Acts 26 - WEB (Kannada)
1 Agrippa said to Paul, "You may speak for yourself." Then Paul stretched out his hand, and made his defense.ಆಗ ಅಗ್ರಿಪ್ಪನು ಪೌಲನಿಗೆ--ನೀನು ನಿನ್ನ ಪಕ್ಷದಲ್ಲಿ ಮಾತನಾಡುವದಕ್ಕೆ ಅಪ್ಪಣೆ ಆಯಿತು ಎಂದು ಹೇಳಿದನು. ಆಗ ಪೌಲನು ಕೈಚಾಚಿ ತನಗಾಗಿ ಪ್ರತಿವಾದಿಸುತ್ತಾ--
2 "I think myself happy, King Agrippa, that I am to make my defense before you this day concerning all the things that I am accused by the Jews,ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
3 especially because you are expert in all customs and questions which are among the Jews. Therefore I beg you to hear me patiently.ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
4 "Indeed, all the Jews know my way of life from my youth up, which was from the beginning among my own nation and at Jerusalem;ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ.
5 having known me from the first, if they are willing to testify, that after the strictest sect of our religion I lived a Pharisee.ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
6 Now I stand here to be judged for the hope of the promise made by God to our fathers,ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
7 which our twelve tribes, earnestly serving night and day, hope to attain. Concerning this hope I am accused by the Jews, King Agrippa!ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
8 Why is it judged incredible with you, if God does raise the dead?ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?
9 "I myself most assuredly thought that I ought to do many things contrary to the name of Jesus of Nazareth.ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
10 This I also did in Jerusalem. I both shut up many of the saints in prisons, having received authority from the chief priests, and when they were put to death I gave my vote against them.ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.
11 Punishing them often in all the synagogues, I tried to make them blaspheme. Being exceedingly enraged against them, I persecuted them even to foreign cities.ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
12 "Whereupon as I traveled to Damascus with the authority and commission from the chief priests,ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು.
13 at noon, O King, I saw on the way a light from the sky, brighter than the sun, shining around me and those who traveled with me.ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
14 When we had all fallen to the earth, I heard a voice saying to me in the Hebrew language, 'Saul, Saul, why are you persecuting me? It is hard for you to kick against the goads.'ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
15 "I said, 'Who are you, Lord?' "He said, 'I am Jesus, whom you are persecuting.ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು.
16 But arise, and stand on your feet, for I have appeared to you for this purpose: to appoint you a servant and a witness both of the things which you have seen, and of the things which I will reveal to you;ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
17 delivering you from the people, and from the Gentiles, to whom I send you,ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
18 to open their eyes, that they may turn from darkness to light and from the power of Satan to God, that they may receive remission of sins and an inheritance among those who are sanctified by faith in me.'ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
19 "Therefore, King Agrippa, I was not disobedient to the heavenly vision,ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
20 but declared first to them of Damascus, at Jerusalem, and throughout all the country of Judea, and also to the Gentiles, that they should repent and turn to God, doing works worthy of repentance.ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
21 For this reason the Jews seized me in the temple, and tried to kill me.ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.
22 Having therefore obtained the help that is from God, I stand to this day testifying both to small and great, saying nothing but what the prophets and Moses said would happen,ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
23 how the Christ must suffer, and how, by the resurrection of the dead, he would be first to proclaim light both to these people and to the Gentiles."ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
24 As he thus made his defense, Festus said with a loud voice, "Paul, you are crazy! Your great learning is driving you insane!"ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
25 But he said, "I am not crazy, most excellent Festus, but boldly declare words of truth and reasonableness.ಆದರೆ ಅವನು--ಗೌರವವುಳ್ಳ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯಿಂದ ಸತ್ಯವಾದ ಮಾತುಗಳನ್ನೇ ಹೇಳು ತ್ತೇನೆ.
26 For the king knows of these things, to whom also I speak freely. For I am persuaded that none of these things is hidden from him, for this has not been done in a corner.ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ; ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ; ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ.
27 King Agrippa, do you believe the prophets? I know that you believe."ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.
28 Agrippa said to Paul, "With a little persuasion are you trying to make me a Christian?"ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
29 Paul said, "I pray to God, that whether with little or with much, not only you, but also all that hear me this day, might become such as I am, except for these bonds."ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
30 The king rose up with the governor, and Bernice, and those who sat with them.ಅವನು ಹೀಗೆ ಮಾತನಾಡಿದಾಗ ರಾಜನೂ ಅಧಿಪತಿಯೂ ಬೆರ್ನಿಕೆಯೂ ಅವರೊಂದಿಗೆ ಕೂಡಿ ದ್ದವರೂ ಎದ್ದರು.
31 When they had withdrawn, they spoke one to another, saying, "This man does nothing worthy of death or of bonds."ಅವರು ಆಚೆಗೆ ಹೋಗಿ--ಈ ಮನುಷ್ಯನು ಮರಣದಂಡನೆಗಾಗಲೀ ಬೇಡಿಗಳಿ ಗಾಗಲೀ ಯೋಗ್ಯವಾದ ಯಾವದನ್ನೂ ಮಾಡಲಿಲ್ಲ ವೆಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
32 Agrippa said to Festus, "This man might have been set free if he had not appealed to Caesar."ಆಗ ಅಗ್ರಿಪ್ಪನು ಫೆಸ್ತನಿಗೆ--ಈ ಮನುಷ್ಯನು ಕೈಸರನಿಗೆ ಹೇಳಿ ಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.
Kannada Bible