Bible

Genesis 16 - WEB (Kannada)

1 Now Sarai, Abram's wife, bore him no children. She had a handmaid, an Egyptian, whose name was Hagar.ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.

2 Sarai said to Abram," See now, Yahweh has restrained me from bearing. Please go in to my handmaid. It may be that I will obtain children by her." Abram listened to the voice of Sarai.ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.

3 Sarai, Abram's wife, took Hagar the Egyptian, her handmaid, after Abram had lived ten years in the land of Canaan, and gave her to Abram her husband to be his wife.ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.

4 He went in to Hagar, and she conceived. When she saw that she had conceived, her mistress was despised in her eyes.ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.

5 Sarai said to Abram, "This wrong is your fault. I gave my handmaid into your bosom, and when she saw that she had conceived, I was despised in her eyes. Yahweh judge between me and you."ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.

6 But Abram said to Sarai, "Behold, your maid is in your hand. Do to her whatever is good in your eyes." Sarai dealt harshly with her, and she fled from her face.ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.

7 The angel of Yahweh found her by a fountain of water in the wilderness, by the fountain in the way to Shur.ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು

8 He said, "Hagar, Sarai's handmaid, where did you come from? Where are you going?" She said, "I am fleeing from the face of my mistress Sarai."ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.

9 The angel of Yahweh said to her, "Return to your mistress, and submit yourself under her hands."ಕರ್ತನ ದೂತನು ಅವಳಿಗೆ--ನಿನ್ನ ಯಜಮಾನಿಯ ಬಳಿಗೆ ಹಿಂತಿರುಗಿ ಹೋಗಿ ಅವಳಿಗೆ ನೀನು ಅಧೀನಳಾಗಿರು ಅಂದನು.

10 The angel of Yahweh said to her, "I will greatly multiply your seed, that they will not be numbered for multitude."ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.

11 The angel of Yahweh said to her, "Behold, you are with child, and will bear a son. You shall call his name Ishmael, because Yahweh has heard your affliction.ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.

12 He will be like a wild donkey among men. His hand will be against every man, and every man's hand against him. He will live opposite all of his brothers."ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.

13 She called the name of Yahweh who spoke to her, "You are a God who sees," for she said, "Have I even stayed alive after seeing him?"ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.

14 Therefore the well was called Beer Lahai Roi.{Beer Lahai Roi means "well of the one who lives and sees me."} Behold, it is between Kadesh and Bered.ಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.

15 Hagar bore a son for Abram. Abram called the name of his son, whom Hagar bore, Ishmael.ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.

16 Abram was eighty-six years old, when Hagar bore Ishmael to Abram.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.

Kannada Bible