Cross Reference
Leviticus 11:25
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
Leviticus 16:26
ಪಾಪ ಪಶುವಿಗಾಗಿ ಆಡನ್ನು ಹೋಗಲು ಬಿಟ್ಟ ವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ತನ್ನ ಶರೀರ ವನ್ನು ನೀರಿನಲ್ಲಿ ತೊಳೆದುಕೊಂಡ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.
Leviticus 17:15
ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.
Leviticus 13:34
ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
Leviticus 14:8
ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು.
Leviticus 14:27
ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು.
Leviticus 14:46
ಇದಲ್ಲದೆ ಆ ಮನೆಯು ಮುಚ್ಚಲ್ಪಟ್ಟ ಕಾಲದಲ್ಲೆಲ್ಲಾ ಅದರೊಳಗೆ ಹೋಗುವವನು ಸಾಯಂಕಾಲದ ವರೆಗೆ ಅಶುದ್ಧ ನಾಗಿರುವನು.
Leviticus 16:28
ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
Numbers 19:10
ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಇಸ್ರಾಯೇಲ್ ಮಕ್ಕಳಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಇದು ಶಾಶ್ವತ ಕಟ್ಟಳೆಯಾಗಿರಬೇಕು.
Numbers 19:22
ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
Psalm 26:6
ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
Psalm 51:2
ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
Leviticus 11:28
ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
Isaiah 1:16
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
Isaiah 22:14
ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
Ezekiel 36:25
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
Ezekiel 36:29
ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
Hebrews 9:14
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
Hebrews 9:26
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
Hebrews 10:22
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
James 4:8
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
Revelation 7:14
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
Psalm 51:7
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
Leviticus 11:32
ಅವು ಸತ್ತುಹೋಗಿ ಯಾವದರ ಮೇಲೆ ಬೀಳುವವೊ ಅವೆಲ್ಲಾ ಅಶುದ್ಧವಾಗಿರುವವು; ಅದು ಮರದ ಪಾತ್ರೆ ಯಾಗಲಿ ಉಡುಪಾಗಲಿ ಚರ್ಮವಾಗಲಿ ಚೀಲ ವಾಗಲಿ ಕೆಲಸಮಾಡುವ ಯಾವ ಸಾಮಾನಾಗಲಿ ಅದು ಏನೇ ಆಗಿರಲಿ ಸಾಯಂಕಾಲದ ವರೆಗೆ ನೀರಲ್ಲಿ ಇಡಲ್ಪಟ್ಟು ಅಶುದ್ಧವಾಗಿರುವದು; ತರುವಾಯ ಅದು ಶುದ್ಧವಾಗುವದು.
Leviticus 13:6
ಯಾಜಕನು ಅವನನ್ನು ಏಳನೆಯ ದಿನದಲ್ಲಿ ನೋಡಬೇಕು. ಆಗ ಇಗೋ, ವ್ಯಾಧಿಯು ಸ್ವಲ್ಪ ಕಪ್ಪಾ ಗಿದ್ದು ಚರ್ಮದಲ್ಲೆಲ್ಲಾ ಹರಡದಿದ್ದರೆ ಯಾಜಕನು ಅವ ನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶುದ್ಧನಾಗಿರುವನು.