Bible

Isaiah 10 - WEB (Kannada)

1 Woe to those who decree unrighteous decrees, and to the writers who write perverseness;ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!

2 to turn aside the needy from justice, and to rob the poor of my people of their right, that widows may be their spoil, and that they may make the fatherless their prey!ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.

3 What will you do in the day of visitation, and in the desolation which shall come from far? to whom will you flee for help? and where will you leave your glory?ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?

4 They shall only bow down under the prisoners, and shall fall under the slain. For all this his anger is not turned away, but his hand is stretched out still.ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

5 Ho Assyrian, the rod of my anger, the staff in whose hand is my indignation!ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.

6 I will send him against a profane nation, and against the people of my wrath will I give him a charge, to take the spoil, and to take the prey, and to tread them down like the mire of the streets.ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

7 However he doesn't mean so, neither does his heart think so; but it is in his heart to destroy, and to cut off not a few nations.ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.

8 For he says, Aren't my princes all of them kings?ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

9 Isn't Calno as Carchemish? Isn't Hamath as Arpad? Isn't Samaria as Damascus?ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್‌ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?

10 As my hand has found the kingdoms of the idols, whose engraved images did excel them of Jerusalem and of Samaria;ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ

11 shall I not, as I have done to Samaria and her idols, so do to Jerusalem and her idols?ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?

12 Therefore it shall happen that, when the Lord has performed his whole work on Mount Zion and on Jerusalem, I will punish the fruit of the stout heart of the king of Assyria, and the glory of his high looks.ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

13 For he has said, By the strength of my hand I have done it, and by my wisdom; for I have understanding: and I have removed the bounds of the peoples, and have robbed their treasures, and like a valiant man I have brought down those who sit [on thrones]:ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

14 and my hand has found as a nest the riches of the peoples; and as one gathers eggs that are forsaken, have I gathered all the earth: and there was none that moved the wing, or that opened the mouth, or chirped.ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.

15 Shall the axe boast itself against him who hews therewith? Shall the saw magnify itself against him who wields it? as if a rod should wield those who lift it up, [or] as if a staff should lift up [him who is] not wood.ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.

16 Therefore will the Lord, Yahweh of Hosts, send among his fat ones leanness; and under his glory there shall be kindled a burning like the burning of fire.ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

17 The light of Israel will be for a fire, and his Holy One for a flame; and it will burn and devour his thorns and his briers in one day.ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;

18 He will consume the glory of his forest, and of his fruitful field, both soul and body: and it shall be as when a standard-bearer faints.ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.

19 The remnant of the trees of his forest shall be few, so that a child may write them.ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.

20 It shall come to pass in that day, that the remnant of Israel, and those who are escaped of the house of Jacob, shall no more again lean on him who struck them, but shall lean on Yahweh, the Holy One of Israel, in truth.ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.

21 A remnant shall return, [even] the remnant of Jacob, to the mighty God.ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.

22 For though your people, Israel, be as the sand of the sea, [only] a remnant of them shall return: a destruction [is] determined, overflowing with righteousness.ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.

23 For a full end, and that determined, will the Lord, Yahweh of Hosts, make in the midst of all the earth.ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.

24 Therefore thus says the Lord, Yahweh of Hosts, my people who dwell in Zion, don't be afraid of the Assyrian, though he strike you with the rod, and lift up his staff against you, after the manner of Egypt.ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

25 For yet a very little while, and the indignation [against you] shall be accomplished, and my anger [shall be directed] to his destruction.ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.

26 Yahweh of Hosts will stir up against him a scourge, as in the slaughter of Midian at the rock of Oreb: and his rod will be over the sea, and he will lift it up after the manner of Egypt.ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

27 It shall happen in that day, that his burden shall depart from off your shoulder, and his yoke from off your neck, and the yoke shall be destroyed by reason of fatness.ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.

28 He is come to Aiath, he is passed through Migron; at Michmash he lays up his baggage;ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.

29 they are gone over the pass; they have taken up their lodging at Geba; Ramah trembles; Gibeah of Saul is fled.ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.

30 Cry aloud with your voice, daughter of Gallim! listen, Laishah! You poor Anathoth!ಓ ಗಲ್ಲೀಮ್‌ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.

31 Madmenah is a fugitive; the inhabitants of Gebim flee for safety.ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.

32 This very day shall he halt at Nob: he shakes his hand at the mountain of the daughter of Zion, the hill of Jerusalem.ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್‌ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.

33 Behold, the Lord, Yahweh of Hosts, will lop the boughs with terror: and the high of stature shall be hewn down, and the lofty shall be brought low.ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.

34 He will cut down the thickets of the forest with iron, and Lebanon shall fall by a mighty one.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.

Kannada Bible