Genesis 13 - YLT (Kannada)
1 And Abram goeth up from Egypt (he and his wife, and all that he hath, and Lot with him) towards the south;ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
2 and Abram `is' exceedingly wealthy in cattle, in silver, and in gold.ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
3 And he goeth on his journeyings from the south, even unto Bethel, unto the place where his tent had been at the commencement, between Bethel and Hai --ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ
4 unto the place of the altar which he made there at the first, and there doth Abram preach in the name of Jehovah.ಮೊದಲು ಅವನು ಮಾಡಿದ್ದ ಬಲಿಪೀಠದ ಸ್ಥಳಕ್ಕೂ ಬಂದನು. ಅಲ್ಲಿ ಅಬ್ರಾಮನು ಕರ್ತನ ಹೆಸರನ್ನು ಹೇಳಿಕೊಂಡನು.
5 And also to Lot, who is going with Abram, there hath been sheep and oxen and tents;ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.
6 and the land hath not suffered them to dwell together, for their substance hath been much, and they have not been able to dwell together;ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
7 and there is a strife between those feeding Abram's cattle and those feeding Lot's cattle; and the Canaanite and the Perizzite `are' then dwelling in the land.ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
8 And Abram saith unto Lot, `Let there not, I pray thee, be strife between me and thee, and between my shepherds and thy shepherds, for we `are' men -- brethren.ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
9 Is not all the land before thee? be parted, I pray thee, from me; if to the left, then I to the right; and if to the right, then I to the left.'ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
10 And Lot lifteth up his eyes, and seeth the whole circuit of the Jordan that it `is' all a watered country (before Jehovah's destroying Sodom and Gomorrah, as Jehovah's garden, as the land of Egypt,) in thy coming toward Zoar,ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
11 and Lot chooseth for himself the whole circuit of the Jordan; and Lot journeyeth from the east, and they are parted -- a man from his companion;ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು.
12 Abram hath dwelt in the land of Canaan, and Lot hath dwelt in the cities of the circuit, and tenteth unto Sodom;ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
13 and the men of Sodom `are' evil, and sinners before Jehovah exceedingly.ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
14 And Jehovah said unto Abram, after Lot's being parted from him, `Lift up, I pray thee, thine eyes, and look from the place where thou `art', northward, and southward, and eastward, and westward;ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
15 for the whole of the land which thou are seeing, to thee I give it, and to thy seed -- to the age.ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
16 And I have set thy seed as dust of the earth, so that, if one is able to number the dust of the earth, even thy seed is numbered;ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
17 rise, go up and down through the land, to its length, and to its breadth, for to thee I give it.'ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.
18 And Abram tenteth, and cometh, and dwelleth among the oaks of Mamre, which `are' in Hebron, and buildeth there an altar to Jehovah.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
Kannada Bible