Bible

Amos 3 - YLT (Kannada)

1 Hear ye this word that Jehovah hath spoken concerning you, O sons of Israel, concerning all the family that I brought up from the land of Egypt, saying:ಓ ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--

2 Only you I have known of all families of the land, Therefore I charge on you all your iniquities.ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.

3 Do two walk together if they have not met?ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?

4 Roar doth a lion in a forest and prey he hath none? Give out doth a young lion his voice from his habitation, If he hath not caught?ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?

5 Doth a bird fall into a snare of the earth, And there is no gin for it? Doth a snare go up from the ground, And prey it captureth not?ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?

6 Is a trumpet blown in a city, And do people not tremble? Is there affliction in a city, And Jehovah hath not done `it'?ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?

7 For the Lord Jehovah doth nothing, Except He hath revealed His counsel unto His servants the prophets.ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

8 A lion hath roared -- who doth not fear? The Lord Jehovah hath spoken -- who doth not prophesy?ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?

9 Sound ye unto palaces in Ashdod, And to palaces in the land of Egypt, and say: Be ye gathered on mountains of Samaria, And see many troubles within her, And oppressed ones in her midst.ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.

10 And they have not known to act straightforwardly, An affirmation of Jehovah, Who are treasuring up violence and spoil in their palaces.ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.

11 Therefore, thus said the Lord Jehovah: An adversary -- and surrounding the land, And he hath brought down from thee thy strength, And spoiled have been thy palaces.ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.

12 Thus said Jehovah: As the shepherd delivereth from the lion's mouth Two legs, or a piece of an ear, So delivered are the sons of Israel, Who are sitting in Samaria on the corner of a bed, And in Damascus `on that of' a couch.ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.

13 Hear ye and testify to the house of Jacob, An affirmation of the Lord Jehovah, God of Hosts.ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.

14 For in the day of My charging the transgressions of Israel on him, I have laid a charge on the altars of Beth-El, And cut off have been the horns of the altar, And they have fallen to the earth.ಅದು--ನಾನು ಇಸ್ರಾಯೇಲಿನ ಅಪರಾಧಗಳನ್ನು ವಿಚಾರಿಸುವ ದಿನದಲ್ಲಿ ಬೇತೇಲಿನ ಯಜ್ಞವೇದಿಗಳನ್ನು ವಿಚಾರಿಸುವೆನು; ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲಕ್ಕೆ ಉರುಳುವವು.

15 And I have smitten the winter-house with the summer-house, And perished have houses of ivory, And consumed have been many houses, An affirmation of Jehovah!ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.

Kannada Bible