Ecclesiastes 10 - ASV (Kannada)
1 Dead flies cause the oil of the perfumer to send forth an evil odor; `so' doth a little folly outweigh wisdom and honor.ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
2 A wise man's heart is at his right hand; but a fool's heart at his left.ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
3 Yea also, when the fool walketh by the way, his understanding faileth him, and he saith to every one `that' he is a fool.ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
4 If the spirit of the ruler rise up against thee, leave not thy place; for gentleness allayeth great offences.ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
5 There is an evil which I have seen under the sun, as it were an error which proceedeth from the ruler:ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
6 folly is set in great dignity, and the rich sit in a low place.ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
7 I have seen servants upon horses, and princes walking like servants upon the earth.ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
8 He that diggeth a pit shall fall into it; and whoso breaketh through a wall, a serpent shall bite him.ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
9 Whoso heweth out stones shall be hurt therewith; `and' he that cleaveth wood is endangered thereby.ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.
10 If the iron be blunt, and one do not whet the edge, then must he put to more strength: but wisdom is profitable to direct.ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
11 If the serpent bite before it is charmed, then is there no advantage in the charmer.ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
12 The words of a wise man's mouth are gracious; but the lips of a fool will swallow up himself.ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
13 The beginning of the words of his mouth is foolishness; and the end of his talk is mischievous madness.ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
14 A fool also multiplieth words: `yet' man knoweth not what shall be; and that which shall be after him, who can tell him?ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
15 The labor of fools wearieth every one of them; for he knoweth not how to go to the city.ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
16 Woe to thee, O land, when thy king is a child, and thy princes eat in the morning!ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
17 Happy art thou, O land, when thy king is the son of nobles, and thy princes eat in due season, for strength, and not for drunkenness!ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
18 By slothfulness the roof sinketh in; and through idleness of the hands the house leaketh.ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
19 A feast is made for laughter, and wine maketh glad the life; and money answereth all things.ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.
20 Revile not the king, no, not in thy thought; and revile not the rich in thy bedchamber: for a bird of the heavens shall carry the voice, and that which hath wings shall tell the matter.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Kannada Bible