Daniel 10 - YLT (Kannada)
1 In the third year of Cyrus king of Persia, a thing is revealed to Daniel, whose name is called Belteshazzar, and the thing `is' true, and the warfare `is' great: and he hath understood the thing, and hath understanding about the appearance.ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
2 `In those days, I, Daniel, have been mourning three weeks of days;ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
3 desirable bread I have not eaten, and flesh and wine hath not come in unto my mouth, and I have not anointed myself at all, till the completion of three weeks of days.ಆ ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
4 `And in the twenty and fourth day of the first month, I have been by the side of the great river, that `is' Hiddekel:ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
5 and I lift up mine eyes, and look, and lo, a certain one clothed in linen, and his loins girt with pure gold of Uphaz,ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
6 and his body as a beryl, and his face as the appearance of lightning, and his eyes as lamps of fire, and his arms and his feet as the aspect of bright brass, and the voice of his words as the voice of a multitude.ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು.
7 `And I have seen -- I, Daniel, by myself -- the appearance: and the men who have been with me have not seen the appearance, but a great trembling hath fallen on them, and they flee to be hidden;ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು.
8 and I have been left by myself, and I see this great appearance, and there hath been no power left in me, and my honour hath been turned in me to corruption, yea, I have not retained power.ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.
9 `And I hear the voice of his words, and when I hear the voice of his words, then I have been in a trance on my face, and my face `is' to the earth;ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
10 and lo, a hand hath come against me, and shaketh me on my knees and the palms of my hands.ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
11 `And he saith unto me: Daniel, man greatly desired, attend to the words that I am speaking unto thee, and stand on thy station, for now I have been sent unto thee. `And when he speaketh with me this word, I have stood trembling.ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
12 And he saith unto me: Do not fear, Daniel, for from the first day that thou didst give thy heart to understand, and to humble thyself before thy God, thy words have been heard, and I have come because of thy words.ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
13 `And the head of the kingdom of Persia is standing over-against me twenty and one days, and lo, Michael, first of the chief heads, hath come in to help me, and I have remained there near the kings of Persia;ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
14 and I have come to cause thee to understand that which doth happen to thy people in the latter end of the days, for yet the vision `is' after days.ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
15 `And when he speaketh with me about these things, I have set my face toward the earth, and have been silent;ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.
16 and lo, as the manner of the sons of men, he is striking against my lips, and I open my mouth, and I speak, and say unto him who is standing over-against me: My lord, by the appearance turned have been my pangs against me, and I have retained no power.ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
17 And how is the servant of this my lord able to speak with this my lord? as for me, henceforth there remaineth in me no power, yea, breath hath not been left in me.ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
18 `And he addeth, and striketh against me, as the appearance of a man, and strengtheneth me,ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ
19 and he saith: Do not fear, O man greatly desired, peace to thee, be strong, yea, be strong; and when he speaketh with me, I have strengthened myself, and I say, Let my lord speak, for thou hast strengthened me.ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
20 And he saith, Hast thou known why I have come unto thee? and now I turn back to fight with the head of Persia; yea, I am going forth, and lo, the head of Javan hath come;ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್ ಪ್ರಭುವು ಬರುವನು.
21 but I declare to thee that which is noted down in the Writing of Truth, and there is not one strengthening himself with me, concerning these, except Michael your head.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
Kannada Bible