you to bless the house of your servant, that it may continue forever before you; for you, Lord Yahweh, have spoken it: and with your blessing let the house of your servant be blessed forever.ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
Kannada Bible