Exodus 10 - ASV (Kannada)
1 And Jehovah said unto Moses, Go in unto Pharaoh: for I have hardened his heart, and the heart of his servants, that I may show these my signs in the midst of them,ತರುವಾಯ ಕರ್ತನು ಮೋಶೆಗೆ-- ಫರೋಹನ ಬಳಿಗೆ ಹೋಗು. ನಾನು ನನ್ನ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸು ವದಕ್ಕಾಗಿ ಅವನ ಹೃದಯವನ್ನೂ ಅವನ ಸೇವಕರ ಹೃದಯಗಳನ್ನೂ ಕಠಿಣಮಾಡಿದ್ದೇನೆ.
2 and that thou mayest tell in the ears of thy son, and of thy son's son, what things I have wrought upon Egypt, and my signs which I have done among them; that ye may know that I am Jehovah.ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
3 And Moses and Aaron went in unto Pharaoh, and said unto him, Thus saith Jehovah, the God of the Hebrews, How long wilt thou refuse to humble thyself before me? let my people go, that they may serve me.ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
4 Else, if thou refuse to let my people go, behold, to-morrow will I bring locusts into thy border:ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
5 and they shall cover the face of the earth, so that one shall not be able to see the earth: and they shall eat the residue of that which is escaped, which remaineth unto you from the hail, and shall eat every tree which groweth for you out of the field:ಒಬ್ಬನು ಭೂಮಿಯನ್ನು ಕಾಣುವದಕ್ಕಾಗದಷ್ಟು ಅವು ಭೂಮುಖವನ್ನೆಲ್ಲಾ ಮುಚ್ಚಿಕೊಳ್ಳುವವು; ಇದ ಲ್ಲದೆ ಅವು ಆನೆಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವದೆಲ್ಲವನ್ನೂ ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡು ವವು.
6 and thy houses shall be filled, and the houses of all thy servants, and the houses of all the Egyptians; as neither thy fathers nor thy fathers' fathers have seen, since the day that they were upon the earth unto this day. And he turned, and went out from Pharaoh.ಇದಲ್ಲದೆ ಅವು ನಿನ್ನ ಮನೆಗಳಲ್ಲಿಯೂ ನಿನ್ನ ಸೇವಕರ ಮನೆಗಳಲ್ಲಿಯೂ ಐಗುಪ್ತ್ಯರೆಲ್ಲರ ಮನೆ ಗಳಲ್ಲಿಯೂ ತುಂಬಿಕೊಳ್ಳುವವು. ನಿನ್ನ ತಂದೆಗಳಾಗಲಿ ನಿನ್ನ ತಂದೆಗಳ ತಂದೆಗಳಾಗಲಿ ಅವರು ಭೂಮಿಯ ಮೇಲೆ ಇದ್ದಂದಿನಿಂದ ಇಂದಿನ ವರೆಗೂ ಅಂಥದ್ದನ್ನು ಎಂದೂ ನೋಡಿರಲಿಲ್ಲ ಅಂದನು. ಮೋಶೆಯು ಹಿಂತಿರುಗಿ ಫರೋಹನ ಬಳಿಯಿಂದ ಹೊರಟು ಹೋದನು.
7 And Pharaoh's servants said unto him, How long shall this man be a snare unto us? let the men go, that they may serve Jehovah their God: knowest thou not yet that Egypt is destroyed?ಆಗ ಫರೋಹನ ಸೇವಕರು ಅವನಿಗೆ--ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಕರ್ತನಿಗೆ ಸೇವೆಮಾಡುವಂತೆ ಅವರನ್ನು ಕಳುಹಿಸಿಬಿಡು. ಐಗುಪ್ತವು ನಾಶವಾಯಿ ತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ ಅಂದರು.
8 And Moses and Aaron were brought again unto Pharaoh: and he said unto them, Go, serve Jehovah your God; but who are they that shall go?ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು.
9 And Moses said, We will go with our young and with our old; with our sons and with our daughters, with our flocks and with our herds will we go; for we must hold a feast unto Jehovah.ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
10 And he said unto them, So be Jehovah with you, as I will let you go, and your little ones: look to it; for evil is before you.ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.
11 Not so: go now ye that are men, and serve Jehovah; for that is what ye desire. And they were driven out from Pharaoh's presence.ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.
12 And Jehovah said unto Moses, Stretch out thy hand over the land of Egypt for the locusts, that they may come up upon the land of Egypt, and eat every herb of the land, even all that the hail hath left.ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.
13 And Moses stretched forth his rod over the land of Egypt, and Jehovah brought an east wind upon the land all that day, and all the night; and when it was morning, the east wind brought the locusts.ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.
14 And the locusts went up over all the land of Egypt, and rested in all the borders of Egypt; very grievous were they; before them there were no such locusts as they, neither after them shall be such.ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.
15 For they covered the face of the whole earth, so that the land was darkened; and they did eat every herb of the land, and all the fruit of the trees which the hail had left: and there remained not any green thing, either tree or herb of the field, through all the land of Egypt.ಅವು ಭೂ ಮುಖವನ್ನೆಲ್ಲಾ ಮುತ್ತಿಕೊಂಡದ್ದರಿಂದ ಆ ದೇಶವು ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ ಆನೆಕಲ್ಲಿನ ಮಳೆಯು ಉಳಿಸಿದ ಮರಗಳ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾದರೂ ಹೊಲದ ಗಿಡಗಳಲ್ಲಾದರೂ ಹಸುರಾದದ್ದು ಐಗುಪ್ತ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.
16 Then Pharaoh called for Moses and Aaron in haste; and he said, I have sinned against Jehovah your God, and against you.ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
17 Now therefore forgive, I pray thee, my sin only this once, and entreat Jehovah your God, that he may take away from me this death only.ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
18 And he went out from Pharaoh, and entreated Jehovah.ಆಗ ಅವನು ಫರೋಹನನ್ನು ಬಿಟ್ಟುಹೋಗಿ ಕರ್ತನನ್ನು ಬೇಡಿಕೊಂಡನು.
19 And Jehovah turned an exceeding strong west wind, which took up the locusts, and drove them into the Red Sea; there remained not one locust in all the border of Egypt.ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
20 But Jehovah hardened Pharaoh's heart, and he did not let the children of Israel go.ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸದೆ ಹೋದನು.
21 And Jehovah said unto Moses, Stretch out thy hand toward heaven, that there may be darkness over the land of Egypt, even darkness which may be felt.ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
22 And Moses stretched forth his hand toward heaven; and there was a thick darkness in all the land of Egypt three days;ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.
23 they saw not one another, neither rose any one from his place for three days: but all the children of Israel had light in their dwellings.ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
24 And Pharaoh called unto Moses, and said, Go ye, serve Jehovah; only let your flocks and your herds be stayed: let your little ones also go with you.ಆಗ ಫರೋಹನು ಮೋಶೆಯನ್ನು ಕರೆ ಯಿಸಿ ಅವನಿಗೆ--ನೀವು ಹೋಗಿ ಕರ್ತನಿಗೆ ಸೇವೆ ಮಾಡಿರಿ, ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಕ್ಕಳೂ ನಿಮ್ಮ ಸಂಗಡ ಹೋಗಲಿ ಅಂದನು.
25 And Moses said, Thou must also give into our hand sacrifices and burnt-offerings, that we may sacrifice unto Jehovah our God.ಅದಕ್ಕೆ ಮೋಶೆಯು ಅವನಿಗೆ--ನಮ್ಮ ದೇವರಾದ ಕರ್ತನಿಗೆ ಅರ್ಪಿಸುವದಕ್ಕೆ ನೀನು ನಮ್ಮ ಕೈಯಲ್ಲಿ ಬಲಿಗಳನ್ನೂ ದಹನಬಲಿಗಳನ್ನೂ ಕೊಡಬೇಕು.
26 Our cattle also shall go with us; there shall not a hoof be left behind: for thereof must we take to serve Jehovah our God; and we know not with what we must serve Jehovah, until we come thither.ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
27 But Jehovah hardened Pharaoh's heart, and he would not let them go.ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
28 And Pharaoh said unto him, Get thee from me, take heed to thyself, see my face no more; for in the day thou seest my face thou shalt die.ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.
29 And Moses said, Thou hast spoken well. I will see thy face again no more.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
Kannada Bible