Hebrews 7 - DBY (Kannada)
1 For this Melchisedec, King of Salem, priest of the most high God, who met Abraham returning from smiting the kings, and blessed him;ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
2 to whom Abraham gave also the tenth portion of all; first being interpreted King of righteousness, and then also King of Salem, which is King of peace;ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
3 without father, without mother, without genealogy; having neither beginning of days nor end of life, but assimilated to the Son of God, abides a priest continually.ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
4 Now consider how great this [personage] was, to whom [even] the patriarch Abraham gave a tenth out of the spoils.ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
5 And they indeed from among the sons of Levi, who receive the priesthood, have commandment to take tithes from the people according to the law, that is from their brethren, though these are come out of the loins of Abraham:ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
6 but he who has no genealogy from them has tithed Abraham, and blessed him who had the promises.ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
7 But beyond all gainsaying, the inferior is blessed by the better.ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.
8 And here dying men receive tithes; but there [one] of whom the witness is that he lives;ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
9 and, so to speak, through Abraham, Levi also, who received tithes, has been made to pay tithes.ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
10 For he was yet in the loins of his father when Melchisedec met him.ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
11 If indeed then perfection were by the Levitical priesthood, for the people had their law given to them in connexion with *it*, what need [was there] still that a different priest should arise according to the order of Melchisedec, and not be named after the order of Aaron?ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
12 For, the priesthood being changed, there takes place of necessity a change of law also.ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
13 For he, of whom these things are said, belongs to a different tribe, of which no one has [ever] been attached to the service of the altar.ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
14 For it is clear that our Lord has sprung out of Juda, as to which tribe Moses spake nothing as to priests.ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
15 And it is yet more abundantly evident, since a different priest arises according to the similitude of Melchisedec,ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
16 who has been constituted not according to law of fleshly commandment, but according to power of indissoluble life.ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
17 For it is borne witness, *Thou* art a priest for ever according to the order of Melchisedec.ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
18 For there is a setting aside of the commandment going before for its weakness and unprofitableness,ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
19 (for the law perfected nothing,) and the introduction of a better hope by which we draw nigh to God.ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
20 And by how much [it was] not without the swearing of an oath;ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
21 (for they are become priests without the swearing of an oath, but he with the swearing of an oath, by him who said, as to him, The Lord has sworn, and will not repent [of it], *Thou* [art] priest for ever [according to the order of Melchisedec];)(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
22 by so much Jesus became surety of a better covenant.ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
23 And they have been many priests, on account of being hindered from continuing by death;ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
24 but he, because of his continuing for ever, has the priesthood unchangeable.ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
25 Whence also he is able to save completely those who approach by him to God, always living to intercede for them.ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
26 For such a high priest became us, holy, harmless, undefiled, separated from sinners, and become higher than the heavens:ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
27 who has not day by day need, as the high priests, first to offer up sacrifices for his own sins, then [for] those of the people; for this he did once for all [in] having offered up himself.ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
28 For the law constitutes men high priests, having infirmity; but the word of the swearing of the oath which [is] after the law, a Son perfected for ever.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Kannada Bible