Bible

Daniel 11 - DBY (Kannada)

1 And I, in the first year of Darius the Mede, I stood to confirm and to strengthen him.ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.

2 And now will I declare unto thee the truth. Behold, there shall stand up yet three kings in Persia; and the fourth shall enrich himself with great riches more than all; and when he hath become strong through his riches, he shall stir up all against the realm of Greece.ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್‌ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.

3 And a mighty king shall stand up that shall rule with great dominion, and do according to his will.ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.

4 And when he shall stand up, his kingdom shall be broken, and shall be divided toward the four winds of the heavens; but not to his posterity, nor according to his dominion wherewith he ruled; for his kingdom shall be plucked up, even for others beside these.ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.

5 And the king of the south, who is one of his princes, shall be strong; but [another] shall be stronger than he, and have dominion: his dominion shall be a great dominion.ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.

6 And after the course of years they shall join affinity; and the king's daughter of the south shall come to the king of the north to make equitable conditions: but she shall not retain the strength of her arm; neither shall he stand, nor his arm; and she shall be given up, she and they that brought her, and he that begat her, and he that strengthened her in [those] times.ವರುಷಗಳ ಅಂತ್ಯದಲ್ಲಿ ಅವರು ಒಬ್ಬರಿಗೊಬ್ಬರು ಒಂದಾಗುವರು; ಹೇಗಂದರೆ ದಕ್ಷಿಣದ ಅರಸನ ಮಗಳು ಉತ್ತರದ ಅರಸನ ಬಳಿಗೆ ಬಂದು ಒಪ್ಪಂದ ಮಾಡಿಕೊಳ್ಳುವಳು; ಆದರೆ ಅವಳು ಭುಜ ಬಲವನ್ನು ಉಳಿಸಿಕೊಳ್ಳುವದಿಲ್ಲ; ಅವನೂ ಅವನ ತೋಳುಗಳೂ ನಿಲ್ಲುವದಿಲ್ಲ; ಅವಳೂ ಅವಳನ್ನು ಕರೆ ತಂದವರೂ ಅವಳನ್ನು ಪಡೆದವನೂ ಆ ಕಾಲದಲ್ಲಿ ಅವಳನ್ನು ಬಲಪಡಿಸಿದವನೂ ಉಳಿಯುವದಿಲ್ಲ.

7 But out of a shoot from her roots shall one stand up in his place, who shall come to the army, and shall enter into the fortress of the king of the north, and shall deal against them, and shew himself mighty.ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.

8 He shall also carry captive into Egypt their gods, with their princes, and their precious vessels of silver and of gold; and he shall subsist for more years than the king of the north;ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.

9 and [the same] shall come into the realm of the king of the south, but shall return into his own land.ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.

10 And his sons shall be stirred up, and shall assemble a multitude of great forces; and one shall certainly come, and overflow, and pass through; and he shall return and carry the war even to his fortress.ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.

11 And the king of the south shall be enraged, and shall come forth and fight with him, with the king of the north, who shall set forth a great multitude, but the multitude shall be given into his hand.ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.

12 And when the multitude shall have been taken away, his heart shall be exalted; and he shall cast down myriads; but he shall not prevail.ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.

13 For the king of the north shall return, and shall set forth a multitude greater than the former; and shall certainly come at the end of the times of years with a great army and with much substance.ಉತ್ತರದ ಅರಸನು ಮತ್ತೆ ತಿರುಗಿಕೊಂಡು ಮೊದಲನೇ ಸಾರಿಗಿಂತಲೂ ದೊಡ್ಡ ಸಮೂಹವನ್ನು ನಿಲ್ಲಿಸಿ ಕೆಲವು ವರುಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ ಬಹಳ ಸಂಪತ್ತಿನ ಸಂಗಡವೂ ನಿಶ್ಚಯವಾಗಿ ಬರುವನು.

14 And in those times shall many stand up against the king of the south; and the violent of thy people will exalt themselves to establish the vision; but they shall fall.ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು; ಅಲ್ಲದೆ ನಿನ್ನ ಜನರಲ್ಲಿ ದರೋಡೆಕೋರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಮ್ಮನ್ನು ತಾವು ಹೆಚ್ಚಿಸಿಕೊಳ್ಳುವರು; ಆದರೆ ಅವರು ಬಿದ್ದು ಹೋಗುವರು.

15 And the king of the north shall come, and cast up a mound, and take the well-fenced city; and the arms of the south shall not withstand, neither his chosen people, for there shall be no strength to withstand.ಆದರೆ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ ದಿಬ್ಬವನ್ನು ಕೆಡವಿ ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳು ವನು; ದಕ್ಷಿಣದ ಭುಜಬಲವಾದರೂ ಅವನು ಆದು ಕೊಂಡ ಜನರಾದರೂ ನಿಲ್ಲುವದಕ್ಕೆ ಬಲವಿರುವದಿಲ್ಲ.

16 And he that cometh against him shall do according to his own will, and none shall stand before him; and he shall stand in the land of beauty, and destruction shall be in his hand.ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.

17 And he shall set his face to come with the strength of his whole kingdom, and upright ones with him; and he shall practise; and he shall give him the daughter of women, to corrupt her; but she shall not stand, neither shall she be for him.ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.

18 And he shall turn his face unto the isles, and shall take many; but a captain for his own behalf shall cause the reproach offered by him to cease: he shall turn it upon him, without reproach for himself.ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ ಆನೇಕರನ್ನು ವಶಪಡಿಸಿಕೊಳ್ಳುವನು; ಆದರೆ ಒಬ್ಬ ಅಧಿಪತಿಯು ತನಗಾಗಿ ಅವನ ನಿಂದೆಯನ್ನು ಅಡಗಿಸಿ ಬಿಡುವನು; ಆ ನಿಂದೆಯನ್ನು ತನ್ನ ಮೇಲೆ ಹಾಕಿಕೊಳ್ಳದೆ ಅವನ ಮೇಲೆ ತಿರುಗಿಸಿಬಿಡುವನು.

19 And he shall turn his face toward the fortresses of his own land; and he shall stumble and fall, and not be found.ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.

20 And in his place shall one stand up who shall cause the exactor to pass through the glory of the kingdom; but in a few days he shall be broken, neither in anger nor in battle.ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.

21 And in his place shall stand up a vile person, to whom they shall not give the honour of the kingdom; but he shall come in peaceably and obtain the kingdom by flatteries.ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.

22 And the overflowing forces shall be overflowed from before him, and shall be broken: yea, also the prince of the covenant.ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.

23 And after the league made with him he shall work deceitfully, and he shall come up, and shall become strong with a small people.ಅವನ ಸಂಗಡ ಸಮಾಧಾನ ಮಾಡಿ ಕೊಂಡ ಮೇಲೆ ಕಪಟವಾಗಿ ನಡೆಯುವನು. ಕೊಂಚ ಜನರ ಸಹಾಯದಿಂದ ಏಳಿಗೆಯಾಗಿ ಬಲಗೊಳ್ಳುವನು.

24 In time of peace shall he enter even into the fattest places of the province; and he shall do that which his fathers have not done, nor his fathers' fathers: he shall scatter among them prey, and spoil, and substance, and he shall plan his devices against the fortified places, even for a time.ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.

25 And he shall stir up his power and his courage against the king of the south with a great army; and the king of the south shall engage in battle with an exceeding great and mighty army; but he shall not stand, for they shall plan devices against him.ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ದಂಡೆತ್ತಿ ಬರುವನು; ದಕ್ಷಿಣದ ಅರಸನೂ ಅಧಿಕ ಬಲವುಳ್ಳ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು. ಆದರೆ ನಿಲ್ಲಲಾರದೆ ಹೋಗುವನು. ಯಾಕಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.

26 And they that eat of his delicate food shall break him, and his army shall be dissolved; and many shall fall down slain.ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.

27 And both these kings' hearts [shall meditate] mischief, and they shall speak lies at one table; but it shall not prosper; for yet the end shall be at the time appointed.ಈ ಇಬ್ಬರು ಅರಸರ ಹೃದಯ ಗಳನ್ನು ಕೇಡನ್ನು ಮಾಡುವಂತವುಗಳಾಗಿರುವವು; ಒಂದೇ ಮೇಜಿನಲ್ಲಿ ಕುಳಿತು ಸುಳ್ಳು ಹೇಳುವರು; ಆದರೆ ಅದು ಅನುಕೂಲವಾಗದು; ಅದು ಹೇಗಾದರೂ ನಿಯಮಿಸಲ್ಪಟ್ಟ ಕಾಲದಲ್ಲಿ ಅಂತ್ಯವಾಗುವದು.

28 And he shall return into his land with great substance; and his heart shall be against the holy covenant; and he shall practise, and return to his own land.ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.

29 At the set time he shall return, and come towards the south; but not as the former time shall be the latter;ನಿಯಮಿತ ಕಾಲದಲ್ಲಿಯೇ ಅವನು ಹಿಂತಿರುಗಿ ದಕ್ಷಿಣಕ್ಕೆ ಬರುವನು; ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವದಿಲ್ಲ.

30 for ships of Chittim shall come against him; and he shall be grieved, and return, and have indignation against the holy covenant; and will practise; and he shall return and direct his attention to those that forsake the holy covenant.ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.

31 And forces shall stand on his part, and they shall profane the sanctuary, the fortress, and shall take away the continual [sacrifice], and they shall place the abomination that maketh desolate.ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.

32 And such as do wickedly against the covenant shall he pervert by flatteries; but the people that know their God shall be strong, and shall act.ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.

33 And they that are wise among the people shall instruct the many; and they shall fall by the sword, and by flame, by captivity, and by spoil, [many] days.ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.

34 And when they fall, they shall be helped with a little help; but many shall cleave to them with flatteries.ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.

35 And [some] of the wise shall fall, to try them, and to purge and to make them white, to the time of the end: for it shall yet be for the time appointed.ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;

36 And the king shall do according to his will; and he shall exalt himself, and magnify himself above every ùgod, and speak monstrous things against the ùGod of ùgods; and he shall prosper until the indignation be accomplished: for that which is determined shall be done.ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.

37 And he will not regard the God of his fathers, nor the desire of women; nor regard any +god: for he will magnify himself above all.ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

38 And in his place will he honour the +god of fortresses; and a +god whom his fathers knew not will he honour with gold and silver, and with precious stones and pleasant things.ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.

39 And he will practise in the strongholds of fortresses with a strange +god: whoso acknowledgeth him will he increase with glory; and he shall cause them to rule over the many, and shall divide the land [to them] for a reward.ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.

40 And at the time of the end shall the king of the south push at him; and the king of the north shall come against him like a whirlwind, with chariots, and with horsemen, and with many ships; and he shall enter into the countries, and overflow and pass through.ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.

41 And he shall enter into the land of beauty, and many [countries] shall be overthrown; but these shall escape out of his hand: Edom, and Moab, and the chief of the children of Ammon.ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.

42 And he shall stretch forth his hand upon the countries; and the land of Egypt shall not escape.ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.

43 And he shall have power over the treasures of gold and of silver, and over all the precious things of Egypt; and the Libyans and the Ethiopians shall be at his steps.ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.

44 But tidings out of the east and out of the north shall trouble him; and he shall go forth with great fury to exterminate, and utterly to destroy many.ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.

45 And he shall plant the tents of his palace between the sea and the mountain of holy beauty; and he shall come to his end, and there shall be none to help him.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

Kannada Bible