Deuteronomy 20 - WEB (Kannada)
1 When you go forth to battle against your enemies, and see horses, and chariots, [and] a people more than you, you shall not be afraid of them; for Yahweh your God is with you, who brought you up out of the land of Egypt.ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಕುದುರೆಗಳನ್ನೂ ರಥ ಗಳನ್ನೂ ನಿನಗಿಂತ ಹೆಚ್ಚಾದ ಜನರನ್ನೂ ನೋಡಿದರೆ ಅವರಿಗೆ ಭಯಪಡಬೇಡ; ಐಗುಪ್ತದೇಶದೊಳಗಿಂದ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ.
2 It shall be, when you draw near to the battle, that the priest shall approach and speak to the people,ನೀವು ಯುದ್ಧಕ್ಕೆ ಸವಿಾಪ ಬಂದಾಗ ಯಾಜಕನು ಹತ್ತಿರ ಬಂದು ಜನರ ಸಂಗಡ ಮಾತನಾಡಿ ಅವ ರಿಗೆ--
3 and shall tell them, Hear, Israel, you draw near this day to battle against your enemies: don't let your heart faint; don't be afraid, nor tremble, neither be scared of them;ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
4 for Yahweh your God is he who goes with you, to fight for you against your enemies, to save you.ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
5 The officers shall speak to the people, saying, What man is there who has built a new house, and has not dedicated it? let him go and return to his house, lest he die in the battle, and another man dedicate it.ಆಗ ಅಧಿಕಾರಿಗಳು ಜನಕ್ಕೆ--ಹೊಸ ಮನೆಯನ್ನು ಕಟ್ಟಿ ಗೃಹಪ್ರತಿಷ್ಠೆಮಾಡದ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಗೃಹಪ್ರತಿಷ್ಠೆಮಾಡದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
6 What man is there who has planted a vineyard, and has not used the fruit of it? let him go and return to his house, lest he die in the battle, and another man use the fruit of it.ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
7 What man is there who has pledged to be married a wife, and has not taken her? let him go and return to his house, lest he die in the battle, and another man take her.ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
8 The officers shall speak further to the people, and they shall say, What man is there who is fearful and faint-hearted? let him go and return to his house, lest his brother's heart melt as his heart.ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆ--ಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು? ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು.
9 It shall be, when the officers have made an end of speaking to the people, that they shall appoint captains of hosts at the head of the people.ಅಧಿಕಾರಿ ಗಳು ಜನರ ಸಂಗಡ ಮಾತನಾಡಿ ಮುಗಿಸಿದಾಗ ಜನರ ಮುಂದೆ ನಡೆಯತಕ್ಕ ಸೈನ್ಯಾಧಿಪತಿಗಳನ್ನು ನೇಮಿಸಬೇಕು.
10 When you draw near to a city to fight against it, then proclaim peace to it.ನೀನು ಯುದ್ಧಮಾಡುವ ನಿಮಿತ್ತ ಒಂದು ಪಟ್ಟ ಣದ ಹತ್ತಿರ ಬಂದರೆ ಸಮಾಧಾನಕ್ಕಾಗಿ ಅದನ್ನು ಕರೆಯಬೇಕು.
11 It shall be, if it make you answer of peace, and open to you, then it shall be, that all the people who are found therein shall become tributary to you, and shall serve you.ಆ ಪಟ್ಟಣವು ನಿನಗೆ ಸಮಾಧಾನದ ಉತ್ತರ ಕೊಟ್ಟು ಬಾಗಲನ್ನು ತೆರೆದರೆ ಅದರಲ್ಲಿರುವ ಜನರೆಲ್ಲರು ನಿನಗೆ ಕಪ್ಪಕೊಟ್ಟು ನಿನ್ನನ್ನು ಸೇವಿಸಬೇಕು.
12 If it will make no peace with you, but will make war against you, then you shall besiege it:ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
13 and when Yahweh your God delivers it into your hand, you shall strike every male of it with the edge of the sword:ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
14 but the women, and the little ones, and the cattle, and all that is in the city, even all the spoil of it, shall you take for a prey to yourself; and you shall eat the spoil of your enemies, which Yahweh your God has given you.ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
15 Thus shall you do to all the cities which are very far off from you, which are not of the cities of these nations.ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
16 But of the cities of these peoples, that Yahweh your God gives you for an inheritance, you shall save alive nothing that breathes;ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.
17 but you shall utterly destroy them: the Hittite, and the Amorite, the Canaanite, and the Perizzite, the Hivite, and the Jebusite; as Yahweh your God has commanded you;ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
18 that they not teach you to do after all their abominations, which they have done to their gods; so would you sin against Yahweh your God.ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
19 When you shall besiege a city a long time, in making war against it to take it, you shall not destroy the trees of it by wielding an axe against them; for you may eat of them, and you shall not cut them down; for is the tree of the field man, that it should be besieged of you?ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.
20 Only the trees of which you know that they are not trees for food, you shall destroy and cut them down; and you shall build bulwarks against the city that makes war with you, until it fall.ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
Kannada Bible