Romans 9 - DBY (Kannada)
1 I say [the] truth in Christ, I lie not, my conscience bearing witness with me in [the] Holy Spirit,ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
2 that I have great grief and uninterrupted pain in my heart,ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
3 for I have wished, I myself, to be a curse from the Christ for my brethren, my kinsmen, according to flesh;ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
4 who are Israelites; whose [is] the adoption, and the glory, and the covenants, and the law-giving, and the service, and the promises;ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
5 whose [are] the fathers; and of whom, as according to flesh, [is] the Christ, who is over all, God blessed for ever. Amen.ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
6 Not however as though the word of God had failed; for not all [are] Israel which [are] of Israel;ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
7 nor because they are seed of Abraham [are] all children: but, In Isaac shall a seed be called to thee.ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
8 That is, [they that are] the children of the flesh, these [are] not the children of God; but the children of the promise are reckoned as seed.ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
9 For this word [is] of promise, According to this time I will come, and there shall be a son to Sarah.ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
10 And not only [that], but Rebecca having conceived by one, Isaac our father,ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
11 [the children] indeed being not yet born, or having done anything good or worthless (that the purpose of God according to election might abide, not of works, but of him that calls),(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
12 it was said to her, The greater shall serve the less:ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
13 according as it is written, I have loved Jacob, and I have hated Esau.ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
14 What shall we say then? [Is there] unrighteousness with God? Far be the thought.ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
15 For he says to Moses, I will shew mercy to whom I will shew mercy, and I will feel compassion for whom I will feel compassion.ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
16 So then [it is] not of him that wills, nor of him that runs, but of God that shews mercy.ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
17 For the scripture says to Pharaoh, For this very thing I have raised thee up from amongst [men], that I might thus shew in thee my power, and so that my name should be declared in all the earth.ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
18 So then, to whom he will he shews mercy, and whom he will he hardens.ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
19 Thou wilt say to me then, Why does he yet find fault? for who resists his purpose?ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
20 Aye, but thou, O man, who art *thou* that answerest again to God? Shall the thing formed say to him that has formed it, Why hast thou made me thus?ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
21 Or has not the potter authority over the clay, out of the same lump to make one vessel to honour, and another to dishonour?ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
22 And if God, minded to shew his wrath and to make his power known, endured with much long-suffering vessels of wrath fitted for destruction;ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
23 and that he might make known the riches of his glory upon vessels of mercy, which he had before prepared for glory,ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
24 us, whom he has also called, not only from amongst [the] Jews, but also from amongst [the] nations?ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
25 As he says also in Hosea, I will call not-my-people My people; and the-not-beloved Beloved.ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
26 And it shall be, in the place where it was said to them, *Ye* [are] not my people, there shall they be called Sons of [the] living God.ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
27 But Esaias cries concerning Israel, Should the number of the children of Israel be as the sand of the sea, the remnant shall be saved:ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
28 for [he] is bringing the matter to an end, and [cutting [it] short in righteousness; because] a cutting short of the matter will [the] Lord accomplish upon the earth.ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
29 And according as Esaias said before, Unless [the] Lord of hosts had left us a seed, we had been as Sodom, and made like even as Gomorrha.ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
30 What then shall we say? That [they of the] nations, who did not follow after righteousness, have attained righteousness, but [the] righteousness that is on the principle of faith.ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
31 But Israel, pursuing after a law of righteousness, has not attained to [that] law.ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
32 Wherefore? Because [it was] not on the principle of faith, but as of works. They have stumbled at the stumblingstone,ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
33 according as it is written, Behold, I place in Zion a stone of stumbling and rock of offence: and he that believes on him shall not be ashamed.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Kannada Bible