Hosea 9 - WEB (Kannada)
1 Don't rejoice, Israel, to jubilation like the nations; For you were unfaithful to your God. You love the wages of a prostitute at every grain threshing floor.ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
2 The threshing floor and the winepress won't feed them, And the new wine will fail her.ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.
3 They won't dwell in Yahweh's land; But Ephraim will return to Egypt, And they will eat unclean food in Assyria.ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
4 They won't pour out wine offerings to Yahweh, Neither will they be pleasing to him. Their sacrifices will be to them like the bread of mourners; All who eat of it will be polluted; For their bread will be for their appetite. It will not come into the house of Yahweh.ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.
5 What will you do in the day of solemn assembly, And in the day of the feast of Yahweh?ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?
6 For, behold, they have gone away from destruction. Egypt will gather them up. Memphis will bury them. Nettles will possess their pleasant things of silver. Thorns will be in their tents.ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
7 The days of visitation have come. The days of reckoning have come. Israel will consider the prophet to be a fool, And the man who is inspired to be insane, Because of the abundance of your sins, And because your hostility is great.ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
8 A prophet watches over Ephraim with my God. A fowler's snare is on all of his paths, And hostility in the house of his God.ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
9 They have deeply corrupted themselves, As in the days of Gibeah. He will remember their iniquity. He will punish them for their sins.ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
10 I found Israel like grapes in the wilderness. I saw your fathers as the first ripe in the fig tree at its first season; But they came to Baal Peor, and consecrated themselves to the shameful thing, And became abominable like that which they loved.ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
11 As for Ephraim, their glory will fly away like a bird. There will be no birth, none with child, and no conception.ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
12 Though they bring up their children, Yet I will bereave them, so that not a man shall be left. Indeed, woe also to them when I depart from them!ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
13 Ephraim, like I have seen Tyre, is planted in a pleasant place; But Ephraim will bring out his children to the killer.ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
14 Give them--Yahweh what will you give? Give them a miscarrying womb and dry breasts.ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
15 "All their wickedness is in Gilgal; For there I hated them. Because of the wickedness of their deeds I will drive them out of my house! I will love them no more. All their princes are rebels.ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
16 Ephraim is struck. Their root has dried up. They will bear no fruit. Even though they bring forth, yet I will kill the beloved ones of their womb."ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.
17 My God will cast them away, because they did not listen to him; And they will be wanderers among the nations.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Kannada Bible