Bible

Amos 2 - ASV (Kannada)

1 Thus saith Jehovah: For three transgressions of Moab, yea, for four, I will not turn away the punishment thereof; because he burned the bones of the king of Edom into lime:ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.

2 but I will send a fire upon Moab, and it shall devour the palaces of Kerioth; and Moab shall die with tumult, with shouting, and with the sound of the trumpet;ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.

3 and I will cut off the judge from the midst thereof, and will slay all the princes thereof with him, saith Jehovah.ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.

4 Thus saith Jehovah: For three transgressions of Judah, yea, for four, I will not turn away the punishment thereof; because they have rejected the law of Jehovah, and have not kept his statutes, and their lies have caused them to err, after which their fathers did walk:ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.

5 but I will send a fire upon Judah, and it shall devour the palaces of Jerusalem.ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.

6 Thus saith Jehovah: For three transgressions of Israel, yea, for four, I will not turn away the punishment thereof; because they have sold the righteous for silver, and the needy for a pair of shoes-ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.

7 they that pant after the dust of the earth on the head of the poor, and turn aside the way of the meek: and a man and his father go unto the `same' maiden, to profane my holy name:ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.

8 and they lay themselves down beside every altar upon clothes taken in pledge; and in the house of their God they drink the wine of such as have been fined.ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.

9 Yet destroyed I the Amorite before them, whose height was like the height of the cedars, and he was strong as the oaks; yet I destroyed his fruit from above, and his roots from beneath.ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್‌ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.

10 Also I brought you up out of the land of Egypt, and led you forty years in the wilderness, to possess the land of the Amorite.ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.

11 And I raised up of your sons for prophets, and of your young men for Nazirites. Is it not even thus, O ye children of Israel? saith Jehovah.ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.

12 But ye gave the Nazirites wine to drink, and commanded the prophets, saying, Prophesy not.ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.

13 Behold, I will press `you' in your place, as a cart presseth that is full of sheaves.ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.

14 And flight shall perish from the swift; and the strong shall not strengthen his force; neither shall the mighty deliver himself;ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

15 neither shall he stand that handleth the bow; and he that is swift of foot shall not deliver `himself'; neither shall he that rideth the horse deliver himself;ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.

16 and he that is courageous among the mighty shall flee away naked in that day, saith Jehovah.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.

Kannada Bible