Bible

John 17 - BBE (Kannada)

1 Jesus said these things; then, lifting his eyes to heaven, he said, Father, the time has now come; give glory to your Son, so that the Son may give glory to you:ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.

2 Even as you gave him authority over all flesh, to give eternal life to all those whom you have given to him.ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.

3 And this is eternal life: to have knowledge of you, the only true God, and of him whom you have sent, even Jesus Christ.ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.

4 I have given you glory on the earth, having done all the work which you gave me to do.ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;

5 And now, Father, let me have glory with you, even that glory which I had with you before the world was.ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.

6 I have given knowledge of your name to the men whom you gave me out of the world: yours they were, and you gave them to me, and they have kept your words.ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.

7 Now it is clear to them that whatever you have given to me comes from you:ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ.

8 Because I have given them the words which you gave to me; and they have taken them to heart, and have certain knowledge that I came from you, and they have faith that you sent me.ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.

9 My prayer is for them: my prayer is not for the world, but for those whom you have given to me, because they are yoursನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.

10 (All mine are yours, and yours are mine) and I have glory in them.ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.

11 And now I will be no longer in the world, but they are in the world and I come to you. Holy Father, keep them in your name which you have given to me, so that they may be one even as we are one.ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.

12 While I was with them I kept them safe in your name which you have given to me: I took care of them and not one of them has come to destruction, but only the son of destruction, so that the Writings might come true.ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

13 And now I come to you; and these things I say in the world so that they may have my joy complete in them.ಈಗ ನಾನು ನಿನ್ನ ಬಳಿಗೆ ಬರು ತ್ತೇನೆ ನನ್ನ ಆನಂದವು ಅವರೊಳಗೆ ಈಡೇರುವಂತೆ ನಾನು ಲೋಕದಲ್ಲಿ ಈ ವಿಷಯಗಳನ್ನು ಮಾತನಾಡು ತ್ತೇನೆ.

14 I have given your word to them; and they are hated by the world, because they are not of the world, even as I am not of the world.ನಾನು ನಿನ್ನ ವಾಕ್ಯವನ್ನು ಅವರಿಗೆ ಕೊಟ್ಟಿದ್ದೇನೆ ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲವಾದದರಿಂದ ಲೋಕವು ಅವರನ್ನು ಹಗೆಮಾಡಿಯದೆ.

15 My prayer is not that you will take them out of the world, but that you will keep them from the Evil One.ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.

16 They are not of the world any more than I am of the world.ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.

17 Make them holy by the true word: your word is the true word.ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು

18 Even as you have sent me into the world, so I have sent them into the world.ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.

19 And for them I make myself holy, so that they may be made truly holy.ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.

20 My prayer is not for them only, but for all who will have faith in me through their word;ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.

21 May they all be one! Even as you, Father, are in me and I am in you, so let them be in us, so that all men may come to have faith that you sent me.ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.

22 And the glory which you have given to me I have given to them, so that they may be one even as we are one;ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.

23 I in them, and you in me, so that they may be made completely one, and so that it may become clear to all men that you have sent me and that they are loved by you as I am loved by you.ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ (ಇರುವಂತೆ) ಅವರೂ ಒಂದಾಗಿ ಪರಿಪೂರ್ಣರಾಗಿ ರುವರು; ನೀನು ನನ್ನನ್ನು ಕಳುಹಿಸಿದ್ದೀ ಎಂತಲೂ ನನ್ನನ್ನು ಪ್ರೀತಿ ಮಾಡಿದಂತೆ ಅವರನ್ನು ನೀನು ಪ್ರೀತಿಮಾಡಿದ್ದೀ ಎಂತಲೂ ಲೋಕವು ತಿಳಿದುಕೊಳ್ಳುವದು.

24 Father, it is my desire that these whom you have given to me may be by my side where I am, so that they may see my glory which you have given to me, because you had love for me before the world came into being.ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.

25 Father of righteousness, I have knowledge of you, though the world has not; and to these it is clear that you sent me;ಓ ನೀತಿಯುಳ್ಳ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ; ಆದರೆ ನಾನು ನಿನ್ನನ್ನು ತಿಳಿದಿದ್ದೇನೆ, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ಇವರು ತಿಳಿದಿದ್ದಾರೆ.

26 And I have given to them knowledge of your name, and will give it, so that the love which you have for me may be in them and I in them.ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.

Kannada Bible