Bible

Genesis 13:5-17 in Kannada

Genesis 13:5
ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.

Genesis 13:6
ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.

Genesis 13:7
ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.

Genesis 13:8
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

Genesis 13:9
ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.

Genesis 13:10
ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.

Genesis 13:11
ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.

Genesis 13:12
ಅಬ್ರಾಮನು ಕಾನಾನ್‌ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.

Genesis 13:13
ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.

Genesis 13:14
ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.

Genesis 13:15
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

Genesis 13:16
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.

Genesis 13:17
ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.

Kannada Bible