Acts 27:13-38 in Kannada
Acts 27:13
ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
Acts 27:14
ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
Acts 27:15
ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
Acts 27:16
ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು.
Acts 27:17
ಅದನ್ನು ಮೇಲಕ್ಕೆ ಎತ್ತಿ ಸಾಧನಗಳಿಂದ ಹಡಗಿನ ಕೆಳಭಾಗವನ್ನು ಬಿಗಿಯಾಗಿ ಕಟ್ಟಿದರು. ಆಮೇಲೆ ಕಳ್ಳುಸುಬಿಗೆ ನಾವು ಸಿಕ್ಕಿಕೊಂಡೇವೆಂದು ಭಯಪಟ್ಟು ಹಾಯಿಯನ್ನು ಸಡಿಲು ಮಾಡಿ ನೂಕಿಸಿಕೊಂಡು ಹೋದೆವು.
Acts 27:18
ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
Acts 27:19
ಮೂರನೆಯ ದಿನ ನಮ್ಮ ಕೈಗಳಿಂದಲೇ ಹಡಗಿನ ಸಾಮಾನುಗಳನ್ನು ಎತ್ತಿ ಹೊರಗೆ ಹಾಕಿದೆವು.
Acts 27:20
ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
Acts 27:21
ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
Acts 27:22
ಆದಾಗ್ಯೂ ನೀವು ಧೈರ್ಯದಿಂದ ಇರಬೇಕೆಂದು ನಾನು ನಿಮ್ಮನ್ನು ಪ್ರೋತ್ಸಾಹಮಾಡುತ್ತೇನೆ; ಹಡಗಿಗೆ ಹೊರತು ನಿಮ್ಮಲ್ಲಿ ಯಾವ ಮನುಷ್ಯನಿಗೂ ಪ್ರಾಣ ನಷ್ಟವಾಗುವದಿಲ್ಲ.
Acts 27:23
ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
Acts 27:24
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
Acts 27:25
ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
Acts 27:26
ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.
Acts 27:27
ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;
Acts 27:28
ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.
Acts 27:29
ನಾವು ಬಂಡೆಗಳನ್ನು ತಾಕೇವೆಂದು ಭಯ ಪಟ್ಟಾಗ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರು ಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈ ಸುತ್ತಿದ್ದರು.
Acts 27:30
ನಾವಿಕರು ಹಡಗಿನ ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ನೆವದಿಂದ ದೋಣಿ ಯನ್ನು ಸಮುದ್ರದಲ್ಲಿ ಇಳಿಸಿ ಅವರು ಹಡಗಿನಿಂದ ತಪ್ಪಿಸಿಕೊಂಡು ಹೋಗಬೇಕೆಂದಿದ್ದರು:
Acts 27:31
ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
Acts 27:32
ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
Acts 27:33
ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿ--ಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ.
Acts 27:34
ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
Acts 27:35
ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
Acts 27:36
ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
Acts 27:37
ಎಲ್ಲರೂ ಸೇರಿ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.
Acts 27:38
ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
Kannada Bible