Exodus 37 - BBE (Kannada)
1 And Bezalel made the ark of hard wood, two and a half cubits long, a cubit and a half wide and a cubit and a half high;ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
2 Plating it inside and out with the best gold, and putting an edge of gold all round it.ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
3 And he made four gold rings for its four angles, two on one side and two on the other,ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
4 And rods of the same wood plated with gold.ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿ ಸಿದನು.
5 These rods he put in the rings at the sides of the ark, for lifting it.ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.
6 And he made the cover all of gold, two and a half cubits long and a cubit and a half wide.ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
7 And he made two winged ones, hammered out of one bit of gold, for the two ends of the cover;ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
8 Placing one at one end and one at the other; the winged ones were part of the cover.ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನು ಇನ್ನೊಂದು ಬದಿಯ ಕೊನೆಯಲ್ಲಿ ಇನ್ನೊಂದು ಕೆರೂಬಿ ಯನ್ನು ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯರನ್ನು ಮಾಡಿದನು.
9 And their wings were stretched out over the cover; the faces of the winged ones were opposite one another and facing the cover.ಆ ಕೆರೂಬಿ ಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಹರಡಿಕೊಂಡು ಕರುಣಾಸನವನ್ನು ಮುಚ್ಚಿದಂತಿದ್ದವು, ಆ ಕೆರೂಬಿಯರ ಮುಖಗಳು ಒಂದನ್ನೊಂದು ನೋಡುತ್ತಿರುವಂತೆಯೂ ಕರುಣಾಸನವನ್ನು ನೋಡುತ್ತಿರುವಂತೆಯೂ ಇದ್ದವು.
10 And he made the table of hard wood, two cubits long, a cubit wide and a cubit and a half high;ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.
11 Plating it with the best gold and putting a gold edge all round it.ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು.
12 And he made a frame all round it about as wide as a man's hand, edged with gold all round.ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು.
13 And he made four gold rings, and put the rings at the angles of its four feet.ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು.
14 The rings were fixed under the frame to take the rods with which the table was to be lifted.ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು.
15 The rods for lifting the table he made of hard wood plated with gold.ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
16 And all the table-vessels, the plates and spoons and basins and the cups for liquids, he made of the best gold.ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
17 Then he made the support for the lights, all of the best gold; its base and its pillar were of hammered gold; its cups and buds and flowers were all made out of the same metal:ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ಆ ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
18 It had six branches coming out from its sides, three from one side and three from the other;ಆ ದೀಪ ಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಒಂದು ಭಾಗದಿಂದ ಮೂರು ಮತ್ತೊಂದು ಭಾಗದಿಂದ ಮೂರು.
19 Every branch having three cups made like almond flowers, every cup with a bud and a flower on all the branches;ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.
20 And on its pillar, four cups like almond flowers, every one with its bud and its flower;ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
21 And under every two branches a bud, made with the branch, for all six branches of it.ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.
22 The buds and the branches were made of the same metal, all together one complete work of the best hammered gold.ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
23 And he made the seven vessels for the lights, and all the necessary instruments for it, of gold.ಅವನು ಏಳು ಬತ್ತಿಯ ದೀವಿಗೆಗಳನ್ನೂ ಕುಡಿ ಕತ್ತರಿಸಲು ಕತ್ತರಿ ಗಳನ್ನೂ ಕುಡಿ ಹಾಕಲು ಪಾತ್ರೆಗಳನ್ನೂ ಚೊಕ್ಕ ಬಂಗಾರ ದಿಂದ ಮಾಡಿದನು.
24 A talent of the best gold was used for the making of it and its vessels.ಇವೆಲ್ಲವುಗಳನ್ನೂ ಸಮಸ್ತ ಪಾತ್ರೆಗಳನ್ನೂ ಅವನು ಒಂದು ತಲಾಂತು ಚೊಕ್ಕ ಬಂಗಾರದಿಂದ ಮಾಡಿದನು.
25 And he made the altar for the burning of spices, using the same hard wood; it was square, a cubit long and a cubit wide and two cubits high; the horns made of the same.ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು.
26 The top and the sides and the horns were all plated with the best gold; and he put an edge of gold all round it.ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
27 And he made two gold rings, placing them on the two opposite sides under the edge, to take the rods for lifting it.ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
28 The rods he made of the same hard wood, plating them with gold.ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.
29 And he made the holy oil and the perfume of sweet spices for burning, after the art of the perfume-maker.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
Kannada Bible