Bible

Ecclesiastes 8 - WEB (Kannada)

1 Who is like the wise man? And who knows the interpretation of a thing? A man's wisdom makes his face shine, and the hardness of his face is changed.ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.

2 I say, "Keep the king's command!" because of the oath to God.ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.

3 Don't be hasty to go out of his presence. Don't persist in an evil thing, for he does whatever pleases him,ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.

4 for the king's word is supreme. Who can say to him, "What are you doing?"ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?

5 Whoever keeps the commandment shall not come to harm, and his wise heart will know the time and procedure.ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.

6 For there is a time and procedure for every purpose, although the misery of man is heavy on him.ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.

7 For he doesn't know that which will be; for who can tell him how it will be?ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?

8 There is no man who has power over the spirit to contain the spirit; neither does he have power over the day of death. There is no discharge in war; neither shall wickedness deliver those who practice it.ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.

9 All this have I seen, and applied my mind to every work that is done under the sun. There is a time in which one man has power over another to his hurt.ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.

10 So I saw the wicked buried. Indeed they came also from holiness. They went and were forgotten in the city where they did this. This also is vanity.ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;

11 Because sentence against an evil work is not executed speedily, therefore the heart of the sons of men is fully set in them to do evil.ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.

12 Though a sinner commits crimes a hundred times, and lives long, yet surely I know that it will be better with those who fear God, who are reverent before him.ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.

13 But it shall not be well with the wicked, neither shall he lengthen days like a shadow; because he doesn't fear God.ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.

14 There is a vanity which is done on the earth, that there are righteous men to whom it happens according to the work of the wicked. Again, there are wicked men to whom it happens according to the work of the righteous. I said that this also is vanity.ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.

15 Then I commended mirth, because a man has no better thing under the sun, than to eat, and to drink, and to be joyful: for that will accompany him in his labor all the days of his life which God has given him under the sun.ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.

16 When I applied my heart to know wisdom, and to see the business that is done on the earth (for also there is that neither day nor night sees sleep with his eyes),ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).

17 then I saw all the work of God, that man can't find out the work that is done under the sun, because however much a man labors to seek it out, yet he won't find it. Yes even though a wise man thinks he can comprehend it, he won't be able to find it.ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.

Kannada Bible