Genesis 3 - YLT (Kannada)
1 And the serpent hath been subtile above every beast of the field which Jehovah God hath made, and he saith unto the woman, `Is it true that God hath said, Ye do not eat of every tree of the garden?'ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು.
2 And the woman saith unto the serpent, `Of the fruit of the trees of the garden we do eat,ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.
3 and of the fruit of the tree which `is' in the midst of the garden God hath said, Ye do not eat of it, nor touch it, lest ye die.'ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು.
4 And the serpent saith unto the woman, `Dying, ye do not die,ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
5 for God doth know that in the day of your eating of it -- your eyes have been opened, and ye have been as God, knowing good and evil.'ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
6 And the woman seeth that the tree `is' good for food, and that it `is' pleasant to the eyes, and the tree is desirable to make `one' wise, and she taketh of its fruit and eateth, and giveth also to her husband with her, and he doth eat;ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
7 and the eyes of them both are opened, and they know that they `are' naked, and they sew fig-leaves, and make to themselves girdles.ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
8 And they hear the sound of Jehovah God walking up and down in the garden at the breeze of the day, and the man and his wife hide themselves from the face of Jehovah God in the midst of the trees of the garden.ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
9 And Jehovah God calleth unto the man, and saith to him, `Where `art' thou?'ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು.
10 and he saith, `Thy sound I have heard in the garden, and I am afraid, for I am naked, and I hide myself.'ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.
11 And He saith, `Who hath declared to thee that thou `art' naked? of the tree of which I have commanded thee not to eat, hast thou eaten?'ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
12 and the man saith, `The woman whom Thou didst place with me -- she hath given to me of the tree -- and I do eat.'ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
13 And Jehovah God saith to the woman, `What `is' this thou hast done?' and the woman saith, `The serpent hath caused me to forget -- and I do eat.'ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
14 And Jehovah God saith unto the serpent, `Because thou hast done this, cursed `art' thou above all the cattle, and above every beast of the field: on thy belly dost thou go, and dust thou dost eat, all days of thy life;ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
15 and enmity I put between thee and the woman, and between thy seed and her seed; he doth bruise thee -- the head, and thou dost bruise him -- the heel.'ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
16 Unto the woman He said, `Multiplying I multiply thy sorrow and thy conception, in sorrow dost thou bear children, and toward thy husband `is' thy desire, and he doth rule over thee.'ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು.
17 And to the man He said, `Because thou hast hearkened to the voice of thy wife, and dost eat of the tree concerning which I have charged thee, saying, Thou dost not eat of it, cursed `is' the ground on thine account; in sorrow thou dost eat of it all days of thy life,ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
18 and thorn and bramble it doth bring forth to thee, and thou hast eaten the herb of the field;ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ.
19 by the sweat of thy face thou dost eat bread till thy return unto the ground, for out of it hast thou been taken, for dust thou `art', and unto dust thou turnest back.'ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
20 And the man calleth his wife's name Eve: for she hath been mother of all living.ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
21 And Jehovah God doth make to the man and to his wife coats of skin, and doth clothe them.ಕರ್ತನಾದ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ಅವರಿಗೆ ತೊಡಿಸಿದನು.
22 And Jehovah God saith, `Lo, the man was as one of Us, as to the knowledge of good and evil; and now, lest he send forth his hand, and have taken also of the tree of life, and eaten, and lived to the age,' --ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
23 Jehovah God sendeth him forth from the garden of Eden to serve the ground from which he hath been taken;ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.
24 yea, he casteth out the man, and causeth to dwell at the east of the garden of Eden the cherubs and the flame of the sword which is turning itself round to guard the way of the tree of life.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Kannada Bible