Bible

Acts 7 - BENGALI (Kannada)

1 এরপর যাজক স্তিফানকে বললেন, ‘এসব কথা কি সত্যি?’ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.

2 এর উত্তরে স্তিফান বললেন, ‘ভাইয়েরা ও এই জাতির পিতাগণ, আমার কথা শুনুন৷ আমাদের পিতৃপুরুষ অব্রাহাম হারণে বসবাস করার আগে য়ে সময় মিসপতামিযাতে ছিলেন, সেই সময় মহিমার ঈশ্বর তাঁর সামনে আবির্ভূত হয়েছিলেন৷ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--

3 আর তাঁকে বলেছিলেন, ‘তুমি তোমার স্বদেশ ও স্বজনের মধ্য থেকে চলে এস, আর আমি য়ে দেশ দেখাব সেই দেশে যাও৷’ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.

4 অব্রাহাম তখন কলদীয়ের দেশ ছেড়ে হারণে এসে বসবাস করেন৷ তাঁর বাবার মৃত্যুর পর ঈশ্বর তাঁকে সেখান থেকে এই দেশে আনলেন, য়ে দেশে এখন আপনারা বাস করছেন৷ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.

5 এখানে ঈশ্বর তাঁকে কোন ভূসম্পত্তি দিলেন না, এমন কি এক ছটাক জমিও না; কিন্তু প্রতিশ্রুতি দিলেন য়ে শেষ পর্যন্ত এই দেশটা তাঁকে ও তাঁর বংশধরদের দেবেন৷ যদিও অব্রাহামের তখনও কোন সন্তান ছিল না৷ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.

6 ঈশ্বর তাঁকে এই কথা বললেন, ‘তোমার বংশধরেরা বিদেশে প্রবাসী জীবন কাটাবে, তারা দাসত্ব-শৃঙ্খলে বদ্ধ হবে, আর সে দেশের লোকেরা তাদের প্রতি চারশো বছর ধরে অত্যাচার করবে৷ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.

7 তারা য়ে জাতির দাসত্ব করবে, আমি তাদের দণ্ড দেব৷’ঈশ্বর আরো বললেন, ‘এরপর তারা সেই দেশ থেকে বেরিয়ে এসে এখানে আমার উপাসনা করবে৷’ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.

8 এরপর অব্রাহামের সঙ্গে ঈশ্বর এক চুক্তি করলেন৷ এই চুক্তির চিহ্ন হল সুন্নত সংস্কার৷ এরপর অব্রাহামের একটি পুত্র সন্তান হল৷ আট দিনের দিন তিনি তার সুন্নত করালেন; সেই পুত্রের নাম ইসহাক৷ ইসহাকের পুত্র যাকোবেরও তারা সুন্নত করলেন৷ যাকোবের পুত্ররা বারোজন গোষ্ঠীর পিতা হলেন৷ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.

9 ‘তাদের সেই পিতাগণ য়োষেফের প্রতি ঈর্ষান্বিত হলেন৷ য়োষেফকে দাস ব্যবসাযীদের কাছে বিক্রি করা হলে তাকে মিশরে নিয়ে আসা হল, কিন্তু ঈশ্বর তাঁর সহবর্তী ছিলেন৷ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು

10 য়োষেফ সেখানে অনেক কষ্ট পেয়েছিলেন; কিন্তু ঈশ্বর তাকে তাঁর সমস্ত কষ্টের হাত থেকে উদ্ধার করলেন৷ ফরৌণ তখন মিশরের রাজা, য়োষেফের মধ্যে ঈশ্বরদত্ত বিজ্ঞতা দেখতে পেয়ে ফরৌণ তাঁকে পছন্দ করলেন৷ ফরৌণ য়োষেফকে মিশরের অধ্যক্ষরূপে নিযুক্ত করলেন, এমনকি ফরৌণের গৃহের সমস্ত পরিজনের উপরে তাকে কর্তা করলেন৷ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.

11 এরপর সারা মিশরে ও কনান দেশে প্রচণ্ড খরা হল৷ এমন খরা যাতে কোন ফসল উত্‌পন্ন হল না, এতে লোকেরা মহাকষ্টে পড়ল৷ আমাদের পিতৃপুরুষদের খাদ্যবস্তুর অভাব হল৷ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.

12 কিন্তু যাকোব শুনতে পেলেন য়ে মিশরে শস্য মজুত আছে, তখন তিনি আমাদের পিতৃপুরুষদের মিশরে পাঠালেন৷ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.

13 তাঁদের সেই ছিল প্রথমবার মিশরে যাওযা৷ তাঁরা যখন দ্বিতীয়বার সেখানে গেলেন, তখন য়োষেফ নিজে থেকে তাঁর ভাইদের কাছে আত্মপরিচয় দিলেন৷ য়োষেফের পরে পরিজনদের সংবাদ ফরৌণ শুনতে পেলেন৷ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.

14 পরে কিছু লোক পাঠিয়ে য়োষেফ তাঁর পিতা যাকোব ও তাঁর সব আত্মীয় পরিজনদের ডেকে পাঠালেন, তাঁরা মোট পঁচাত্তর জন ছিলেন৷ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.

15 এইভাবে যাকোব মিশরে গেলেন, পরে তাঁর ও আমাদের পিতৃপুরুষদের সেখানে মৃত্যু হল৷ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.

16 তাঁদের মৃতদেহ শিখিমে নিয়ে যাওযা হয়েছিল, আর সেখানে তাঁদেরকে কবরে রাখা হয়৷ এই কবরস্থান অব্রাহাম শিখিম শহরে হমোরের ছেলেদের কাছ থেকে কিছু টাকা দিয়ে কিনেছিলেন৷ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.

17 ‘মিশরে ইহুদীরা বৃদ্ধি পেয়ে বহুসংখ্যক হয়ে উঠল৷ ঈশ্বর অব্রাহামের কাছে য়ে প্রতিশ্রুতি দিয়েছিলেন তা পূর্ণ হওযার সময় হল৷ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ

18 মিশরে তখন অন্য একজন রাজা হয়েছেন৷ তিনি য়োষেফের সম্পর্কে জানতেন না৷ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.

19 এই রাজা আমাদের লোকদের সঙ্গে চাতুরী করলেন৷ তিনি আমাদের পিতৃপুরুষদের প্রতি দুর্য়্ববহার করতে লাগলেন৷ তাদের নবজাত শিশুদের জোর করে বাইরে ফেলে দিতে হুকুম দিলেন, য়েন তারা মারা যায়৷ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.

20 সেই সময় মোশির জন্ম হয়, তিনি ঈশ্বরের দৃষ্টিতে সুন্দর ছিলেন, তিন মাস পর্যন্ত তিনি তাঁর পিতার গৃহেই লালিত-পালিত হন৷ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.

21 পরে তাঁকে বাইরে রেখে দেওযা হলে ফরৌণের কন্যা তাঁকে কুড়িয়ে এনে তাঁর নিজের ছেলের মত মানুষ করেন৷ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.

22 মোশি মিশরীয়দের সমস্ত জ্ঞানে শিক্ষিত হয়ে উঠলেন, আর কথায় ও কাজে মহাক্ষমতাশালী হয়ে উঠলেন৷ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.

23 ‘মোশির বয়স যখন চল্লিশ বছর তখন তাঁর ইস্রায়েলী ভাইদের সঙ্গে দেখা করার ইচ্ছা হল৷ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.

24 মোশি দেখলেন য়ে একজন মিশরীয় একজন ইস্রায়েলীয়র প্রতি দুর্য়্ববহার করছে, তিনি তখন ইস্রায়েলী লোকটির পক্ষ সমর্থন করলেন৷ ইস্রায়েলী লোকটিকে আঘাত করার জন্য মোশি সেই মিশরীয়কে শাস্তি দিলেন এবং তাকে এমন মার দিলেন য়ে সে মরেই গেল৷ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.

25 তিনি মনে করলেন য়ে তাঁর স্বজাতীয় ভাইরা হয়তো বুঝবে য়ে তাদের উদ্ধার করতে ঈশ্বরই তাকে পাঠিয়েছেন, কিন্তু তারা তা বুঝল না৷ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

26 পরদিন, দুজন ইস্রায়েলী যখন নিজেদের মধ্যে মারামারি করছে, সেই সময় তিনি তাদের কাছে এসে তাদের মধ্যে মিলন করে দেবার জন্য বললেন, ‘দেখ, তোমরা পরস্পর ভাই৷ তবে কেন একে অপরের প্রতি দুর্য়্ববহার করছ?’ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.

27 কিন্তু অন্যায়কারী লোকটি মোশিকে ধাক্কা মেরে সরিয়ে দিয়ে বলল, ‘আমাদের বিচার করতে কে তোমাকে অধিকার দিয়েছে?ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?

28 গতকাল তুমি য়েমন সেই মিশরীয়কে খুন করেছিলে, তেমনি কি আমাকেও খুন করতে চাও?’ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.

29 একথা শুনে মোশি মিশর থেকে পালিয়ে গেলেন; আর মিদিয়নে বিদেশীরূপে বাস করতে লাগলেন৷ সেখানে তিনি অপরিচিত আগন্তুকের মতো ছিলেন৷ সেখানে থাকার সময় মোশির দুই ছেলের জন্ম হয়৷ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.

30 ‘এর চল্লিশ বছর পরে তিনি যখন সীনয় পর্বতের কাছে মরুপ্রান্তরে ছিলেন, সেখানে এক জ্বলন্ত ঝোপের আগুনের শিখার মধ্যে এক স্বর্গদূত তাঁকে দেখা দিলেন৷ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.

31 এই দেখে মোশি আশ্চর্য হয়ে আরো ভাল করে দেখবার জন্য যখন কাছে গেলেন, তখন প্রভুর এই রব শুনলেন,ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.

32 ‘আমি তোমার পিতৃপুরুষদের ঈশ্বর, অব্রাহামের, ইসহাকের ও যাকোবের ঈশ্বর৷’মোশি ভয়ে কাঁপতে লাগলেন, ভালভাবে তাকাতেও সাহস করলেন না৷ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.

33 এরপর প্রভু তাঁকে বললেন, ‘তোমার পা থেকে চটি (জুতো) খুলে ফেল, কারণ য়েখানে তুমি দাঁড়িয়ে আছ, সেই জায়গা পবিত্র৷ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.

34 মিশরে আমি আমার লোকদের দুরবস্থা ভাল করেই দেখেছি, তাদের আর্তনাদ শুনেছি, তাই আমি তাদের উদ্ধার করার জন্য নেমে এসেছি৷ মোশি, তুমি এস, এখন আমি তোমাকে মিশরে পাঠাব৷’ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.

35 ‘এই মোশিকেই ইস্রায়েলীয়রা চায় নি বলে বলেছিল, ‘কে তোমাকে আমাদের শাসক ও বিচারক বানিয়েছে?’ মোশিই সেই ব্যক্তি যাকে ঈশ্বর স্বর্গদূতের মাধ্যমে শাসনকর্তা ও ত্রাণকর্তারূপে পাঠিয়েছিলেন৷ সেই স্বর্গদূতকেই মোশি জ্বলন্ত ঝোপের মধ্যে রেখেছিলেন৷ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.

36 এরপর মোশি লোকদের মিশর থেকে বের করে আনলেন৷ তিনি মিশরে, লোহিত সাগরে আর প্রান্তরে চল্লিশ বছর ধরে বহু অলৌকিক ও পরাক্রমের কাজ করেন৷ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.

37 মোশিই তাঁর ইহুদী ভাইদের বলেছিলেন, ‘ঈশ্বর তোমাদের মধ্য থেকে এক ভাববাদী ঠিক করবেন, তিনি হবেন আমারই মতো৷’ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.

38 এই মোশিই প্রান্তরে ইহুদীদের সমাবেশে ছিলেন৷ য়ে স্বর্গদূত সীনয় পর্বতে তাঁর সঙ্গে কথা বলেছিলেন, তিনি তাঁর সঙ্গে ও আমাদের পিতৃপুরুষদের সঙ্গে ছিলেন৷ মোশি ঈশ্বরের কাছ থেকে জীবনদাযী আদেশ লাভ করে তাঁর আজ্ঞা সকল আমাদের দিয়েছিলেন৷ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

39 ‘কিন্তু আমাদের পিতৃপুরুষেরা তাঁর কথা পালন করতে চান নি, তার পরিবর্তে তাঁরা তাঁকে অগ্রাহ্য় করে মিশরে ফিরে য়েতে চেয়েছিলেন৷ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು

40 আমাদের পিতৃপুরুষরা হারোণকে বললেন, ‘মোশি আমাদের মিশর থেকে বের করে এনেছেন, কিন্তু তার কি হল আমরা কিছুই বুঝতে পারছি না৷ তাই কিছু দেবতাদের গড়ে তোল, যাঁরা আমাদেব আগে আগে যাবে ও পরিচালিত করবে৷’ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.

41 তাই লোকেরা বাছুরের এক প্রতিমা গড়ল আর সেই প্রতিমার সামনে বলিদান উত্‌সর্গ করল৷ তারা তাদের হাতে গড়া সেই দেবতাকে নিয়ে আনন্দ করতে লাগল৷ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.

42 কিন্তু ঈশ্বর তাদের প্রতি বিমুখ হলেন, তিনি তাদের আকাশের সেনা অর্থাত্ অলীক দেবতাদের পূজায় বাধা দিলেন না৷ ভাববাদীদের পুস্তকে একথা লেখা আছে:‘হে ইস্রায়েলের গোষ্ঠী, প্রান্তরে চল্লিশ বছর ধরে তোমরা তো আমার উদ্দেশ্যে পশুবলি ও নৈবেদ্য উত্‌সর্গ কর নি;ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್‌ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ

43 তোমরা মোলক দেবতার পূজার তাঁবু, রিফান দেবতার নক্ষত্রের প্রতিমূর্তি বহন করেছিলে৷ পূজা করবার জন্যই তোমরা ঐসব দেবতার মূর্তি গড়েছিলে৷ তাই আমি তোমাদের বাবিলের ওপারে নির্বাসনে পাঠাব৷’ আমোষ 5:25 -27ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.

44 ‘মরু এলাকায় আমাদের সেই পিতৃপুরুষদের কাছেই সেই সাক্ষ্য তাঁবু ছিল৷ এই পবিত্র তাঁবু তৈরী হয়েছিল সেই ধারায়, য়েভাবে নমুনা দেখিয়ে ঈশ্বর মোশিকে তা করতে বলেছিলেন৷ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.

45 পরবর্তীকালে যিহোশূয় আমাদের পিতৃপুরুষদের পরিচালিত করলে তাঁরা ভিন্ন জাতির দেশ দখল করলেন৷ আমাদের লোকেরা সেই দেশে প্রবেশ করলে ঈশ্বর সেখানকার লোকদের সেই দেশ ছেড়ে চলে য়েতে বাধ্য করলেন৷ আমাদের লোকেরা এই নতুন দেশে গেলে ঐ তাঁবুও সঙ্গে নিয়ে এলেন৷ পিতৃপুরুষদের কাছ থেকে তাঁরা এই তাঁবু পেয়েছিলেন৷ সেই তাঁবু রাজা দাযূদের সময় পর্যন্ত তাঁদের কাছে ছিল৷ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.

46 দাযূদ ঈশ্বরের দৃষ্টিতে বিশেষ অনুগ্রহ লাভ করলেন আর যাকোবের ঈশ্বরের জন্য এক গৃহ নির্মাণ করার অনুমতি চাইলেন৷ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.

47 কিন্তু দাযূদের ছেলে শলোমন তাঁর জন্য মন্দির নির্মাণ করলেন৷ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.

48 ‘কিন্তু যিনি পরমেশ্বর তিনি কখনও মানুষের হাতে তৈরী গৃহে বাস করেন না৷ এ বিষয়ে ভাববাদী বলেছেন:‘প্রভু বলেন,ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--

49 স্বর্গ আমার সিংহাসন৷ পৃথিবী আমার পা রাখার জায়গা৷ তুমি আমার জন্য কিরূপ গৃহ নির্মাণ করবে? আমার বিশ্রামের স্থান কোথায়!ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?

50 আমার হাতই কি এই বস্তুগুলি নির্মাণ করে নি!’যিশাইয় 66 :1-2ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.

51 ‘আপনারা একগুঁয়ে লোক! ঈশ্বরকে আপনারা নিজ নিজ হৃদয় সঁপে দেন নি! আপনারা তাঁর কথা শুনতে চান নি! আপনারা সব সময় পবিত্র আত্মা যা বলতে চাইছেন তা প্রতিরোধ করে আসছেন৷ আপনাদের পিতৃপুরুষরা য়েমন করেছিলেন, আপনারাও তাদের মতোই করছেন৷ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

52 এমন কোন ভাববাদী ছিলেন কি যাকে আপনাদের পিতৃপুরুষেরা নির্য়াতন করেন নি? সেই ধার্মিক ব্যক্তির আগমণের কথা যাঁরা বহুপূর্বে ঘোষণা করেছিলেন আপনাদের পিতৃপুরুষরা তাদেরকে খুন করেছেন; আর এখন আপনারা সেই ধার্মিককে শত্রুর হাতে সঁপে দিয়ে হত্যা করছেন৷ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

53 আপনারা মোশির বিধি-ব্যবস্থা পেয়েছিলেন, ঈশ্বরই তাঁর স্বর্গদূতদের মাধ্যমে তা দিয়েছিলেন, কিন্তু আপনারা তা পালন করেন নি!’ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

54 ইহুদী নেতারা স্তিফানের এইসব কথা শুনে প্রচণ্ড রেগে গেল৷ স্তিফানের প্রতি তারা ক্ষিপ্ত হয়ে উঠে দাঁতে দাঁত ঘষতে লাগল৷ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.

55 স্তিফান পবিত্র আত্মায় পূর্ণ হয়ে স্বর্গের দিকে তাকালেন আর দেখলেন ঈশ্বরের মহিমা, দেখলেন যীশু ঈশ্বরের ডানদিকে দাঁড়িয়ে আছেন৷ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--

56 তিনি বললেন, ‘দেখ! আমি দেখছি স্বর্গ খোলা রয়েছে; আর মানবপুত্র ঈশ্বরের ডানদিকে দাঁড়িয়ে আছেন!’ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.

57 তখন ইহুদী নেতারা জোরে চিত্‌কার করে উঠল, আর নিজেদের কানে হাত চাপা দিল৷ এরপর সবাই মিলে এক সঙ্গে তাঁর দিকে ছুটে গেল৷ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು

58 তারা স্তিফানকে মেরে ফেলার জন্য তাঁকে টানতে টানতে শহর থেকে বাইরে নিয়ে গিয়ে পাথর মারতে লাগল৷ যাঁরা স্তিফানের বিরুদ্ধে মিথ্যা সাক্ষ্য দিতে এসেছিল, তারা শৌল নামে এক যুবকের পায়ের কাছে তাদের আলখাল্লা খুলে জমা রাখল৷ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.

59 তারা যখন স্তিফানকে পাথর মেরে চলেছে তখন তিনি প্রার্থনা করে বললেন, ‘প্রভু যীশু আমার আত্মাকে গ্রহণ কর!’ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,

60 এরপর তিনি হাঁটু গেড়ে বসে চিত্‌কার করে বললেন, ‘প্রভু, এঁদের বিরুদ্ধে এই পাপ গন্য করো না!’ এই বলে তিনি মৃত্যুতে ঢলে পড়লেন৷ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

Kannada Bible