Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Ezekiel 35 KJV ASV BBE DBY WBT WEB YLT

Ezekiel 35 in Kannada WBT Compare Webster's Bible

Ezekiel 35

1 ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,

2 ಮನುಷ್ಯಪುತ್ರನೇ, ನೀನು ಸೇಯಾರ್‌ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;

3 ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್‌ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.

4 ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.

5 ನೀನು ಇಸ್ರಾಯೇಲ್ಯರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕೊನೆಯ ಕಾಲದಲ್ಲಿ ಅಪತ್ತು ಸಂಭವಿಸಿ ದಾಗ ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದಿ.

6 ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.

7 ಹೀಗೆ ನಾನು ಸೇಯಾರ್‌ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.

8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು.

9 ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.

10 ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.

11 ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

12 ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.

13 ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.

14 ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.

15 ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close