Exodus 5 - DBY (Kannada)
1 And afterwards Moses and Aaron went in, and said to Pharaoh, Thus saith Jehovah, the God of Israel, Let my people go that they may celebrate a feast to me in the wilderness.ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ--ಇಸ್ರಾಯೇಲಿನ ದೇವರಾದ ಕರ್ತನು--ಅರಣ್ಯದಲ್ಲಿ ನನ್ನ ಜನರು ನನಗೆ ಹಬ್ಬವನ್ನಾಚರಿಸುವದಕ್ಕೆ ಅವರನ್ನು ಹೋಗಗೊಡಿಸು ಎಂದು ಹೇಳುತ್ತಾನೆ ಅಂದರು.
2 And Pharaoh said, Who is Jehovah, to whose voice I am to hearken to let Israel go? I do not know Jehovah, neither will I let Israel go.ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
3 And they said, The God of the Hebrews has met with us: let us go, we pray thee, three days' journey into the wilderness, and sacrifice to Jehovah our God; lest he fall upon us with pestilence or with sword.ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
4 And the king of Egypt said to them, Why do ye, Moses and Aaron, wish to have the people go off from their works? Away, to your burdens!ಐಗುಪ್ತದ ಅರಸನು ಅವರಿಗೆ--ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸ ಗಳನ್ನು ಮಾಡದಂತೆ ಯಾಕೆ ಮಾಡುತ್ತೀರಿ? ನಿಮ್ಮ ಬಿಟ್ಟೀಕೆಲಸಗಳಿಗೆ ಹೋಗಿರಿ ಅಂದನು.
5 And Pharaoh said, Behold the people of the land are now many, and ye wish to make them rest from their burdens.ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
6 And Pharaoh commanded the same day the taskmasters of the people, and their officers, saying,ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
7 Ye shall no more give the people straw to make brick, as heretofore: let them go and gather straw for themselves.ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
8 And the number of the bricks they have made heretofore shall ye lay upon them: ye shall not diminish any of it, for they are idle; therefore they cry, saying, Let us go [and] sacrifice to our God.ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
9 Let them put heavier labour on the men, that they may be taken up with it, and not regard vain words.ಈ ಜನರು ವ್ಯರ್ಥವಾದ ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ, ಅವರು ದುಡಿಯಲಿ ಎಂದು ಆಜ್ಞಾಪಿಸಿದನು.
10 And the taskmasters of the people and their officers went out and spoke to the people, saying, Thus says Pharaoh: I will not give you straw:ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಅಧಿ ಕಾರಿಗಳೂ ಹೊರಗೆಹೋಗಿ ಜನರಿಗೆ--ಫರೋಹನು ಹೀಗೆ ಹೇಳುತ್ತಾನೆ--ನಾನು ನಿಮಗೆ ಹುಲ್ಲು ಕೊಡು ವದಿಲ್ಲ.
11 go ye, get yourselves straw where ye may find it; but none of your work shall be diminished.ನಿಮಗೆ ಹುಲ್ಲು ಎಲ್ಲಿ ದೊರಕುವದೋ ಅಲ್ಲಿಗೆ ನೀವೇ ಹೋಗಿ ತಕ್ಕೊಳ್ಳಿರಿ; ಆದಾಗ್ಯೂ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು ಎಂದು ಹೇಳಿ ದ್ದಾನೆ ಅಂದನು.
12 And the people were scattered abroad throughout the land of Egypt to gather stubble for straw.ಆಗ ಜನರು ಹುಲ್ಲಿಗೆ ಬದಲಾಗಿ ಕೂಳೆ ಕೂಡಿಸಿಕೊಳ್ಳುವದಕ್ಕೆ ಐಗುಪ್ತದೇಶದಲ್ಲೆಲ್ಲಾ ಚದರಿಹೋದರು.
13 And the taskmasters urged [them], saying, Fulfil your labours, the daily work, as when there was straw.ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು.
14 And the officers of the children of Israel, whom Pharaoh's taskmasters had set over them, were beaten, [and] it was said, Why have ye not fulfilled your task in making brick, both yesterday and to-day, as heretofore?ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
15 Then the officers of the children of Israel came and cried to Pharaoh, saying, Why dost thou deal thus with thy bondmen?ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
16 There is no straw given to thy bondmen, and they say to us, Make brick; and behold, thy bondmen are beaten, but it is the fault of thy people.ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.
17 And he said, Ye are idle, idle! therefore ye say, Let us go and sacrifice to Jehovah.ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
18 And now go -- work! and straw shall not be given you, and ye shall deliver the measure of bricks.ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
19 And the officers of the children of Israel saw [that] it stood ill with them, because it was said, Ye shall not diminish anything from your bricks, the daily work.ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು.
20 And they met Moses and Aaron, who stood there to meet them, as they came out from Pharaoh.ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
21 And they said to them, Jehovah look upon you and judge, that ye have made our odour to stink in the eyes of Pharaoh, and in the eyes of his bondmen, putting a sword into their hand to kill us!ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
22 And Moses returned to Jehovah, and said, Lord, why hast thou done evil to this people? why now hast thou sent me?ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?
23 For ever since I came to Pharaoh to speak in thy name, he hath done evil to this people; neither hast thou delivered thy people at all!ನಾನು ಫರೋಹನ ಬಳಿಗೆ ಬಂದು ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಈ ಜನರಿಗೆ ಅವನು ಕೇಡನ್ನೇ ಮಾಡುತ್ತಾನೆ. ನೀನು ನಿನ್ನ ಜನರನ್ನು ತಪ್ಪಿಸಲಿಲ್ಲವಲ್ಲಾ ಅಂದನು.
Kannada Bible