Bible

Exodus 7 - WEB (Kannada)

1 Yahweh said to Moses, "Behold, I have made you as God to Pharaoh; and Aaron your brother shall be your prophet.ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ.

2 You shall speak all that I command you; and Aaron your brother shall speak to Pharaoh, that he let the children of Israel go out of his land.ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್‌ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.

3 I will harden Pharaoh's heart, and multiply my signs and my wonders in the land of Egypt.ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.

4 But Pharaoh will not listen to you, and I will lay my hand on Egypt, and bring forth my hosts, my people the children of Israel, out of the land of Egypt by great judgments.ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್‌ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.

5 The Egyptians shall know that I am Yahweh, when I stretch forth my hand on Egypt, and bring out the children of Israel from among them."ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್‌ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು.

6 Moses and Aaron did so. As Yahweh commanded them, so they did.ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು.

7 Moses was eighty years old, and Aaron eighty-three years old, when they spoke to Pharaoh.ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.

8 Yahweh spoke to Moses and to Aaron, saying,ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ--

9 "When Pharaoh speaks to you, saying, 'Perform a miracle!' then you shall tell Aaron, 'Take your rod, and cast it down before Pharaoh, that it become a serpent.'"ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.

10 Moses and Aaron went in to Pharaoh, and they did so, as Yahweh had commanded: and Aaron cast down his rod before Pharaoh and before his servants, and it became a serpent.ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.

11 Then Pharaoh also called for the wise men and the sorcerers. They also, the magicians of Egypt, did in like manner with their enchantments.ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.

12 For they cast down every man his rod, and they became serpents: but Aaron's rod swallowed up their rods.ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.

13 Pharaoh's heart was hardened, and he didn't listen to them; as Yahweh had spoken.ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.

14 Yahweh said to Moses, "Pharaoh's heart is stubborn. He refuses to let the people go.ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.

15 Go to Pharaoh in the morning. Behold, he goes out to the water; and you shall stand by the river's bank to meet him; and the rod which was turned to a serpent you shall take in your hand.ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು

16 You shall tell him, 'Yahweh, the God of the Hebrews, has sent me to you, saying, "Let my people go, that they may serve me in the wilderness:" and, behold, until now you haven't listened.ಅವನಿಗೆ ನೀನು--ಇಬ್ರಿಯರ ದೇವರಾದ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ ಅರಣ್ಯದಲ್ಲಿ ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು ಎಂದು ಹೇಳಿದ್ದಾನೆ. ಆದರೆ ಇಗೋ, ಇಂದಿನ ವರೆಗೂ ನೀನು ಕೇಳಲಿಲ್ಲ.

17 Thus says Yahweh, "In this you shall know that I am Yahweh. Behold, I will strike with the rod that is in my hand on the waters which are in the river, and they shall be turned to blood.ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು.

18 The fish that are in the river shall die, and the river shall become foul; and the Egyptians shall loathe to drink water from the river."'"ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು.

19 Yahweh said to Moses, "Tell Aaron, 'Take your rod, and stretch out your hand over the waters of Egypt, over their rivers, over their streams, and over their pools, and over all their ponds of water, that they may become blood; and there shall be blood throughout all the land of Egypt, both in vessels of wood and in vessels of stone.'"ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು.

20 Moses and Aaron did so, as Yahweh commanded; and he lifted up the rod, and struck the waters that were in the river, in the sight of Pharaoh, and in the sight of his servants; and all the waters that were in the river were turned to blood.ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

21 The fish that were in the river died; and the river became foul, and the Egyptians couldn't drink water from the river; and the blood was throughout all the land of Egypt.ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.

22 The magicians of Egypt did in like manner with their enchantments; and Pharaoh's heart was hardened, and he didn't listen to them; as Yahweh had spoken.ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

23 Pharaoh turned and went into his house, neither did he lay even this to heart.ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ.

24 All the Egyptians dug round about the river for water to drink; for they couldn't drink of the water of the river.ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.

25 Seven days were fulfilled, after Yahweh had struck the river.ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.

Kannada Bible