Exodus 23 - WEB (Kannada)
1 "You shall not spread a false report. Don't join your hand with the wicked to be a malicious witness.ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
2 You shall not follow a crowd to do evil; neither shall you testify in court to side with a multitude to pervert justice;ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
3 neither shall you favor a poor man in his cause.ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
4 "If you meet your enemy's ox or his donkey going astray, you shall surely bring it back to him again.ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
5 If you see the donkey of him who hates you fallen down under his burden, don't leave him, you shall surely help him with it.ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
6 "You shall not deny justice to your poor people in their lawsuits.ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
7 "Keep far from a false charge, and don't kill the innocent and righteous: for I will not justify the wicked.ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
8 You shall take no bribe, for a bribe blinds those who have sight and perverts the words of the righteous.ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
9 "You shall not oppress an alien, for you know the heart of an alien, seeing you were aliens in the land of Egypt.ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
10 "For six years you shall sow your land, and shall gather in its increase,ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
11 but the seventh year you shall let it rest and lie fallow, that the poor of your people may eat; and what they leave the animal of the field shall eat. In like manner you shall deal with your vineyard and with your olive grove.ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
12 "Six days you shall do your work, and on the seventh day you shall rest, that your ox and your donkey may have rest, and the son of your handmaid, and the alien may be refreshed.ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
13 "Be careful to do all things that I have said to you; and don't invoke the name of other gods, neither let them be heard out of your mouth.ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
14 "You shall observe a feast to me three times a year.ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
15 You shall observe the feast of unleavened bread. Seven days you shall eat unleavened bread, as I commanded you, at the time appointed in the month Abib (for in it you came out from Egypt), and no one shall appear before me empty.ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
16 And the feast of harvest, the first fruits of your labors, which you sow in the field: and the feast of harvest, at the end of the year, when you gather in your labors out of the field.ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
17 Three times in the year all your males shall appear before the Lord Yahweh.ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
18 "You shall not offer the blood of my sacrifice with leavened bread, neither shall the fat of my feast remain all night until the morning.ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
19 The first of the first fruits of your ground you shall bring into the house of Yahweh your God. "You shall not boil a kid in its mother's milk.ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
20 "Behold, I send an angel before you, to keep you by the way, and to bring you into the place which I have prepared.ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
21 Pay attention to him, and listen to his voice. Don't provoke him, for he will not pardon your disobedience, for my name is in him.ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
22 But if you indeed listen to his voice, and do all that I speak, then I will be an enemy to your enemies, and an adversary to your adversaries.ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
23 For my angel shall go before you, and bring you in to the Amorite, the Hittite, the Perizzite, the Canaanite, the Hivite, and the Jebusite; and I will cut them off.ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
24 You shall not bow down to their gods, nor serve them, nor follow their practices, but you shall utterly overthrow them and demolish their pillars.ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
25 You shall serve Yahweh your God, and he will bless your bread and your water, and I will take sickness away from your midst.ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
26 No one will miscarry or be barren in your land. I will fulfill the number of your days.ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
27 I will send my terror before you, and will confuse all the people to whom you come, and I will make all your enemies turn their backs to you.ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
28 I will send the hornet before you, which will drive out the Hivite, the Canaanite, and the Hittite, from before you.ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
29 I will not drive them out from before you in one year, lest the land become desolate, and the animals of the field multiply against you.ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
30 Little by little I will drive them out from before you, until you have increased and inherit the land.ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
31 I will set your border from the Red Sea even to the sea of the Philistines, and from the wilderness to the River; for I will deliver the inhabitants of the land into your hand, and you shall drive them out before you.ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
32 You shall make no covenant with them, nor with their gods.ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.
33 They shall not dwell in your land, lest they make you sin against me, for if you serve their gods, it will surely be a snare to you."ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
Kannada Bible