Genesis 17 - WEB (Kannada)
1 When Abram was ninety-nine years old, Yahweh appeared to Abram, and said to him, "I am God Almighty. Walk before me, and be blameless.ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
2 I will make my covenant between me and you, and will multiply you exceedingly."ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
3 Abram fell on his face. God talked with him, saying,ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
4 "As for me, behold, my covenant is with you. You will be the father of a multitude of nations.ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
5 Neither will your name any more be called Abram, but your name will be Abraham; for the father of a multitude of nations have I made you.ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
6 I will make you exceeding fruitful, and I will make nations of you. Kings will come out of you.ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
7 I will establish my covenant between me and you and your seed after you throughout their generations for an everlasting covenant, to be a God to you and to your seed after you.ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
8 I will give to you, and to your seed after you, the land where you are traveling, all the land of Canaan, for an everlasting possession. I will be their God."ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
9 God said to Abraham, "As for you, you will keep my covenant, you and your seed after you throughout their generations.ಇದಲ್ಲದೆ ದೇವರು ಅಬ್ರಹಾಮನಿಗೆ--ನೀನು ನಿನ್ನ ತರುವಾಯ ಬರುವ ಸಂತಾನಗಳೂ ತಲತಲಾಂತರ ಗಳಲ್ಲಿ ನನ್ನ ಒಡಂಬಡಿಕೆಯನ್ನು ಕೈಕೊಳ್ಳಬೇಕು.
10 This is my covenant, which you shall keep, between me and you and your seed after you. Every male among you shall be circumcised.ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
11 You shall be circumcised in the flesh of your foreskin. It will be a token of a covenant between me and you.ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
12 He who is eight days old will be circumcised among you, every male throughout your generations, he who is born in the house, or bought with money of any foreigner who is not of your seed.ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ
13 He who is born in your house, and he who is bought with your money, must be circumcised. My covenant will be in your flesh for an everlasting covenant.ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
14 The uncircumcised male who is not circumcised in the flesh of his foreskin, that soul shall be cut off from his people. He has broken my covenant."ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
15 God said to Abraham, "As for Sarai your wife, you shall not call her name Sarai, but her name will be Sarah.ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
16 I will bless her, and moreover I will give you a son by her. Yes, I will bless her, and she will be a mother of nations. Kings of peoples will come from her."ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
17 Then Abraham fell on his face, and laughed, and said in his heart, "Will a child be born to him who is one hundred years old? Will Sarah, who is ninety years old, give birth?"ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
18 Abraham said to God, "Oh that Ishmael might live before you!"ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
19 God said, "No, but Sarah, your wife, will bear you a son. You shall call his name Isaac.{Isaac means "he laughs."} I will establish my covenant with him for an everlasting covenant for his seed after him.ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
20 As for Ishmael, I have heard you. Behold, I have blessed him, and will make him fruitful, and will multiply him exceedingly. He will become the father of twelve princes, and I will make him a great nation.ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
21 But my covenant I establish with Isaac, whom Sarah will bear to you at this set time in the next year."ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
22 When he finished talking with him, God went up from Abraham.ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
23 Abraham took Ishmael his son, all who were born in his house, and all who were bought with his money; every male among the men of Abraham's house, and circumcised the flesh of their foreskin in the same day, as God had said to him.ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
24 Abraham was ninety-nine years old, when he was circumcised in the flesh of his foreskin.ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
25 Ishmael, his son, was thirteen years old when he was circumcised in the flesh of his foreskin.ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
26 In the same day both Abraham and Ishmael, his son, were circumcised.ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.
27 All the men of his house, those born in the house, and those bought with money of a foreigner, were circumcised with him.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
Kannada Bible