Acts 18 - YLT (Kannada)
1 And after these things, Paul having departed out of Athens, came to Corinth,ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು
2 and having found a certain Jew, by name Aquilas, of Pontus by birth, lately come from Italy, and Priscilla his wife -- because of Claudius having directed all the Jews to depart out of Rome -- he came to them,ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
3 and because of being of the same craft, he did remain with them, and was working, for they were tent-makers as to craft;ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
4 and he was reasoning in the synagogue every sabbath, persuading both Jews and Greeks.ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
5 And when both Silas and Timotheus came down from Macedonia, Paul was pressed in the Spirit, testifying fully to the Jews Jesus the Christ;ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
6 and on their resisting and speaking evil, having shaken `his' garments, he said unto them, `Your blood `is' upon your head -- I am clean; henceforth to the nations I will go on.'ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
7 And having departed thence, he went to the house of a certain one, by name Justus, a worshipper of God, whose house was adjoining the synagogue,ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.
8 and Crispus, the ruler of the synagogue did believe in the Lord with all his house, and many of the Corinthians hearing were believing, and they were being baptized.ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
9 And the Lord said through a vision in the night to Paul, `Be not afraid, but be speaking and thou mayest be not silent;ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
10 because I am with thee, and no one shall set on thee to do thee evil; because I have much people in this city;'ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
11 and he continued a year and six months, teaching among them the word of God.ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
12 And Gallio being proconsul of Achaia, the Jews made a rush with one accord upon Paul, and brought him unto the tribunal,ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
13 saying -- `Against the law this one doth persuade men to worship God;'ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು.
14 and Paul being about to open `his' mouth, Gallio said unto the Jews, `If, indeed, then, it was anything unrighteous, or an act of wicked profligacy, O Jews, according to reason I had borne with you,ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ.
15 but if it is a question concerning words and names, and of your law, look ye yourselves `to it', for a judge of these things I do not wish to be,'ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
16 and he drave them from the tribunal;ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
17 and all the Greeks having taken Sosthenes, the chief man of the synagogue, were beating `him' before the tribunal, and not even for these things was Gallio caring.ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
18 And Paul having remained yet a good many days, having taken leave of the brethren, was sailing to Syria -- and with him `are' Priscilla and Aquilas -- having shorn `his' head in Cenchera, for he had a vow;ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
19 and he came down to Ephesus, and did leave them there, and he himself having entered into the synagogue did reason with the Jews:ಎಫೆಸಕ್ಕೆ ಬಂದು ಅವರನ್ನು ಅಲ್ಲಿ ಬಿಟ್ಟನು; ತಾನಾದರೋ ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ತರ್ಕಿಸಿದನು.
20 and they having requested `him' to remain a longer time with them, he did not consent,ಅವರು ಅವ ನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿ ಕೊಂಡಾಗ ಅವನು ಒಪ್ಪದೆ--
21 but took leave of them, saying, `It behoveth me by all means the coming feast to keep at Jerusalem, and again I will return unto you -- God willing.' And he sailed from Ephesus,ಯೆರೂಸಲೇಮಿನಲ್ಲಿ ಬರುವ ಈ ಹಬ್ಬಕ್ಕೆ ನಾನು ಹೇಗಾದರೂ ಅಲ್ಲಿ ಇರತಕ್ಕದ್ದು; ದೇವರ ಚಿತ್ತವಾದರೆ ನಾನು ಹಿಂದಿರುಗಿ ನಿಮ್ಮ ಬಳಿಗೆ ಬರುತ್ತೇನೆ ಎಂದು ಹೇಳಿ ಅವರ ಅಪ್ಪಣೆ ತಕ್ಕೊಂಡು ಎಫೆಸದಿಂದ ಸಮುದ್ರ ಪ್ರಯಾಣಮಾಡಿ ದನು.
22 and having come down to Cesarea, having gone up, and having saluted the assembly, he went down to Antioch.ಅವನು ಕೈಸರೈಯಕ್ಕೆ ಬಂದು ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೋದನು.
23 And having made some stay he went forth, going through in order the region of Galatia and Phrygia, strengthening all the disciples.ತರುವಾಯ ಅವನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರುಗ್ಯದಲ್ಲಿಯೂ ಸಂಚಾರ ಮಾಡುತ್ತಾ ಶಿಷ್ಯರೆಲ್ಲರನ್ನು ಬಲಪಡಿಸಿದನು.
24 And a certain Jew, Apollos by name, an Alexandrian by birth, a man of eloquence, being mighty in the Writings, came to Ephesus,ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಬರಹ ಗಳಲ್ಲಿ ಸಮರ್ಥನು ಆಗಿದ್ದನು.
25 this one was instructed in the way of the Lord, and being fervent in the Spirit, was speaking and teaching exactly the things about the Lord, knowing only the baptism of John;ಇವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದ ವನಾಗಿದ್ದನು; ಆತ್ಮದಲ್ಲಿ ಆಸಕ್ತನಾಗಿದ್ದ ಇವನು ಯೋಹಾನನು ಮಾಡಿಸಿದ ಬಾಪ್ತಿಸ್ಮವನ್ನು ಮಾತ್ರ ಬಲ್ಲವನಾಗಿದ್ದನು. ಆದಾಗ್ಯೂ ಕರ್ತನ ವಿಷಯಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸುತ್ತಿದ್ದನು.
26 this one also began to speak boldly in the synagogue, and Aquilas and Priscilla having heard of him, took him to `them', and did more exactly expound to him the way of God,ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
27 and he being minded to go through into Achaia, the brethren wrote to the disciples, having exhorted them to receive him, who having come, did help them much who have believed through the grace,ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;
28 for powerfully the Jews he was refuting publicly, shewing through the Writings Jesus to be the Christ.ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
Kannada Bible