Bible

Hosea 7 - DBY (Kannada)

1 When I would heal Israel, then the iniquity of Ephraim is discovered, and the wickedness of Samaria: for they practise falsehood; and the thief entereth in, [and] the troop of robbers assaileth without.ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.

2 And they say not in their hearts [that] I remember all their wickedness: now do their own doings encompass them; they are before my face.ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.

3 They make the king glad with their wickedness, and the princes with their lies.ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.

4 They all practise adultery, as an oven heated by the baker: he ceaseth from stirring [the fire] after he hath kneaded the dough, until it be leavened.ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.

5 In the day of our king, the princes made themselves sick with the heat of wine: he stretched out his hand to scorners.ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

6 For they have applied their heart like an oven to their lying in wait: their baker sleepeth all the night; in the morning it burneth like a flaming fire.ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.

7 They are all hot as an oven, and devour their judges; all their kings are fallen: there is none among them that calleth unto me.ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.

8 Ephraim, he mixeth himself with the peoples; Ephraim is a cake not turned.ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.

9 Strangers have devoured his strength, and he knoweth [it] not; yea, gray hairs are here and there upon him, and he knoweth [it] not.ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

10 And the pride of Israel testifieth to his face; and they do not return to Jehovah their God, nor seek him for all this.ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.

11 And Ephraim is become like a silly dove without understanding: they call to Egypt, they go to Assyria.ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.

12 When they go, I will spread my net upon them; I will bring them down as the fowl of the heavens; I will chastise them, according as their assembly hath heard.ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.

13 Woe unto them! for they have wandered from me; destruction unto them! for they have transgressed against me. And I would redeem them; but they speak lies against me.ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.

14 And they cried not unto me in their heart, when they howled upon their beds; they assemble themselves for corn and new wine; they have turned aside from me.ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.

15 I have indeed trained, I have strengthened their arms, but they imagine mischief against me.ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ, ಆದಾಗ್ಯೂ ಅವರು ನನಗೆ ವಿರುದ್ಧ ವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

16 They return, [but] not to the [Most] High: they are like a deceitful bow. Their princes shall fall by the sword for the rage of their tongue: this shall be their derision in the land of Egypt.ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.

Kannada Bible