Acts 18:1-11 in Kannada
Acts 18:1
ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
Acts 18:2
ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
Acts 18:3
ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
Acts 18:4
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
Acts 18:5
ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
Acts 18:6
ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
Acts 18:7
ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
Acts 18:8
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
Acts 18:9
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
Acts 18:10
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
Acts 18:11
ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
Kannada Bible