John 16 - WEB (Kannada)
1 "These things have I spoken to you, so that you wouldn't be caused to stumble.ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ.
2 They will put you out of the synagogues. Yes, the time comes that whoever kills you will think that he offers service to God.ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
3 They will do these things{TR adds "to you"} because they have not known the Father, nor me.ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
4 But I have told you these things, so that when the time comes, you may remember that I told you about them. I didn't tell you these things from the beginning, because I was with you.ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
5 But now I am going to him who sent me, and none of you asks me, 'Where are you going?'ಆದರೆ ಈಗ ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹೋಗುತ್ತೇನೆ; ನಿಮ್ಮಲ್ಲಿ ಒಬ್ಬನಾದರೂ--ನೀನು ಎಲ್ಲಿಗೆ ಹೋಗುತ್ತೀ ಎಂದು ನನ್ನನ್ನು ಕೇಳುವದಿಲ್ಲ.
6 But because I have told you these things, sorrow has filled your heart.ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
7 Nevertheless I tell you the truth: It is to your advantage that I go away, for if I don't go away, the Counselor won't come to you. But if I go, I will send him to you.ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
8 When he has come, he will convict the world about sin, about righteousness, and about judgment;ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
9 about sin, because they don't believe in me;ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ
10 about righteousness, because I am going to my Father, and you won't see me any more;ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ
11 about judgment, because the prince of this world has been judged.ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
12 "I have yet many things to tell you, but you can't bear them now.ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
13 However when he, the Spirit of truth, has come, he will guide you into all truth, for he will not speak from himself; but whatever he hears, he will speak. He will declare to you things that are coming.ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
14 He will glorify me, for he will take from what is mine, and will declare it to you.ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
15 All things whatever the Father has are mine; therefore I said that he takes{TR reads "will take" instead of "takes"} of mine, and will declare it to you.ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
16 A little while, and you will not see me. Again a little while, and you will see me."ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
17 Some of his disciples therefore said to one another, "What is this that he says to us, 'A little while, and you won't see me, and again a little while, and you will see me;' and, 'Because I go to the Father?'"ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
18 They said therefore, "What is this that he says, 'A little while?' We don't know what he is saying."ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
19 Therefore Jesus perceived that they wanted to ask him, and he said to them, "Do you inquire among yourselves concerning this, that I said, 'A little while, and you won't see me, and again a little while, and you will see me?'ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
20 Most assuredly I tell you, that you will weep and lament, but the world will rejoice. You will be sorrowful, but your sorrow will be turned into joy.ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
21 A woman, when she gives birth, has sorrow, because her time has come. But when she has delivered the child, she doesn't remember the anguish any more, for the joy that a human being is born into the world.ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.
22 Therefore you now have sorrow, but I will see you again, and your heart will rejoice, and no one will take your joy away from you.ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
23 "In that day you will ask me no questions. Most assuredly I tell you, whatever you may ask of the Father in my name, he will give it to you.ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
24 Until now, you have asked nothing in my name. Ask, and you will receive, that your joy may be made full.ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
25 I have spoken these things to you in figures of speech. But the time is coming when I will no more speak to you in figures of speech, but will tell you plainly about the Father.ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.
26 In that day you will ask in my name; and I don't say to you, that I will pray to the Father for you,ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಬೇಡಿಕೊಳ್ಳುವಿರಿ; ನಿಮಗೋಸ್ಕರ ತಂದೆ ಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳು ವದಿಲ್ಲ.
27 for the Father himself loves you, because you have loved me, and have believed that I came forth from God.ನೀವು ನನ್ನನ್ನು ಪ್ರೀತಿಸಿ ನಾನು ದೇವರ ಬಳಿಯಿಂದ ಹೊರಟುಬಂದೆನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
28 I came out from the Father, and have come into the world. Again, I leave the world, and go to the Father."ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ತಿರಿಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
29 His disciples said to him, "Behold, now you speak plainly, and speak no figures of speech.ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.
30 Now we know that you know all things, and don't need for anyone to question you. By this we believe that you came forth from God."ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
31 Jesus answered them, "Do you now believe?ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈಗ ನೀವು ನಂಬುತ್ತೀರೋ?
32 Behold, the time is coming, yes, and has now come, that you will be scattered, everyone to his own place, and you will leave me alone. Yet I am not alone, because the Father is with me.ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.
33 I have told you these things, that in me you may have peace. In the world you have oppression; but cheer up! I have overcome the world."ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
Kannada Bible