Genesis 4

fullscreen1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.

fullscreen2 ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.

fullscreen3 ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.

fullscreen4 ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.

fullscreen5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.

fullscreen6 ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?

fullscreen7 ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.

fullscreen8 ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.

fullscreen9 ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.

fullscreen10 ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.

fullscreen11 ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.

fullscreen12 ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.

fullscreen13 ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.

fullscreen14 ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.

fullscreen15 ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.

1 And Adam knew Eve his wife; and she conceived, and bare Cain, and said, I have gotten a man from the Lord.

2 And she again bare his brother Abel. And Abel was a keeper of sheep, but Cain was a tiller of the ground.

3 And in process of time it came to pass, that Cain brought of the fruit of the ground an offering unto the Lord.

4 And Abel, he also brought of the firstlings of his flock and of the fat thereof. And the Lord had respect unto Abel and to his offering:

5 But unto Cain and to his offering he had not respect. And Cain was very wroth, and his countenance fell.

6 And the Lord said unto Cain, Why art thou wroth? and why is thy countenance fallen?

7 If thou doest well, shalt thou not be accepted? and if thou doest not well, sin lieth at the door. And unto thee shall be his desire, and thou shalt rule over him.

8 And Cain talked with Abel his brother: and it came to pass, when they were in the field, that Cain rose up against Abel his brother, and slew him.

9 And the Lord said unto Cain, Where is Abel thy brother? And he said, I know not: Am I my brother’s keeper?

10 And he said, What hast thou done? the voice of thy brother’s blood crieth unto me from the ground.

11 And now art thou cursed from the earth, which hath opened her mouth to receive thy brother’s blood from thy hand;

12 When thou tillest the ground, it shall not henceforth yield unto thee her strength; a fugitive and a vagabond shalt thou be in the earth.

13 And Cain said unto the Lord, My punishment is greater than I can bear.

14 Behold, thou hast driven me out this day from the face of the earth; and from thy face shall I be hid; and I shall be a fugitive and a vagabond in the earth; and it shall come to pass, that every one that findeth me shall slay me.

15 And the Lord said unto him, Therefore whosoever slayeth Cain, vengeance shall be taken on him sevenfold. And the Lord set a mark upon Cain, lest any finding him should kill him.

Genesis 4 in Tamil and English

1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
And Adam knew Eve his wife; and she conceived, and bare Cain, and said, I have gotten a man from the Lord.

2 ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
And she again bare his brother Abel. And Abel was a keeper of sheep, but Cain was a tiller of the ground.

3 ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
And in process of time it came to pass, that Cain brought of the fruit of the ground an offering unto the Lord.

4 ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
And Abel, he also brought of the firstlings of his flock and of the fat thereof. And the Lord had respect unto Abel and to his offering:

5 ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
But unto Cain and to his offering he had not respect. And Cain was very wroth, and his countenance fell.

6 ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
And the Lord said unto Cain, Why art thou wroth? and why is thy countenance fallen?

7 ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
If thou doest well, shalt thou not be accepted? and if thou doest not well, sin lieth at the door. And unto thee shall be his desire, and thou shalt rule over him.

8 ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
And Cain talked with Abel his brother: and it came to pass, when they were in the field, that Cain rose up against Abel his brother, and slew him.

9 ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
And the Lord said unto Cain, Where is Abel thy brother? And he said, I know not: Am I my brother’s keeper?

10 ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
And he said, What hast thou done? the voice of thy brother’s blood crieth unto me from the ground.

11 ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
And now art thou cursed from the earth, which hath opened her mouth to receive thy brother’s blood from thy hand;

12 ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
When thou tillest the ground, it shall not henceforth yield unto thee her strength; a fugitive and a vagabond shalt thou be in the earth.

13 ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
And Cain said unto the Lord, My punishment is greater than I can bear.

14 ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
Behold, thou hast driven me out this day from the face of the earth; and from thy face shall I be hid; and I shall be a fugitive and a vagabond in the earth; and it shall come to pass, that every one that findeth me shall slay me.

15 ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
And the Lord said unto him, Therefore whosoever slayeth Cain, vengeance shall be taken on him sevenfold. And the Lord set a mark upon Cain, lest any finding him should kill him.