Bible

Hosea 7 - BBE (Kannada)

1 When my desire was for the fate of my people to be changed and to make Israel well, then the sin of Ephraim was made clear, and the evil-doing of Samaria; for their ways are false, and the thief comes into the house, while the band of outlaws takes property by force in the streets.ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.

2 And they do not say to themselves that I keep in mind all their sin; now their evil acts come round them on every side; they are before my face.ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.

3 In their sin they make a king for themselves, and rulers in their deceit.ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.

4 They are all untrue; they are like a burning oven; the bread-maker does not make up the fire from the time when the paste is mixed till it is leavened.ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.

5 On the day of our king, the rulers made him ill with the heat of wine; his hand was stretched out with the men of pride.ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

6 For they have made their hearts ready like an oven, while they are waiting secretly; their wrath is sleeping all night; in the morning it is burning like a flaming fire.ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.

7 They are all heated like an oven, and they put an end to their judges; all their kings have been made low; not one among them makes prayer to me.ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.

8 Ephraim is mixed with the peoples; Ephraim is a cake not turned.ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.

9 Men from other lands have made waste his strength, and he is not conscious of it; grey hairs have come on him here and there, and he has no knowledge of it.ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

10 And the pride of Israel gives an answer to his face; but for all this, they have not gone back to the Lord their God, or made search for him.ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.

11 And Ephraim is like a foolish dove, without wisdom; they send out their cry to Egypt, they go to Assyria.ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

12 When they go, my net will be stretched out over them; I will take them like the birds of heaven, I will give them punishment, I will take them away in the net for their sin.ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.

13 May trouble be theirs! for they have gone far away from me; and destruction, for they have been sinning against me; I was ready to be their saviour, but they said false words against me.ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.

14 And they have not made prayer to me in their hearts, but they make loud cries on their beds; they are cutting themselves for food and wine, they are turned against me.ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.

15 Though I have given training and strength to their arms, they have evil designs against me.ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

16 They have gone to what is of no value; they are like a false bow; their captains will come to destruction by the sword, and their ruler by my wrath; for this, the land of Egypt will make sport of them.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.

Kannada Bible